ಸೋಂಕು ಪತ್ತೆ: ಸಂಕೇಶ್ವರದಲ್ಲಿ ಹೈಅಲರ್ಟ್
Team Udayavani, Apr 17, 2020, 4:17 PM IST
ಸಂಕೇಶ್ವರ: ನಗರದಲ್ಲಿ ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಿದ್ದು, ನಗರದಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ನಗರದ ನಿಡಸೋಸಿ ರಸ್ತೆಯಲ್ಲಿನ ವ್ಯಕ್ತಿಯೋರ್ವರಿಗೆ ಕೋವಿಡ್ 19 ಸೋಂಕು ತಗುಲಿರುವ ಬಗ್ಗೆ ಆರೋಗ್ಯ ಇಲಾಖೆ ಖಚಿತಪಡಿಸಿದ್ದು, ಇದರಿಂದ ನಗರದ 3 ಕಿ.ಮೀ. ವರೆಗೆ ಸಿಲ್ ಡೌನ್ ಘೋಷಿಸಲಾಗಿದೆ. ಸೋಂಕಿತ ವ್ಯಕ್ತಿ ದೆಹಲಿಯಿಂದ ಮರಳಿದವನಾಗಿದ್ದು, ಮೊದಲ ಬಾರಿಯ ಪರೀಕ್ಷೆಯಲ್ಲಿ ಆತನ ವರದಿ ನೆಗೆಟಿವ್ ಬಂದಿತ್ತು. ಎರಡನೆಯ ಪರೀಕ್ಷೆಯಲ್ಲಿ ಆತನಿಗೆ ಸೋಂಕು ಇರುವುದು ಪತ್ತೆಯಾಗಿದೆ.
ಇನ್ನು ಈತನ ಕುಟುಂಬದ 12 ಜನರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ನಗರದ ಭೌಗೋಳಿಕ ಪ್ರದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶವಾಗುವವರೆಗೆ ನಿಷೇಧಿ ತ ಎಂದು ಘೋಷಿಸಿ ಡಿಸಿ ಡಾ| ಎಸ್.ಬಿ. ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ.
ಸೋಂಕಿತ ವ್ಯಕ್ತಿ ಪತ್ತೆಯಾದ ಪ್ರದೇಶದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಸಂಚರಿಸುವ ಮಾರ್ಗಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ನಗರದಲ್ಲಿನ ಪ್ರತಿ ಮನೆ-ಮನೆಗೆ ತೆರಳಿ ಸರ್ವೇ ಕಾರ್ಯ ಆರಂಭಿಸಿದ್ದಾರೆ ಎಂದು ಅಧಿ ಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.