ಹಿರಣ್ಯಕೇಶಿ ಹಂಗಾಮಿಗೆ ಚಾಲನೆ; 14 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ
ಆರ್ಥಿಕ ಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಸ್ಥಾಪನೆಗೊಂಡಿರುವ ಕಾರ್ಖಾನೆಗೆ ರೈತರೇ ಜೀವಾಳ
Team Udayavani, Oct 12, 2022, 6:24 PM IST
ಹುಕ್ಕೇರಿ: ಸುಮಾರು 7 ದಶಕಗಳ ಹಿಂದೆ ರೈತರ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ ದೇಶದಲ್ಲಿ ಪ್ರಥಮವಾಗಿ ಕಾರ್ಖಾನೆಗಳ ಪ್ರಾರಂಭದ ಹಂತದಲ್ಲಿ ದಿ| ಅಪ್ಪಣಗೌಡ ಪಾಟೀಲರ ನೇತೃತ್ವದಲ್ಲಿ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯು ಸ್ಥಾಪನೆಯಾಗಿ ರೈತರ ಬಾಳಿಗೆ ವರದಾನವಾಗಿರುವುದು ನಮ್ಮೆಲ್ಲರ ಭಾಗ್ಯ ಎಂದು ನಿಡಸೋಸಿ ಸಿದ್ದ ಸಂಸ್ಥಾನಮಠದ ಪಂಚಮಶಿವಲಿಂಗೇಶ್ವರ ಸ್ವಾಮಿಗಳು ಹೇಳಿದರು.
ಮಂಗಳವಾರ ಸಂಕೇಶ್ವರದ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯ 62ನೇ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ನಮ್ಮೆಲ್ಲರ ಆರ್ಥಿಕ ಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಸ್ಥಾಪನೆಗೊಂಡಿರುವ ಕಾರ್ಖಾನೆಗೆ ರೈತರೇ ಜೀವಾಳ. ಕಾರ್ಖಾನೆ ಉಳಿಸಿ ಬೆಳೆಸುವದು ಎಲ್ಲರ ಕರ್ತವ್ಯ ಹಾಗೂ ಜವಾಬ್ದಾರಿ ಎಂದರು.
ಮಾಜಿ ಸಂಸದ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ, ಕಾರ್ಖಾನೆ ಚೇರಮನ್ ನಿಖೀಲ್ ಕತ್ತಿ, ಉಪಾಧ್ಯಕ್ಷ ಶ್ರೀಶೈಲಪ್ಪ ಮಗದುಮ್ಮ, ಸುರೇಶ ಬೆಲ್ಲದ, ಬಸವರಾಜ ಕಲ್ಲಟ್ಟಿ, ಪ್ರಭುದೇವ ಪಾಟೀಲ, ಅಶೋಕ ಪಟ್ಟಣಶೆಟ್ಟಿ, ಬಸಪ್ಪ ಮರಡಿ, ಸುರೇಂದ್ರ ದೊಡ್ಡಲಿಂಗನವರ, ಶಿವಪುತ್ರ ಶಿರಕೋಳಿ, ಸಂಗಮ ಕಾರ್ಖಾನೆ ಅಧ್ಯಕ್ಷ ರಾಜೇಂದ್ರ ಪಾಟೀಲ, ಜಿ.ಪಂ ಮಾಜಿ ಸದಸ್ಯ ಪವನ ಕತ್ತಿ, ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ ಕಲಗೌಡ ಪಾಟೀಲ, ಪುರಸಭೆ
ಅಧ್ಯಕ್ಷ ಎ.ಕೆ. ಪಾಟೀಲ, ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಸತ್ಯೆಪ್ಪಾ ನಾಯಿಕ, ಮುಖಂಡರಾದ ರಮೇಶ ಕುಲಕರ್ಣಿ, ಅಮರ ನಲವಡೆ, ಶ್ರೀಕಾಂತ ಹತನೂರೆ, ಗಜಾನನ ಕ್ವಳ್ಳಿ, ಅಧೀಕ್ಷಕ ಎಸ್.ಎಸ್.ನಾಶಿಪುಡಿ, ಜಯಸಿಂಗ ಸನದಿ ಮತ್ತಿತರರು ಉಪಸ್ಥಿತರಿದ್ದರು.
ನಿರ್ದೇಶಕ ಅಶೋಕ ಪಟ್ಟಣಶೆಟ್ಟಿ ಸ್ವಾಗತಿಸಿದರು. ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್.ಕರ್ಕಿನಾಯಿಕ ನಿರೂಪಿಸಿದರು. ಬಾಬಾಸಾಹೇಬ ಅರಬೋಳೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.