Belagavi: ಖಾನಾಪುರದ ಹಲಶಿಯಲ್ಲಿ ಗುಂಡಿನ ದಾಳಿಗೆ ಯುವಕ ಬ*ಲಿ
Team Udayavani, Nov 11, 2024, 9:34 AM IST
ಬೆಳಗಾವಿ: ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಸೋಮವಾರ (ನ.11ರಂದು) ಬೆಳಗಿನ ಜಾವ ಯುವಕನೋರ್ವ ಗುಂಡಿನ ದಾಳಿಗೆ ಬಲಿಯಾಗಿದ್ದು ಕೊಲೆಯೋ ಅಥವಾ ಆಕಸ್ಮಿಕ ಸಾವೋ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.
ಹಲಶಿ ಗ್ರಾಮದ ಅಲ್ತಾಫ್ ಮಕಾನದಾರ(30) ಎಂಬ ಯುವಕ ಬಂದೂಕಿನ ಗುಂಡಿಗೆ ಬಲಿಯಾಗಿದ್ದಾನೆ. ಮೃತದೇಹವನ್ನು ಈತನ ಮನೆಗೆ ತೆಗೆದುಕೊಂಡು ಹೋಗಿರುವುದು ಸಂಶಯಕ್ಕೆ ಕಾರಣವಾಗಿದ್ದು ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ಆರಂಭಿಸಿದ್ದಾರೆ.
ಅಲ್ತಾಫ್ ಕೆಲವು ಜನರೊಂದಿಗೆ ಮರಳು ತೆಗೆಯಲು ಹೋಗಿದ್ದನು. ಈ ವೇಳೆ ಅಲ್ತಾಫನಿಗೆ ಗುಂಡು ತಗುಲಿದೆ. ಗುಂಡಿನ ದಾಳಿಗೆ ಅಲ್ತಾಫ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಅಪರಿಚಿತರು ಹಾರಿಸಿದ ಗುಂಡಿಗೆ ಅಲ್ತಾಫ್ ಮೃತಪಟ್ಟಿರಬಹುದು ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಹೆಚ್ಚುವರಿ ಪೊಲೀಸರು ವರಿಷ್ಠಾಧಿಕಾರಿ ಶೃತಿ, ರವಿ ನಾಯಕ, ನಂದಗಡ ಸಿಪಿಐ ಎಸ್.ಸಿ. ಪಾಟೀಲ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.