ಸಮಸ್ಯೆಗೆ ಸ್ಪಂದಿಸಲು ಹೆಸ್ಕಾಂ ಸಿದ್ಧ: ಶೇಖರ
•ಗ್ರಾಹಕರ ಕುಂದು-ಕೊರತೆ, ಸಂವಾದ ಸಭೆ•ಅಪಾಯದ ವಿದ್ಯುತ್ ಕಂಬ ತೆರವಿಗೆ ಮನವಿ
Team Udayavani, Jul 21, 2019, 11:05 AM IST
ಅಥಣಿ: ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ ನಡೆಯಿತು.
ಅಥಣಿ: ಗ್ರಾಹಕ ಮತ್ತು ರೈತರ ಕುಂದು-ಕೊರತೆಗಳನ್ನು ಸರಿ ಪಡಿಸುವುದು ಹೆಸ್ಕಾಂನ ಕರ್ತವ್ಯವಾಗಿದ್ದು, ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸಿದ್ಧ ಎಂದು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯ ಕಾರ್ಯನಿರ್ವಾಹಕ ಇಂಜಿನಿಯರ್ ಶೇಖರ ಬಹುರೂಪಿ ಹೇಳಿದರು.
ಹುಬ್ಬಳ್ಳಿ ವಿದ್ಯತ್ ಸರಬರಾಜು ಕಂಪನಿಯ ಕಾರ್ಯ ಮತ್ತು ಪಾಲನಾ ಅಥಣಿ ವಿಭಾಗದಲ್ಲಿ ಗ್ರಾಹಕರ ಕುಂದು-ಕೊರತೆ ಮತ್ತು ಸಂವಾದ ಸಭೆಯಲ್ಲಿ ಅವರು ಮಾತನಾಡಿದರು.
ಹೆಸ್ಕಾಂ ನಿಗಮದಿಂದ ವಿದ್ಯುತಿನ ಕುರಿತು ಮತ್ತು ಇದಕ್ಕೆ ಸಂಬಂಧಿಸಿದಂತೆ ಇನ್ನಿತರ ಯಾವುದೇ ಕೆಲಸಗಳಿಗೆ ನಿಗಮ ಮತ್ತು ಅಧಿಕಾರಿಗಳು ಗ್ರಾಹಕರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಮಾಡುತ್ತಾ ಬಂದಿದ್ದಾರೆ. ಮುಂದೆಯೂ ಮಾಡುತ್ತಾರೆ. ನಿಗಮದವರಿಗೆ ಸಾರ್ವಜನಿಕರ ಮತ್ತು ರೈತರ ಸಹಕಾರ ಅಗತ್ಯವಾಗಿದೆ ಎಂದರು.
ಗ್ರಾಹಕರು ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ನಮ್ಮ ಬಳಿ ತೆಗೆದುಕೊಂಡು ಬಂದರೆ ಅಂಥವರ ಸಮಸ್ಯೆಗೆ ತಕ್ಷಣವೇ ಸ್ಪಂದಿಸುವುದರ ಜತೆಗೆ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಳ್ಳ ಬಹುದಾಗಿದೆ ಎಂದು ತಿಳಿಸಿದರು.
ವಿದ್ಯುತ್ ಕಂಬಗಳಿಗೆ ಅಳವಡಿಸಿದ ಹಳೆ ವಾಯರ್‌ಗಳನ್ನು ಬದಲಾವಣೆ ಮಾಡಬೇಕು. ಮಾರ್ಗದಾಳಗಳು ಸ್ಥಾನಿಕ ಸ್ಥಳದಲ್ಲಿ ಇರುವಂತಾಗಬೇಕು. ಅಪಾಯ ಹಾಗೂ ಮುರಿಯುವ ಸ್ಥಿತಿಯಲ್ಲಿರುವ ವಿದ್ಯುತ್ ಕಂಬಗಳನ್ನು ತಕ್ಷಣ ಬದಲಾವಣೆ ಮಾಡಬೇಕು. ಪಟ್ಟಣದಲ್ಲಿರುವ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವಂತೆ ಸಭೆಯಲ್ಲಿದ್ದ ರೈತ ಮುಖಂಡರು ಒತ್ತಾಯಿಸಿದರು.
ಈ ವೇಳೆ ಅಧಿಕಾರಿಗಳಾದ ಎಸ್.ಎ. ಪಾರ್ಥನಹಳ್ಳಿ, ಎನ್.ಬಿ. ನೇಮನ್ನವರ, ವಿ.ಎ. ಘನಿ, ಟಕ್ಕನ್ನರ, ಮಲಕ್ಕಪ್ಪ, ಪಾರೀಶ ಶಿವಣ್ಣವರ, ಎಂ.ಸಿ. ತಾಂಬೂಳಿ, ರಾಜು ಜಂಬಗಿ ಸೇರಿದಂತೆ ಅನೇಕ ರೈತರು ಮತ್ತು ಗ್ರಾಹಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.