ನಾನು ಮುಖ್ಯಮಂತ್ರಿ ಆಕಾಂಕ್ಷಿಯಲ್ಲ: ನಿರಾಣಿ
Team Udayavani, Nov 4, 2019, 8:26 PM IST
ಜಮಖಂಡಿ: ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ. ಹೈಕಮಾಂಡ್ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ ಎಂದು ಬೀಳಗಿ ಶಾಸಕ ಮುರಗೇಶ ನಿರಾಣಿ ಹೇಳಿದರು.
ಆಲಬಾಳ-ಹಿಪ್ಪರಗಿಯ ಸಾಯಿಪ್ರಿಯಾ ಸಕ್ಕರೆ ಕಾರಖಾನೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಸ್ಥಾನಮಾನ ಶಾಶ್ವತವಲ್ಲ. ನಾನು ಯಾವುದನ್ನೂ ನಿರೀಕ್ಷೆ ಮಾಡಿಲ್ಲ. ಅವಕಾಶ ಬಂದರೆ ಸಮರ್ಪಕವಾಗಿ ನಿಭಾಯಿಸುವ ಶಕ್ತಿಯನ್ನು ದೇವರು, ಈ ಭಾಗದ ಜನ ನೀಡಿದ್ದಾರೆ. 15 ಕ್ಷೇತ್ರಗಳ ಉಪಚುನಾವಣೆಯಲ್ಲಿ 8ರಿಂದ 10 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ.
ಅನರ್ಹ ಶಾಸಕರ ಸ್ಪರ್ಧೆ, ಟಿಕೆಟ್ ಹಂಚಿಕೆ ಪಕ್ಷದ ವರಿಷ್ಠರಿಗೆ ಬಿಟ್ಟ ವಿಷಯ. ಉಪ ಚುನಾವಣೆಯಲ್ಲಿ ಪಕ್ಷ ವಹಿಸುವ ಜವಾಬ್ದಾರಿ ನಿಭಾಯಿಸುತ್ತೇನೆ. 210 ಮೆಗಾವ್ಯಾಟ್ ವಿದ್ಯುತ್, ನಿತ್ಯ 8 ಲೀಟರ್ ಇಥಿನಾಲ್, 400 ಟನ್ ಕಾರ್ಬನ್ ಡೈಆಕ್ಸೆಡ್ ಉತ್ಪಾದನೆ ಸಹಿತ ಮುಂದಿನ ದಿನಗಳಲ್ಲಿ ಬಯೋಗ್ಯಾಸ್ ಉತ್ಪಾದನೆ ಘಟಕ ಸ್ಥಾಪಿಸುವುದರ ಮೂಲಕ ಮನೆ ಮನೆಗಳಿಗೆ ಪೈಪ್‌ಲೈನ್‌ನಿಂದ ಗ್ಯಾಸ್ ವಿತರಿಸುವ ಯೋಜನೆ ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ. ಅಂದಾಜು 2 ಲಕ್ಷ ಟನ್ ಗ್ಯಾಸ್ ಉತ್ಪಾದನೆ ಆಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.