ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ
Team Udayavani, May 3, 2024, 5:46 PM IST
■ ಉದಯವಾಣಿ ಸಮಾಚಾರ
ಬೆಳಗಾವಿ: ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ. ನೇತೃತ್ವವೂ ಇಲ್ಲ. ಜೊತೆಗೆ ಯಾವುದೇ ನೀತಿಯೂ ಇಲ್ಲ ಎಂದು ಮಾಜಿ ಸಚಿವ ಸಿ.ಟಿ ರವಿ ವಾಗ್ಧಾಳಿ ನಡೆಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಮ್ಮ ನೀತಿ ಏನು ಎಂಬುದನ್ನು ನಿಮ್ಮ ಮಾತುಗಳೇ ಸಾಬೀತುಪಡಿಸುತ್ತವೆ. ರಾಹುಲ್ ಗಾಂಧಿ ಮೊಹಬ್ಬತ್ ಕೆ ದುಕಾನ್ ಬಗ್ಗೆ ಮಾತನಾಡುತ್ತಿದ್ದರು. ಅವರ ಈ ದುಕಾನ್‌ದಲ್ಲಿ ನಫರತ್‌ನ ಬಿಕರಿ ಆಗುತ್ತಿದೆ ಎಂದು ಟೀಕಿಸಿದರು.
ಬಿಜೆಪಿಯವರ ಮನೆ ಹಾಳಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ದೇಶದ ಅತಿ ಹೆಚ್ಚು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ, ಅತಿ ಹೆಚ್ಚು ಜನರು ಮತ ಹಾಕಿದ, ಅತಿ ಹೆಚ್ಚು ಸಂಸದರು, ಶಾಸಕರು ನಾಶವಾಗಲಿ ಎಂದರೆ ಭಾರತವೇ ನಾಶವಾಗಲಿ ಎಂಬುದನ್ನು ಅವರು ಬಯಸಿದಂತೆ ಕಾಣುತ್ತದೆ ಎಂದು ವಿಶ್ಲೇಷಿಸಿದರು.
ಇದಕ್ಕೆ ಪೂರಕವಾಗಿ ಕಾಂಗ್ರೆಸ್ ಪಕ್ಷದ ಶಾಸಕ ರಾಜು ಕಾಗೆ ಅವರು, ಮೋದಿ ಸತ್ತರೆ ಬೇರೆ ಯಾರೂ ಪ್ರಧಾನಿ ಆಗುವದಿಲ್ಲವೇ ಎಂದಿದ್ದಾರೆ. ಅಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಕಡಿಮೆ ಲೀಡ್ ಕೊಟ್ಟರೆ ಕರೆಂಟ್ ಕಟ್ ಮಾಡುತ್ತೇವೆ ಎಂದು ಮತದಾರರಿಗೆ ಬೆದರಿಕೆ ಹಾಕಿದ್ದಾರೆ. ಇದು ಇವರ ಮೊಹಬ್ಬತ್ ಕೀ ದುಕಾನ್‌ದ ಪ್ರೀತಿಯ ಮಾತುಗಳು ಎಂದು ಛೇಡಿಸಿದರು.
ಕಾಂಗ್ರೆಸ್ ನವರಿಗೆ ಜಾಣಕುರುಡು ಮತ್ತು ಜಾಣ ಕಿವುಡು ಇದೆ. ಒಳ್ಳೆಯ ಸಂಗತಿ ಯಾವುದೂ ಅವರ ಕಣ್ಣಿಗೆ ಬೀಳುವುದಿಲ್ಲ. ಸುಳ್ಳು ಮತ್ತು ಅಪಪ್ರಚಾರ ಕಾಂಗ್ರೆಸ್ ನ ಒಂದೆ ನಾಣ್ಯದ ಎರಡು ಮುಖಗಳು. ಸುಳ್ಳಿನಿಂದಲೇ ಕಾಂಗ್ರೆಸ್ ಬದುಕಿದೆ. ಕಾಂಗ್ರೆಸ್ ಗೆ ಸುಳ್ಳೇ ಆಕ್ಸಿಜನ್ ಇದ್ದಂತೆ. ಅದಿಲ್ಲದಿದ್ದರೆ ಕಾಂಗ್ರೆಸ್ ಸತ್ತು ಹೋಗುತ್ತದೆ ಎಂದು ಟೀಕಾಪ್ರಹಾರ ನಡೆಸಿದರು.
ಶಾಸಕ ಲಕ್ಷ್ಮಣ ಸವದಿ ನನ್ನ ಸ್ನೇಹಿತರು. ಅವನ ಜೊತೆಗೆ ಹೆಚ್ಚಿನ ಒಡನಾಟವಿದೆ. ಬಿಜೆಪಿ ಪಕ್ಷ ಅವರನ್ನು ಸೋತರೂ ಸಹ ಉಪ ಮುಖ್ಯಮಂತ್ರಿ ಮಾಡಿತ್ತು. ಅವರಲ್ಲಿ ರಾಷ್ಟ್ರ ಪ್ರೇಮವಿದೆ, ಅದನ್ನು ಒಪ್ಪುತ್ತೇನೆ. ಈ ರಾಷ್ಟ್ರ ಪ್ರೇಮವನ್ನು ಕಾಂಗ್ರೆಸ್ ಪಕ್ಷಕ್ಕೆ ಹೇಳಿಕೊಡಲಿ. ಆದರೆ ಭಾರತ ಮಾತಾಕೀ ಜೈ ಎನ್ನಲು ಖರ್ಗೆ ಅನುಮತಿ ಕೇಳುವುದು ಸೂಕ್ತವಲ್ಲ ಎಂದರು.
ನಮ್ಮ ಬಿಜೆಪಿ ಪಕ್ಷದ ನೀತಿ, ಪಕ್ಷದ ನೇತೃತ್ವ ನಮ್ಮ ಬದ್ಧತೆಯನ್ನು ತಿಳಿಸುತ್ತಿದೆ. ದೇಶ ಮೊದಲು, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬುದು ನಮ್ಮ ನೀತಿ. ಬಡವರಿಗೆ ಬಲ ಕೊಡುವುದು ನಮ್ಮ ನೀತಿ. ಸಂವಿಧಾನದ ಆಶಯವನ್ನು ಆಡಳಿತದಲ್ಲಿ ಅನುಷ್ಠಾನಗೊಳಿಸಿ ಕಟ್ಟಕಡೆಯ ಮನುಷ್ಯನಿಗೆ ತಲುಪಿಸುವುದು ನಮ್ಮ ನೀತಿ ಎಂದು ತಿರುಗೇಟು ನೀಡಿದರು.
ಭಾರತ ಮತ್ತು ಭಾರತೀಯರನ್ನು ಸುರಕ್ಷಿತವಾಗಿಡುವುದು, ಜಗತ್ತಿನ ಮೊದಲ ಸ್ಥಾನದಲ್ಲಿ ಆರ್ಥಿಕ ಶಕ್ತಿಯಾಗಿ ಭಾರತವನ್ನು ರೂಪಿಸುವುದು ನಮ್ಮ ನೀತಿ. ಇದಕ್ಕೆ ಅನುಗುಣವಾಗಿಯೇ ನಾವು ನಮ್ಮ ಸಾಧನೆ ತೋರಿಸಿದ್ದೇವೆ. 10 ವರ್ಷಗಳಲ್ಲಿ ತೆರಿಗೆ
ಕ್ಷೇತ್ರದಲ್ಲಿ ದೊಡ್ಡ ಸುಧಾರಣೆಯನ್ನು ತರಲಾಗಿದೆ. ಅದರ ಪರಿಣಾಮವಾಗಿ ಜಿಡಿಪಿ ಬೆಳವಣಿಗೆ ಮೂಲಕ ಭಾರತವು ವಿಶ್ವದ 5ನೇ ಶಕ್ತಿಯಾಗಿ ಬದಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ್, ರಾಜ್ಯ ವಕ್ತಾರ ಎಂಬಿ ಜಿರಲಿ, ರಾಜ್ಯ ಮಾಧ್ಯಮ ಸಮಿತಿ ಸದಸ್ಯರಾದ ಶರತ್ ಹೆಗಡೆ, ಎಫ್ ಎಸ್ ಸಿದ್ದನಗೌಡರ, ಬೆಳಗಾವಿ ಜಿಲ್ಲಾ ಮಾಧ್ಯಮ ಸಂಚಾಲಕ ಹನುಮಂತ ಕೊಂಗಾಲಿ, ಚಂದ್ರಕಾಂತ್ ಅವರು ಉಪಸ್ಥಿತರಿದ್ದರು.
ಪ್ರಜ್ವಲ್ ರೇವಣ್ಣ ಪ್ರಕರಣ ಚುನಾವಣೆಯ ಮೇಲೆ ಪರೋಕ್ಷವಾಗಿ ಸಣ್ಣ ಪ್ರಮಾಣದ ಪ್ರಭಾವ ಬೀರುತ್ತದೆ. ಆದರೆ ಕಾಂಗ್ರೆಸ್ ಇದನ್ನು ಇಡೀ ಎನ್‌ಡಿಎ ಅಪರಾಧ ಎನ್ನುವಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಸಚಿವ ಸಿ.ಟಿ ರವಿ ಕಿಡಿಕಾರಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಪ್ರಾಥಮಿಕ ತನಿಖೆ ನಂತರ ಸತ್ಯಾಸತ್ಯತೆ ಹೊರ ಬರುತ್ತದೆ. ಸರ್ಕಾರವೇ ಎಸ್‌ಐಟಿ ರಚನೆ ಮಾಡಿದೆ. ತನಿಖೆಯಾಗಲಿ ಎಂದರು. ಮಹಿಳಾ ನ್ಯಾಯಾಧೀಶರ ತಂಡದಿಂದ ತನಿಖೆಯಾದರೆ ಆದಷ್ಟು ಬೇಗನೆ ಸತ್ಯಾಸತ್ಯತೆ ಹೊರ ಬರುತ್ತದೆ. ಇದಕ್ಕೆ ಸಂಬಂಧಪಟ್ಟಂತೆ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಒಪ್ಪುತ್ತೇವೆ. ಈ ನೆಲದ ಕಾನೂನು ಎಲ್ಲರಿಗೂ ಒಂದೇ. ತನಿಖೆಗೂ ಮುನ್ನ ನಾವು ಯಾರನ್ನೂ ಅಪರಾಧಿ ಎಂದು ಘೋಷಣೆ ಮಾಡುವಂತಿಲ್ಲ. ತನಿಖೆ ನಂತರ ಸತ್ಯ ಏನು ಅನ್ನೋದು ಹೊರಬರುತ್ತದೆ ಎಂದು ಹೇಳಿದರು. ದೂರುದಾರರ ಹೇಳಿಕೆಯ ಪ್ರಕಾರ ಇದು ನಾಲ್ಕೈದು ವರ್ಷದ ಹಿಂದಿನ ಘಟನೆ. ಆಗ ಜನತಾದಳವು ಕಾಂಗ್ರೆಸ್ ಜೊತೆ ಇತ್ತು ಎಂಬುದನ್ನು ಕಾಂಗ್ರೆಸ್ ನವರು ಮರೆತಿದ್ದಾರೆ. ತನಿಖೆ ಆಗಲಿ, ಸತ್ಯ ಏನೆಂಬುದು ಹೊರಬರಲಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.