Belagavi: ಐದೇ ದಿನದಲ್ಲಿ 9 ಮಂದಿಗೆ ತಲಾ 20 ವರ್ಷ ಶಿಕ್ಷೆ; ನ್ಯಾಯಾಧೀಶರ ಮಹತ್ವದ ತೀರ್ಪು
ಬಾಲಕಿಯರ ಅತ್ಯಾಚಾರದ ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಧೀಶರು ಮಹತ್ವದ ತೀರ್ಪು
Team Udayavani, Sep 24, 2024, 9:27 AM IST
ಬೆಳಗಾವಿ: ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಕೇವಲ ಐದು ದಿನಗಳಲ್ಲಿ 9 ಜನ ಆರೋಪಿಗಳಿಗೆ ತಲಾ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸುವ ಮೂಲಕ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಶೇಷ ಶೀಘ್ರಗತಿ ಫೋಕ್ಸೋ ನ್ಯಾಯಾಲಯದ ನ್ಯಾಯಾಧೀಶರು ಮಹತ್ವದ ತೀರ್ಪು ನೀಡುವ ಮೂಲಕ ಸಮಾಜದಕ್ಕೆ ಉತ್ತಮ ಸಂದೇಶ ನೀಡಿದ್ದಾರೆ.
ಬಾಲಕಿಯರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅವರು ಕೇವಲ ಐದು ದಿನಗಳ ಅವಧಿಯಲ್ಲಿ ಮಹತ್ವದ ತೀರ್ಪು ನೀಡಿದ್ದಾರೆ. ನಾಲ್ಕು ಪ್ರತ್ಯೇಕ ಪ್ರಕರಣಗಳ ವಿಚಾರಣೆ ನಡೆಸಿ 20 ವರ್ಷ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ವಿಶೇಷ ಅಭಿಯೋಜಕ ಎಲ್.ವಿ. ಪಾಟೀಲ ವಕಾಲತ್ತು ವಹಿಸಿ ಸಮರ್ಪಕವಾಗಿ ವಾದ ಮಂಡಿಸಿ ಬಾಲಕಿಯರಿಗೆ ನ್ಯಾಯ ಒದಗಿಸಿ ಕೊಟ್ಟಿದ್ದಾರೆ.
ಸೋಮವಾರ ಒಂದೇ ದಿನದಲ್ಲಿ ರಾಯಬಾಗದ ಇಬ್ಬರು ಆರೋಪಿಗಳಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಲಾಗಿದೆ. 29 ಏಪ್ರಿಲ್ 2018ರಂದು ರಾಯಬಾಗದ ಅರ್ಬಾಜ್ ರಸೂಲ್ ನಾಲಬಂದ್(19) ಎಂಬ ಯುವಕ ಬಾಲಕಿಯನ್ನು ಬೈಕ್ ಮೇಲೆ ಕೂರಿಸಿಕೊಂಡು ಮನೆಗೆ ಬಿಡುವುದಾಗಿ ಹೇಳಿ ಅರಣ್ಯ ದಿಗ್ಗೇವಾಡಿ ಕ್ರಾಸ್ ಬಳಿಕ ಅಂಕಲಿಯ ಅರಣ್ಯ ಪ್ರದೇಶದಲ್ಲಿ ಅತ್ಯಾಚಾಋ ಎಸಗಿದ್ದನು. ರಾಯಬಾಗ ಠಾಣೆಯಲ್ಲಿ ದಊರು ದಾಖಲಾಗಿತ್ತು. ತನಿಖಾಧಿಕಾರಿಯಾದ ಮಂಜುನಾಥ ನಡುವಿನಮನಿ, ಪ್ರೀತಂ ದತ್ತಾ ಶ್ರೇಯಕರ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. 17 ಸಾಕ್ಷಿ, 41 ದಾಖಲೆ, 8 ಮುದ್ದೆಮಾಲುಗಳ ಆಧಾರದ ಮೇಲೆ ಶಿಕ್ಷೆ ವಿಧಿಸಲಾಗಿದೆ.
29 ಡಿಸೆಂಬರ್ 2016ರಂದು ಶಾಲೆಯಿಂದ ಬರುತ್ತಿದ್ದ ಬಾಲಕಿಯನ್ನು ಪರಿಚಯ ಮಾಡಿಕೊಂಡ ಯುವಕ ರಾಯಬಾಗದ ಆಶೀಷ ಧರ್ಮರಾಜ ಕಾಂಬಳೆ(25) ಮಹಾರಾಷ್ಟçದ ಗಣೇಶವಾಡಿಗೆ ಕರೆದುಕೊಂಡು ಹೋಗಿ ಮನೆಯೊಂದರಲ್ಲಿ ಕೂಡಿ ಹಾಕಿ ಅತ್ಯಾಚಾರ ಎಸಗಿದ್ದನು. ಬಾಲಕಿಯ ತಂದೆ ರಾಯಬಾಗ ಠಾಣೆಗೆ ದೂರು ನೀಡಿದ್ದರು. ತನಿಖಾಧಿಕಾರಿಯಾದ ಬಿ.ಎಸ್. ಲೋಕಾಪುರ, ಪ್ರೀತಂ ದತ್ತಾ ಶ್ರೇಯಕರ ದೋಚಾರೋಪಣೆ ಪಟ್ಟಿ ಸಲ್ಲಿಸಿದ್ದರು. 25 ಸಾಕ್ಷಿ, 40 ದಾಖಲೆ, 10 ಮುದ್ದೆಮಾಲುಗಳ ಆಧಾರದ ಮೇಲೆ ಆರೋಪಿಗೆ 20 ವರ್ಷ ಶಿಕ್ಷೆ ವಿಧಿಸಲಾಗಿದೆ. ಸರ್ಕಾರಿ ವಿಶೇಷ ಅಭಿಯೋಜಕ ಎಲ್.ವಿ. ಪಾಟೀಲ ವಾದ ವಡಿಸಿದ್ದಾರೆ.
ಚಿಕ್ಕೋಡಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿಯೂ ಆರು ಮಂದಿಗೆ ಸೆ. 19ರಂದು ಹಾಗೂ ಕುಡಚಿ ಠಾಣಾ ವ್ಯಾಪ್ತಿಯ ವಿಕ್ರಮ ಪಟ್ಟೇಕರ ಎಂಬಾತನಿಗೆ ಸೆ. 21ರಂದು ಶಿಕ್ಷೆ ವಿಧಿಸಿ ಆದೇಶ ಹೊರಡಿಸಲಾಗಿತ್ತು.
ಇಂದಿನ ಮಕ್ಕಳು ನಾಳಿನ ಪ್ರಜೆಗಳು. ಹೆಣ್ಣು ಮಕ್ಕಳ ಮೇಲೆ ದಔರ್ಜನ್ಯ ನಡೆಯುತ್ತಿರುವುದು ಸಮಾಜಕ್ಕೆ ಕಪ್ಪು ಚುಕ್ಕೆ ಇದ್ದಂತೆ. ಇಂಥ ಘಟನೆಗಳು ಮರುಳಿಸಬಾರದು ಎಂಬ ಕಾರಣಕ್ಕೆ ಶಿಕ್ಷೆ ನೀಡಲಾಗುತ್ತಿದೆ. ಐದೇ ದಿನದಲ್ಲಿ ಬಾಲಕಿಯರ ಅತ್ಯಾಚಾರ ಪ್ರತ್ಯೇಕ ಪ್ರಕರಣಗಳಲ್ಲಿ ಎಲ್ಲರಿಗೂ 20 ವರ್ಷ ಶಿಕ್ಷೆ ಆಗಿರುವುದು ವಿಶೇಷ. –ಎಲ್.ವಿ. ಪಾಟೀಲ, ಸರ್ಕಾರಿ ವಿಶೇಷ ಅಭಿಯೋಜಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.