ಬೆಳಗಾವಿ: ಭಾರೀ ಮಳೆಗೆ ಹಬ್ಬಾನಟ್ಟಿ ಆಂಜನೇಯ ದೇವಸ್ಥಾನ ಸಂಪೂರ್ಣ ಜಲಾವೃತ
Team Udayavani, Jun 19, 2021, 11:31 AM IST
ಬೆಳಗಾವಿ: ಜಿಲ್ಲೆಯಲ್ಲಿ ಹಾಗೂ ನೆರೆಯ ಮಹಾರಾಷ್ಟ್ರದಲ್ಲಿ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮಲಪ್ರಭಾ ಹಾಗೂ ಹಿಡಕಲ್ ಜಲಾಶಯಗಳ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.
ಖಾನಾಪುರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ತಾಲೂಕಿನ ಹಬ್ಬಾನಟ್ಟಿ ಬಳಿ ಇರುವ ಆಂಜನೇಯ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ.
ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬರುತ್ತಿರುವದರಿಂದ ಮಲಪ್ರಭಾ ಜಲಾಶಯದ ನೀರಿನ ಮಟ್ಟದಲ್ಲಿ ಮೂರು ಅಡಿಗಳಷ್ಟು ಏರಿಕೆಯಾಗಿದೆ. ಜಲಾಶಯಕ್ಕೆ ಈಗ 17 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಒಟ್ಟು 2079 ಅಡಿ ಸಾಮಥ್ರ್ಯದ ಸಾಮರ್ಥ್ಯದ ಜಲಾಶಯದಲ್ಲಿ ಈಗ 2053 ಅಡಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ:ಜಮ್ಮು-ಕಾಶ್ಮೀರ: ಜೂ.24ಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ
ನೆರೆಯ ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಘಟಪ್ರಭಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬರಲಾರಂಭಿಸಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದಾಖಲಾದ ಅಂಕಿ ಅಂಶಗಳ ಪ್ರಕಾರ ನದಿಗೆ 39 ಸಾವಿರ ಕ್ಯೂಸೆಕ್ಸ್ ನೀರು ಬರುತ್ತಿದೆ. ಇದರಿಂದಾಗಿ ಹಿಡಕಲ್ ಜಲಾಶಯದಲ್ಲಿ ಒಂದೇ ದಿನದಲ್ಲಿ 10 ಅಡಿಗಳಷ್ಟು ಏರಿಕೆಯಾಗಿದೆ. ಒಟ್ಟು 2175 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2111 ಅಡಿ ನೀರು ಸಂಗ್ರಹವಾಗಿದೆ. ನೀರಿನ ಮಟ್ಟದಲ್ಲಿ ಒಂದೇ ಸಮನೆ ಏರಿಕೆಯಾಗುತ್ತಿರುವದರಿಂದ ನದಿ ಪಾತ್ರದ ಹಳ್ಳಿಗಳ ಜನರಿಗೆ ಎಚ್ಚರಿಕೆ ನೀಡಲಾಗಿದೆ
ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ಕೃಷ್ಣಾ, ವೇದಗಂಗಾ ಹಾಗೂ ದೂಧ್ ಗಂಗಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ. ಇದರಿಂದಾಗಿ ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನಲ್ಲಿ ಏಳು ಸೇತುವೆಗಳು ನೀರಿನಲ್ಲಿ ಮುಳುಗಿ ಸಂಪರ್ಕ ಕಡಿತಗೊಂಡಿದೆ. ಮಹಾರಾಷ್ಟ್ರ ಭಾಗದಿಂದ ಕೃಷ್ಣಾ ನದಿಗೆ ಈಗ 1.18 ಲಕ್ಷ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.