ಪೊಲೀಸ್ ಕಣ್ಗಾವಲಲ್ಲಿ ಶುರುವಾಯ್ತು ಕಾಮಗಾರಿ
Team Udayavani, Jun 2, 2019, 11:44 AM IST
ಬೆಳಗಾವಿ: ಹಲಗಾ ಹೊಲದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ತಂತಿ ಬೇಲಿ ಹಾಕುವ ಕಾರ್ಯ ನಡೆಯಿತು.
ಬೆಳಗಾವಿ: ತಾಲೂಕಿನ ಹಲಗಾ ಗ್ರಾಮದ ಹೊರ ವಲಯದ ಜಮೀನಿನಲ್ಲಿ ನಗರ ಒಳಚರಂಡಿ ನೀರು ಶುದ್ಧೀಕರಣ ಘಟಕಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಶುಕ್ರವಾರ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ನಡೆದಿದ್ದು, ಯಾವೊಬ್ಬ ರೈತರೂ ಜಮೀನಿನ ಒಳಗೆ ಬರದಂತೆ ಪೊಲೀಸರು ಕಣ್ಗಾವಲು ಹಾಕಿದ್ದಾರೆ.
ಹಲಗಾ ಗ್ರಾಮದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಜಮೀನಿನಲ್ಲಿ 17 ಕೋಟಿ ರೂ. ವೆಚ್ಚದಲ್ಲಿ ಒಳಚರಂಡಿ ನೀರು ಶುದ್ಧೀಕರಣ ಘಟಕ ನಿರ್ಮಾಣಕ್ಕಾಗಿ ಭೂಸ್ವಾಧೀನಕ್ಕೆ ರೈತರ ವಿರೋಧ ಆಗುತ್ತಿದ್ದಂತೆ ಖಾಕಿ ಸರ್ಪಗಾವಲು ಹಾಕಲಾಗಿದೆ. 19.20 ಎಕರೆ ಜಮೀನಿನಲ್ಲಿ ಈ ಘಟಕ ನಿರ್ಮಾಣವಾಗಲಿದ್ದು, 3-4 ಜೆಸಿಬಿ ಮೂಲಕ ಭೂಮಿ ಸಮತಟ್ಟು ಮಾಡುವುದು ಹಾಗೂ ಆವರಣಕ್ಕೆ ತಂತಿ ಬೇಲಿ ಹಾಕುವ ಕಾರ್ಯ ಮುಂದುವರಿಸಲಾಗಿದೆ.
ಹಲಗಾ ಬ್ರಿಜ್ ಬಳಿಯ ಸರ್ವೀಸ್ ರಸ್ತೆಯ ಎರಡೂ ಕಡೆಯಿಂದ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಸರ್ವೀಸ್ ರಸ್ತೆಯಲ್ಲಿ ಯಾವುದೇ ವಾಹನ ಓಡಾಡದಂತೆ ಪೊಲೀಸರು ಕಾಯುತ್ತ ನಿಂತಿದ್ದಾರೆ. ನಡೆದುಕೊಂಡೂ ಹೋಗಲೂ ಅಲ್ಲಿ ಜಾಗವಿಲ್ಲ. ಕೇವಲ ಜೆಸಿಬಿ ಹಾಗೂ ಸರ್ಕಾರಿ ವಾಹನಗಳನ್ನು ಬಿಟ್ಟರೆ ಇನ್ನುಳಿದಂತೆ ಯಾವ ವಾಹನಕ್ಕೂ ಅಲ್ಲಿ ಅವಕಾಶವಿಲ್ಲ.
ಯಾವುದೇ ಕಾರಣಕ್ಕೂ ಜಮೀನು ಬಿಟ್ಟು ಕೊಡುವುದಿಲ್ಲ ಎಂದು ಪಟ್ಟು ಹಿಡಿದಿದ್ದ ರೈತರು ಶುಕ್ರವಾರ ಜಿಲ್ಲಾಡಳಿತ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಕುರ್ಚಿಗಳನ್ನು ಮುರಿದು, ಧ್ವಂಸ ಮಾಡಿ ಕಣ್ಣೀರು ಹಾಕಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಎದುರು ರೈತರು ಅಳಲು ತೋಡಿಕೊಂಡಿದ್ದರು. ತಾತ್ಕಾಲಿಕವಾಗಿ ಕೆಲಸ ನಿಲ್ಲಿಸಿದ್ದ ಶಾಸಕಿ ಹೆಬ್ಟಾಳಕರ ಅವರು, ರೈತರ ಪರವಾಗಿ ನಾನು ಇರುತ್ತೇನೆ. ಯಾವುದೇ ಕಾರಣಕ್ಕೂ ರೈತರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.