Mudalagi:ಯುವಕರು ಗರಡಿ ಮನೆಗಳತ್ತ ಹೆಜ್ಜೆ ಹಾಕಿದ್ರೆ ಕುಸ್ತಿಯ ಗತವೈಭವ ಮತ್ತೆ ಮರುಕಳಿಸುತ್ತೆ
Team Udayavani, Dec 10, 2023, 3:10 PM IST
ಮೂಡಲಗಿ: ಯಾಂತ್ರಿಕ ಬದುಕು ಮತ್ತು ಆಧುನಿಕತೆಯ ಅಬ್ಬರದಲ್ಲಿ ವ್ಯಾಯಾಮ ಶಾಲೆ, ಗರಡಿ ಮನೆಗಳು ಅವಸ್ಥಾನ ಅಂಚಿಗೆ ತಲುಪಿವೆ. ಅವುಗಳನ್ನು ಮರು ಸ್ಥಾಪಿಸಿ ಯುವಕರನ್ನು ಪ್ರೇರಣೆಗೊಳಿಸುವ ಮೂಲಕ ಪ್ರಾಚೀನ ಭಾರತದ ಕ್ರೀಡೆಗಳಾದ ಕುಸ್ತಿ, ಕಬ್ಬಡಿ ಆಟಗಳಿಗೆ ಆದ್ಯತೆ ನೀಡಬೇಕು. ಗತಕಾಲದ ವೈಭವ ಮತ್ತೆ ಮರುಕಳಿಸಿ ದೇಶಿಯ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಿ ಬೆಳೆಸಬೇಕಾದ ಅಗತ್ಯವಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.
ಡಿ. 10ರ ರವಿವಾರ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ಗರಡಿ ಮನೆ ಕಟ್ಟಡ ಪುನರ್ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಮೊದಲೆಲ್ಲ ಕುಸ್ತಿ ಮಾಡುವುದೆಂದರೆ ಪ್ರತಿಷ್ಠೆಯ ವಿಷಯವಾಗಿತ್ತು. ಗರಡಿ ಮನೆಗಳು ಕಟ್ಟುಮಸ್ತಾದ ದೇಹಾರ್ಡ್ಯತೆಗೆ ಯೋಗ್ಯ ಸ್ಥಳಗಳಾಗಿದ್ದವು. ಇದರಿಂದಾಗಿ ಆರೋಗ್ಯ ಉತ್ತಮವಾಗಿರುತ್ತಿತ್ತು. ವಿಪರ್ಯಾಸವೆಂದರೆ ಇಂದಿನ ಮಕ್ಕಳಿಗೆ ಗರಡಿ ಮನೆಗಳ ಮಹತ್ವ ತಿಳಿದಿಲ್ಲ. ಇಂದಿನ ಯುವಕರು ದುಶ್ಚಟಗಳಿಗೆ ಬಲಿಯಾಗಿ, ಮಾನಸಿಕ ಹಾಗೂ ದೈಹಿಕವಾಗಿ ದುರ್ಬಲರಾಗುತ್ತಿದ್ದಾರೆ. ಮತ್ತೆ ಅವರನ್ನು ಗರಡಿ ಮನೆಗಳತ್ತ ಸೆಳೆಯುವ ಮೂಲಕ ಕುಸ್ತಿಯ ಗತ ವೈಭವ ಮರುಕಳಿಸಲು ಗ್ರಾಮದ ಹಿರಿಯರು ಸಹಕರಿಸಬೇಕಾಗಿದೆ ಎಂದು ಕರೆ ನೀಡಿದರು.
ಹಿಂದಿನ ರಾಜ ಮಹಾರಾಜರ ಕಾಲದಲ್ಲಿ ಕುಸ್ತಿಗೆ ಭಾರೀ ಮಹತ್ವವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಜಾತ್ರೆಗಳಲ್ಲಿ ಮಾತ್ರ ನಾವು ಕುಸ್ತಿ ಆಟವನ್ನು ನೋಡುವಂತಾಗಿದೆ. ಭಾರತೀಯ ಇತಿಹಾಸ ಮತ್ತು ಸಂಸ್ಕೃತಿ ವೈಭವೀಕರಿಸಲು ಕುಸ್ತಿ, ಕಬಡ್ಡಿಯಂತಹ ದೇಶಿಯ ಆಟಗಳನ್ನು ಪ್ರೋತ್ಸಾಹಿಸಬೇಕಾಗಿದೆ ಎಂದ ಅವರು, ಈ ನಿಟ್ಟಿನಲ್ಲಿ ಕಲ್ಲೋಳಿ ಪಟ್ಟಣದಲ್ಲಿ ಗರಡಿ ಮನೆ ಕಟ್ಟಡಕ್ಕೆ ಪುನರ ನಿರ್ಮಾಣ ಕಾರ್ಯಕ್ಕೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಅನುದಾನ ನೀಡಲಾಗಿದ್ದು, ಪಟ್ಟಣದ ಯುವಜನತೆ ಗರಡಿ ಮನೆಗಳ ಸದುಪಯೋಗ ಪಡೆಸಿಕೊಳ್ಳಬೇಕೆಂದು ಕರೆ ನೀಡಿದರು.
ಪ್ರಮುಖರಾದ ಬಸವರಾಜ ಕಡಾಡಿ, ಶಂಕರ ಗೋರೋಶಿ, ಪ್ರಭು ಕಡಾಡಿ, ಹಣಮಂತ ಸಂಗಟಿ, ಶ್ರೀಶೈಲ ತುಪ್ಪದ, ಅಡಿವೆಪ್ಪ ಕುರಬೇಟ, ಶಿವಾನಂದ ಹೆಬ್ಬಾಳ, ಗುರುನಾಥ ಮದಭಾಂವಿ, ಪಂಚಣ್ಣ ಹೆಬ್ಬಾಳ, ಅಜೀತ ಚಿಕ್ಕೋಡಿ, ದಸಗೀರ ಕಮತನೂರ, ಸೋಮಲಿಂಗ ಹಡಗಿನಾಳ, ಸಿದ್ದಪ್ಪ ಗದಾಡಿ, ಸೇವಾ ಸಂಸ್ಥೆ ಅಧ್ಯಕ್ಷರಾದ ಪರಪ್ಪ ಗಿರೆಣ್ಣವರ, ಪಟ್ಟಣದ ಪೈಲವಾನರಾದ ಲಕ್ಷ್ಮಣ ಉಮರಾಣಿ, ಹಣಮಂತ ಮೆಚ್ಚನ್ನವರ, ಚಿಂತಾಮಣಿ ಗುದನ್ನವರ, ಬಸವರಾಜ ಕರಡಿಗುದ್ದಿ, ದಸ್ತಗೀರ ತಹಶೀಲ್ದಾರ, ನಾಗಪ್ಪ ಗಾಡಿವಡ್ಡರ, ಗುತ್ತಿಗೆದಾರ ಈರಣ್ಣ ಮುನ್ನೋಳಿಮಠ, ಗೋಕಾಕ ಕೆ.ಆರ್.ಡಿ.ಎಲ್. ಸಂಸ್ಥೆಯ ಸಿಬ್ಬಂದಿ ಮಂಜುನಾಥ ಕಮತೆ ಸೇರಿದಂತೆ ಗರಡಿ ಮನೆ ವಿದ್ಯಾರ್ಥಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.