ಬೀಜ-ಕೃಷಿ ಪರಿಕರ ವ್ಯವಸ್ಥೆ ಮಾಡಿಕೊಳ್ಳಿ


Team Udayavani, May 16, 2020, 1:00 PM IST

ಬೀಜ-ಕೃಷಿ ಪರಿಕರ ವ್ಯವಸ್ಥೆ ಮಾಡಿಕೊಳ್ಳಿ

ಸಾಂದರ್ಭಿಕ ಚಿತ್ರ

ಬೆಳಗಾವಿ: ಮುಂಗಾರು ಹಂಗಾಮಿಗೆ ರಿಯಾಯತಿ ಅಡಿಯಲ್ಲಿ ಬಿತ್ತನೆ ಬೀಜ ಮತ್ತು ಕೃಷಿ ಪರಿಕರ ವಿತರಿಸಲು ಮುಂಚಿತವಾಗಿ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಕೃಷಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ .

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಭತ್ತ, ಸೋಯಾಬೀನ್‌, ಗೋವಿನ ಜೋಳ ಹಾಗೂ ಇತರೆ ಅವಶ್ಯಕ ಬೀಜ, ಕೃಷಿ ಪರಿಕರ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಿವಿಧ ರೈತ ಸಂಪರ್ಕ ಕೇಂದ್ರದ ಮೂಲಕ ಅಲ್ಲದೆ ಹೆಚ್ಚುವರಿಯಾಗಿ ಪಿ.ಕೆ.ಪಿ.ಎಸ್‌ ಸಂಘದ ಮೂಲಕ ವಿತರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ರೈತರು ತಮ್ಮ ಅವಶ್ಯಕ ದಾಖಲೆಗಳನ್ನು ಒದಗಿಸಿ ಬೀಜ ಪಡೆಯಬಹುದಾಗಿದೆ. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಮೇ ಅಂತ್ಯಕ್ಕೆ ಬಿತ್ತನೆ ಪ್ರಾರಂಭವಾಗುತ್ತಿದ್ದು ಅದಕ್ಕೆ ಪೂರಕವಾಗಿ ಭತ್ತ, ಸೋಯಾಬೀನ, ಕಬ್ಬು, ಗೋವಿನ ಜೋಳ ಮೊದಲಾದ ಬೀಜಗಳ ದಾಸ್ತಾನು ಪ್ರಾರಂಭಿಸಲಾಗಿದೆ. ರೈತರು ತಾವು ಬಿತ್ತುವ ಪೂರ್ವ ತಮ್ಮ ಹಂತದಲ್ಲಿ ಮೊಳಕೆ ಪ್ರಮಾಣ ಪರೀಕ್ಷಿಸಿ ಬಿತ್ತನೆ ಕೈಗೊಳ್ಳಲು ಕೃಷಿ ಇಲಾಖೆಯು ಈಗಾಗಲೇ ರೈತರಿಗೆ ಸೂಚನೆ ನೀಡುತ್ತಿದೆ ಎಂದು ಅವರು ಹೇಳಿದ್ದಾರೆ.

ಉತ್ತಮ ಗುಣಮಟ್ಟದ ಬೀಜದ ಜೊತೆಗೆ ಸಹಕಾರಿ ಸಂಘಗಳು ಹಾಗೂ ಖಾಸಗಿ ಮಾರಾಟಗಾರರ ಮೂಲಕ ರಸಗೊಬ್ಬರ ವ್ಯವಸ್ಥೆ ಮಾಡಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ.

ಮುಂಜಾಗ್ರತೆ ವಹಿಸಲು ಮನವಿ: ಮುಂಗಾರು ಹಂಗಾಮಿನ ಸಿದ್ಧತಾ ಕಾರ್ಯಗಳು ಪ್ರಾರಂಭವಾಗಿದ್ದು, ರೈತರು ಕೃಷಿ ಪರಿಕರ, ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಖರೀದಿಸುವಾಗ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಕೃಷಿ ಪರಿಕರಗಳನ್ನು ಖರೀದಿಸುವಾಗ ಅಧಿಕೃತ ಮಾರಾಟಗಾರರಿಂದಲೇ ಖರೀದಿಸಿ ರಸೀದಿ ಪಡೆಯಬೇಕು. ಹಾಗೂ ರಸೀದಿಗಳಲ್ಲಿ ಲಾಟ್‌/ಬ್ಯಾಚ್‌ ನಂಬರ ಮತ್ತು ರೈತರ ಸಹಿ ಹಾಗೂ ಮಾರಾಟಗಾರರ ಸಹಿ ಇರುವುದನ್ನು ಖಚಿತ ಪಡಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಪಡೆದ ರಸೀದಿಗಳು, ಬೀಜದ ಚೀಲ, ಸ್ವಲ್ಪ ಬೀಜಗಳನ್ನು ಬೆಳೆ ಕಟಾವಿನವರೆಗೆ ಸುರಕ್ಷಿತವಾಗಿ ಕಾಯ್ದಿರಿಸಬೇಕು. ಬೀಜದ ಚೀಲದ ಮೇಲೆ ನಮೂದಿಸಿದ ಉತ್ಪಾದನಾ ದಿನಾಂಕ ಮತ್ತು ಅವದಿ ಮೀರುವ ದಿನಾಂಕಗಳನ್ನು ಗಮನಿಸಬೇಕು. ರಸಗೊಬ್ಬರದ ಚೀಲದ ಮೇಲೆ ನಮೂದಿಸಿರುವ ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆ ನೀಡಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಜಿಲ್ಲೆಯ ಯಾವುದೇ ಭಾಗದಲ್ಲಿ ಕೃಷಿ ಪರಿಕರಗಳನ್ನು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರೆ, ಸಂಬಂಧಪಟ್ಟ ಕೃಷಿ ಅಧಿಕಾರಿಗಳು, ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬೇಕು. ಇದಲ್ಲದೆ ಜಾರಿದಳದ ಸಹಾಯಕ ಕೃಷಿ ನಿರ್ದೇಶಕರಾದ ಆರ್‌.ಬಿ.ಪಾಟೀಲ ಮೊ.ಸಂಖ್ಯೆ.:-8277930142, ಆರ್‌.ಬಿ.ನಾಯ್ಕರ ಮೊ. ಸಂಖ್ಯೆ.:-8277934161 ಹಾಗೂ ಸಹಾಯಕ ಕೃಷಿ ನಿರ್ದೇಶಕ ಸಿ.ಆಯ್‌.ಹೂಗಾರ ಮೊ.ಸಂಖ್ಯೆ.: 8277934049 ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suvarna-obama

Belagavi Session: ಬರಾಕ್‌ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

1

Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

1

Puttur: ತಮ್ಮನ ಹ*ತ್ಯೆ ಆರೋಪಿಗೆ ಜಾಮೀನು

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.