ಯುದ್ಧ ವಿಮಾನಗಳ ಅವಘಡ: ಬೆಳಗಾವಿಯ ಪೈಲಟ್ ಹುತಾತ್ಮ
Team Udayavani, Jan 29, 2023, 6:30 AM IST
ಬೆಳಗಾವಿ/ಹೊಸದಿಲ್ಲಿ: ಮಧ್ಯಪ್ರದೇಶದ ಗ್ವಾಲಿಯರ್ ಸಮೀಪ ಸುಖೋಯ್ 30 ಎಂಕೆಐ ಹಾಗೂ ಮಿರಾಜ್ 2000 ಯುದ್ಧ ವಿಮಾನಗಳ ನಡುವೆ ಶನಿವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಬೆಳಗಾವಿಯ ಪೈಲಟ್ ಹುತಾತ್ಮರಾಗಿದ್ದಾರೆ.
ಬೆಳಗಾವಿಯ ಗಣೇಶಪುರದ ಹನುಮಂತರಾವ್ ಸಾರಥಿ (34) ಹುತಾತ್ಮರಾದ ವಿಂಗ್ ಕಮಾಂಡರ್. ಅವರಿಗೆ ತಂದೆ, ತಾಯಿ, ಪತ್ನಿ, ಪುತ್ರ, ಪುತ್ರಿ ಇದ್ದಾರೆ.
ಹನುಮಂತರಾವ್ ಸಾರಥಿ 2009ರಿಂದ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರ ತಂದೆ ರೇವಣಸಿದ್ದಪ್ಪ ಸೇನೆಯಲ್ಲಿ ಕ್ಯಾಪ್ಟನ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ. ಸಹೋದರ ಪ್ರವೀಣ ಕೂಡ ಭಾರತೀಯ ವಾಯುಪಡೆಯಲ್ಲಿ ಗ್ರೂಪ್ ಕ್ಯಾಪ್ಟನ್ ಆಗಿದ್ದಾರೆ.
ನಡೆದುದೇನು?
ಶನಿವಾರ ಬೆಳಗ್ಗೆ 5.30ರ ವೇಳೆಗೆ ಎರಡೂ ವಿಮಾನಗಳು ದೈನಂದಿನ ತರಬೇತಿ ಹಾರಾಟಕ್ಕೆಂದು ಗ್ವಾಲಿಯರ್‌ನ ವಾಯುನೆಲೆಯಿಂದ ಟೇಕ್‌ಆಫ್ ಆಗಿದ್ದವು. ವಿಂಗ್ ಕಮಾಂಡರ್ ಹನುಮಂತ ರಾವ್ ಅವರು ಮಿರಾಜ್ 2000 ವಿಮಾನವನ್ನು ಮುನ್ನಡೆಸುತ್ತಿದ್ದರೆ ಸುಖೋಯ್‌ನಲ್ಲಿ ಇಬ್ಬರು ಪೈಲಟ್‌ಗಳಿದ್ದರು. ಏಕಾಏಕಿ ಎರಡೂ ವಿಮಾನಗಳು ಪತನಗೊಂಡಿದ್ದು, ಸುಖೋಯ್‌ನಲ್ಲಿದ್ದ ಇಬ್ಬರು ಸುರಕ್ಷಿತವಾಗಿ ಹೊರಗೆ ಹಾರಿದ ಕಾರಣ ಸಣ್ಣಪುಟ್ಟ ಗಾಯಗಳೊಂದಿಗೆ ಬದುಕುಳಿದಿದ್ದಾರೆ.
ಮಿರಾಜ್‌ನಲ್ಲಿದ್ದ ಹನುಮಂತ ರಾವ್ ಕೊನೆಯುಸಿರೆಳೆದಿದ್ದಾರೆ. ಒಂದು ವಿಮಾನದ ಅವಶೇಷಗಳು ಮಧ್ಯಪ್ರದೇಶದ ಮೊರೆನಾದಲ್ಲಿ ಬಿದ್ದಿದ್ದು, ಮತ್ತೂಂದು ವಿಮಾನದ ಅವಶೇಷ 100 ಕಿ.ಮೀ. ದೂರದಲ್ಲಿ ರಾಜಸ್ಥಾನದ ಭರತ್‌ಪುರದಲ್ಲಿ ಪತ್ತೆಯಾಗಿವೆ.
ರಷ್ಯಾ ನಿರ್ಮಿತ ಸುಖೋಯ್-30ಎಂಕೆಐ ಜೆಟ್ ಮತ್ತು ಫ್ರಾನ್ಸ್ ನಿರ್ಮಿತ ಮಿರಾಜ್-2000 ಯುದ್ಧ ವಿಮಾನಗಳು ಹಾರಾಟದ ವೇಳೆ ಪರಸ್ಪರ ಢಿಕ್ಕಿ ಹೊಡೆದು ಈ ದುರಂತ ಸಂಭವಿಸಿರಬಹುದು ಎಂದು ರಕ್ಷಣ ತಜ್ಞರು ಅಂದಾಜಿಸಿದ್ದಾರೆ. ಘಟನೆಗೆ ಕಾರಣವೇನು ಎಂಬ ಕುರಿತು ವಾಯುಪಡೆಯಿಂದ ಅಧಿಕೃತ ಮಾಹಿತಿ ಬಂದಿಲ್ಲ. ವಾಯುಪಡೆಯು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ. ವಿಂಗ್ ಕಮಾಂಡರ್ ಹನುಮಂತ ರಾವ್ ಅವರ ಸಾವಿಗೆ ರಕ್ಷಣ ಸಚಿವ ರಾಜನಾಥ್ ಸಿಂಗ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ.
ಇಂದು ಹುಟ್ಟೂರಿಗೆ ಪಾರ್ಥಿವ ಶರೀರ
ವಿಂಗ್ ಕಮಾಂಡರ್ ಹನುಮಂತರಾವ್ ಗ್ವಾಲಿಯರ್‌ನಲ್ಲೇ ನೆಲೆಸಿದ್ದರು. ಅವರ ಪಾರ್ಥಿವ ಶರೀರ ರವಿವಾರ ವಿಶೇಷ ವಿಮಾನದಲ್ಲಿ ಗಣೇಶಪುರಕ್ಕೆ ಬರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
India Cricket: ಸೀಮಿತ ಓವರ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್
Make America Great Again: ಅಮೆರಿಕದಲ್ಲಿ ಸ್ವದೇಶಿ vs ವಲಸಿಗರು ಜಟಾಪಟಿ
Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ
Udupi: ಇನ್‌ಸ್ಟಾಗ್ರಾಂ ಲಿಂಕ್ ಬಳಸಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.