ಒಮಿಕ್ರಾನ್ ಹೆಚ್ಚಳ; ಅಧಿಕಾರಿಗಳೊಂದಿಗೆ ಶಾಸಕರ ಸಭೆ
Team Udayavani, Jan 4, 2022, 8:38 PM IST
ಚಿಕ್ಕೋಡಿ: ಒಮಿಕ್ರಾನ್ ಕೇಸ್ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಗಣೇಶ ಪ್ರಕಾಶ ಹುಕ್ಕೇರಿ ಅವರು ತಹಶೀಲ್ದಾರ್ ಕಚೇರಿಯಲ್ಲಿ ಅಧಿ ಕಾರಿಗಳೊಂದಿಗೆ ಸಭೆ ನಡೆಸಿದರು. ಕೋವಿಡ್ ಮೊದಲನೇ ಹಾಗೂ ಎರಡನೇ ಅಲೆಯಲ್ಲಿ ಆದಂತಹ ಲೋಪದೋಷಗಳನ್ನು ಗಮನದಲ್ಲಿ ಟ್ಟುಕೊಂಡು 3ನೇ ಅಲೆಯನ್ನು ಸಮರ್ಪಕವಾಗಿ ಎದುರಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕೆಂದು ಆರೋಗ್ಯ ಇಲಾಖೆ ಅಧಿ ಕಾರಿಗಳಿಗೆ ಸೂಚಿಸಿದರು.
ತಾಲೂಕಿನಾದ್ಯಂತ ಅಗತ್ಯವಿರುವ ಆರೋಗ್ಯ ಅ ಧಿಕಾರಿಗಳ ನೇಮಕಾತಿ ಪ್ರಕ್ರಿಯೆ, 100 ಜಂಬೋ ಆಕ್ಸಿಜನ್ ಸಿಲಿಂಡರ್, ಎರಡು ಆಂಬ್ಯುಲೆನ್ಸ್ ಗಳ ಪೂರೈಕೆಗಾಗಿ ಆರೋಗ್ಯ ಸಚಿವರಾದ ಕೆ.ಸುಧಾಕರ ಅವರೊಡನೆ ಚರ್ಚಿಸುತ್ತೇನೆಂದು ತಿಳಿಸಿದರು. ಜನಪರ ಸೇವೆಗೆ ಶ್ಲಾಘನೆ: ಈಗಾಗಲೇ ಮಾಜಿ ಸಚಿವರಾದ ಪ್ರಕಾಶ ಹುಕ್ಕೇರಿ ಅವರು ಕೋವಿಡ್-19ರ ಒಂದನೇ ಮತ್ತು ಎರಡನೇ ಅಲೆ ಬಂದಾಗ ಸಾಕಷ್ಟು ಜನಪರ ಸೇವೆಗಳನ್ನು ಮಾಡಿದ್ದಾರೆ.
ಕ್ಷೇತ್ರದ ಜನರಿಗೆ ಮನೆ ಮನೆಗೆ ವಾಹನ ಕಳುಹಿಸಿ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಅನುಕೂಲ ಮಾಡಿದ್ದಾರೆ. ಸರಕಾರಿ ಆಸ್ಪತ್ರೆಗಳಿಗೆ ವೆಂಟಿಲೇಟರ್ ಬೆಡ್ಗಳಿಗೆ ಅನುಕೂಲವಾಗಲು 4 ಜನರೇಟರ್ ಗಳನ್ನು ನೀಡಿದ್ದಾರೆ. ಸ್ವಂತ ವೆಚ್ಚದಲ್ಲಿ ವೈದ್ಯರ ಹಾಗೂ ಸ್ಟಾಫರ್ಗಳನ್ನು ನೇಮಿಸಿರುವ ಕಾರ್ಯ ಶ್ಲಾಘನೀಯ ಎಂದು ಅಧಿಕಾರಿಗಳು ಶ್ಲಾಘಿಸಿದರು. ಎಸಿ ಶಶಿಧರ ಬಗಲಿ, ತಹಶೀಲ್ದಾರ್ ದೇಶಪಾಂಡೆ, ಆರೋಗ್ಯ ಇಲಾಖೆ ಅಧಿ ಕಾರಿಗಳಾದ ಎಸ್.ಎಸ್. ಗಡೆದ, ವಿಠಲ ಶಿಂಧೆ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.