ಗಡಿಯಲ್ಲಿ ಜಲಪ್ರಳಯ; ಜೀವನ ಅಯೋಮಯ
Team Udayavani, Aug 7, 2019, 10:35 AM IST
ರಾಯಬಾಗ: ತಾಲೂಕಿನ ಹಳೆದಿಗ್ಗೇವಾಡಿ ಗ್ರಾಮದಲ್ಲಿ ಪ್ರವಾಹದಿಂದ ಸುರಕ್ಷಿತ ಸ್ಥಳಕ್ಕೆ ತೆರಳಿದ ತೋಟಪಟ್ಟಿ ಜನರು.
ಬೆಳಗಾವಿ: ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಗಡಿನಾಡಲ್ಲಿ ಜಲಪ್ರಳಯದ ಸ್ಥಿತಿ ನಿರ್ಮಾಣ ಮಾಡಿದೆ.
ನದಿಗಳ ಅಬ್ಬರ ಪರಾಕಾಷ್ಠೆ ಮುಟ್ಟಿದೆ. ರಸ್ತೆಗಳು ನದಿಗಳಾಗಿ ಬದಲಾಗಿವೆ. ಸಾರಿಗೆ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಲಾಶಯಗಳು ಭೋರ್ಗರೆಯುತ್ತಿವೆ. ನದಿ ಪಾತ್ರದ ಜನರಲ್ಲಿ ಕ್ಷಣಕ್ಷಣಕ್ಕೂ ಆತಂಕ ಗಂಭೀರವಾಗುತ್ತಿದೆ.
ಜಿಲ್ಲೆಯಲ್ಲಿ ಹರಿಯುವ ಕೃಷ್ಣಾ, ಘಟಪ್ರಭಾ, ವೇದಗಂಗಾ, ದೂಧಗಂಗಾ, ಹಿರಣ್ಯಕೇಶಿ, ಮಲಪ್ರಭಾ, ಮಾರ್ಕಂಡೇಯ ನದಿಗಳ ಅಬ್ಬರದಿಂದ ಮಠ ಮಂದಿರಗಳು ಜಲದಿಗ್ಬಂಧನಕ್ಕೊಳಗಾಗಿವೆ. ಹೊಲ ಗದ್ದೆಗಳು ನದಿಗಳಂತೆ ಗೋಚರಿಸುತ್ತಿವೆ. ರಸ್ತೆಗಳು ಕೆರೆಗಳಂತೆ ಕಾಣುತ್ತಿವೆ. ಗಟಾರು ಯಾವುದು. ರಸ್ತೆ ಯಾವುದು ಎಂಬುದು ಗೊತ್ತಾಗದಷ್ಟು ನೀರು ಹರಿಯುತ್ತಿದೆ. ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ಅನೇಕ ಕಡೆ ತಗ್ಗುಪ್ರದೇಶಗಳಲ್ಲಿನ ಜನರು ರಾತ್ರಿಯಿಡೀ ನಿದ್ದೆಮಾಡದೆ ಮನೆಯಿಂದ ನೀರನ್ನು ಹೊರಗೆ ಹಾಕುವ ಕೆಲಸ ಮಾಡಿದ್ದಾರೆ.
ಸತತವಾಗಿ ಸುರಿಯುತ್ತಿರುವ ಮಳೆಯಿಂದ ನದಿಗಳ ಮಟ್ಟ ಗಣನೀಯವಾಗಿ ಹೆಚ್ಚಿದ್ದು ಚಿಕ್ಕೋಡಿ, ರಾಯಬಾಗ, ಅಥಣಿ, ಗೋಕಾಕ, ಹುಕ್ಕೇರಿ, ಖಾನಾಪುರ, ಕಾಗವಾಡ, ಮೂಡಲಗಿ ತಾಲೂಕುಗಳಲ್ಲಿ 30 ಸೇತುವೆಗಳು ನೀರಿನಲ್ಲಿ ಮುಳುಗಿ ಸಂಪರ್ಕ ಕಡಿತಗೊಂಡಿವೆ.
ಜಿಲ್ಲೆಯಲ್ಲಿ ಕಳೆದ ಆ.1 ರಿಂದ ಇದುವರೆಗೆ ಸತತ ಮಳೆಯಿಂದಾಗಿ ಸಾಕಷ್ಟು ಹಾನಿ ಸಂಭವಿಸಿದೆ. ಅಥಣಿ, ಕಾಗವಾಡ, ರಾಯಬಾಗ. ಚಿಕ್ಕೋಡಿ, ನಿಪ್ಪಾಣಿ, ಗೋಕಾಕ,. ಖಾನಾಪುರ, ಮೂಡಲಗಿ, ಹುಕ್ಕೇರಿ ತಾಲೂಕುಗಳಲ್ಲಿ 96 ಹಳ್ಳಿಗಳು ಪ್ರವಾಹ ಬಾಧಿತವಾಗಿವೆ.
ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಬೀಳುತ್ತಲೇ ಇದ್ದು ಎಲ್ಲ ಜಲಾಶಯಗಳು ಭರ್ತಿಯಾಗಿವೆ. ರಾಜಾಪುರ ಬ್ಯಾರೇಜ್‌ದಿಂದ 2,52,585 ಕ್ಯೂಸೆಕ್ ಹಾಗೂ ದೂಧಗಂಗಾ ನದಿಯಿಂದ 42,240 ಕ್ಯೂಸೆಕ್ ಸೇರಿದಂತೆ ಕೃಷ್ಣಾ ನದಿಗೆ ಈಗ ಒಟ್ಟು 2,94,825 ಕ್ಯೂಸೆಕ್ ನೀರು ಬರುತ್ತಿದೆ. ಮುಖ್ಯವಾಗಿ 105 ಟಿಎಂಸಿ ಸಾಮರ್ಥ್ಯದ ಕೊಯ್ನಾ ಜಲಾಶಯ ಬಹುತೇಕ ಭರ್ತಿಯಾಗಿದ್ದು ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರನ್ನು ಹೊರಬಿಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೆ 599 ಮನೆಗಳು ಭಾಗಶಃ ಹಾನಿಗೊಳಗಾಗಿದ್ದರೆ ಒಂದು ಮನೆ ಸಂಪೂರ್ಣ ಕುಸಿದಿದೆ. ಆರು ಜಾನುವಾರುಗಳು ಸಾವನ್ನಪ್ಪಿವೆ. 80,590 ಹೆಕ್ಟೇರ್ ಪ್ರದೇಶದ ಬೆಳೆಗಳು ಹಾನಿಗೊಳಗಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.