ಜನರಿಂದ ಸಮಸ್ಯೆಯಾದರೆ ಫೋನ್ ಮಾಡಿ: ಡಿಸಿಎಂ
Team Udayavani, Apr 27, 2020, 4:53 PM IST
ಅಥಣಿ: ಉಪ-ಮುಖ್ಯಮಂತ್ರಿ ಲಕ್ಷ್ಮಣ ಸವದಿ ರವಿವಾರ ತಾಲೂಕಿನ ಹಲ್ಯಾಳ,ದರೂರ, ಸಂಕ್ರಟ್ಟಿ, ಶೇಗುಣಸಿ, ನದಿ-ಇಂಗಳಗಾಂವ, ತೀರ್ಥ, ಸಂಕ್ರಟ್ಟಿ, ಸಪ್ತಸಾಗರ, ಖವಟಕೋಪ್ಪ, ಚಿಕ್ಕೂಡ ಮುಂತಾದ ಗ್ರಾಮಗಳಿಗೆ ಭೇಟಿ ನೀಡಿ ಆಯಾ ಗ್ರಾಮ ಪಂಚಾಯತಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಮತ್ತು ಸ್ಥಳಿಯ ಜನಪ್ರತಿನಿಧಿಗಳ ಸಭೆ ಮಾಡಿದರು.
ಸಭೆಯಲ್ಲಿ ಡಿಸಿಎಂ ಸವದಿ ಆಶಾ- ಅಂಗನವಾಡಿ ಕಾರ್ಯಕರ್ತೆಯರ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿ, ಪಿಡಿಓ ಮತ್ತು ಇತರೆ ಸಿಬ್ಬಂದಿ ಸಮಸ್ಯೆಗಳನ್ನು ಆಲಿಸಿದರು. ಮತ್ತು ಸೋಂಕು ಹರಡದಂತೆ ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಸಾರ್ವಜನಿಕರಿಂದ ಸಮಸ್ಯೆಯಾದರೆ ಆಶಾ ಕಾರ್ಯಕರ್ತೆಯರು ಅಥವಾ ಯಾವುದೇ ಸಿಬ್ಬಂದಿ ತಕ್ಷಣ ನನಗೆ ದೂರವಾಣೆ ಕರೆ ಮಾಡಿ. ನಿಮ್ಮ ಹಿಂದೆ ಸರಕಾರ ಇದೆ ಎಂದು ಧೈರ್ಯ ಹೇಳಿದರು. ಕೋವಿಡ್ 19 ಸೋಂಕು ಹರಡದಂತೆ ಕೆಲಸ ಮಾಡುವ ಎಲ್ಲ ಸಿಬ್ಬಂದಿಗೆ ಅವರು ಅಭಿನಂದನೆ ಸಲ್ಲಿಸಿದರು.
ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಮಹೇಶ ಕುಮಠಳ್ಳಿ, ತಾ.ಪ. ಅಧಿಕಾರಿ ರವೀಂದ್ರ ಬಂಗಾರೆಪ್ಪನವರ, ತಹಶೀಲ್ದಾರ ದುಂಡಪ್ಪ ಕೋಮಾರ, ಸಿ,ಪಿ.ಐ ಶಂಕರಗೌಡ ಬಸವನಗೌಡರ, ಗ್ರೇಡ್ 2 ತಹಶೀಲ್ದಾರ ರಾಜು ಬುರ್ಲಿ, ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.