Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
Team Udayavani, Jan 11, 2025, 1:18 PM IST
ಬೆಳಗಾವಿ: ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನವದೆಹಲಿಯಲ್ಲಿ ಶುಕ್ರವಾರ (ಜ.10) ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ಮಾಡಿದರು.
ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸ್ವತಃ ಬೆಳಗಾವಿ ನಗರಕ್ಕೆ ಆಗಮಿಸಿ, ಅತ್ಯುತ್ತಮ ಸಹಕಾರವನ್ನು ನೀಡಿದ್ದನ್ನು ಇದೇ ವೇಳೆ ಶೆಟ್ಟರ್ ಸ್ಮರಿಸಿದರು.
ಈ ಸಂದರ್ಭದಲ್ಲಿ ಸಂಸದರು ಸವಿ ನೆನಪಿಗಾಗಿ ಹುಬ್ಬಳ್ಳಿ ಸಾಹಿತ್ಯ ಭಂಡಾರ ಪ್ರಕಟ ಮಾಡಿದ ” Temple treasures a journey through time ” ಯ ಪುಸ್ತಕ ನೀಡಿದರು.
ಸವದತ್ತಿಯ ಶ್ರೀ ಕ್ಷೇತ್ರ ಶ್ರೀ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗೆ 100 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದಕ್ಕೆ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಅದೇ ರೀತಿಯಲ್ಲಿ ರಾಮದುರ್ಗದಲ್ಲಿರುವ ಐತಿಹಾಸಿಕ ಶಬರಿ ಕೊಳ್ಳವನ್ನು ಸಹ ಅಭಿವೃದ್ಧಿಪಡಿಸುವಂತೆ ಮನವಿ ಮಾಡಿದರು.
ಬೆಂಗಳೂರು – ಧಾರವಾಡದ ನಡುವೆ ಸದ್ಯ ಸಂಚರಿಸುತ್ತಿರುವ “ವಂದೇ ಭಾರತ” ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿಯವರೆಗೆ ವಿಸ್ತರಿಸಿ ಬೆಳಗಾವಿ ಜಿಲ್ಲಾ ನಿವಾಸಿಗಳ ಅನೇಕ ದಿನಗಳ ಬೇಡಿಕೆಯನ್ನು ಪರಿಗಣಿಸುವಂತೆ ಮನವಿ ಮಾಡಿದರು.
ವಿಮಾನಯಾನ ಸೇವೆಗೆ ಸಂಬಂಧಿಸಿದಂತೆ “ಉಡಾನ್ 3.0” ಯೋಜನೆಯ ಅವಧಿಯನ್ನು ಇನ್ನೂ ಹೆಚ್ಚಿಸಿದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲಿದೆಎಂದು ಮನವರಿಕೆ ಮಾಡಿದರು. ಬೆಳಗಾವಿ ನಗರ ಹಾಗೂ ಎರಡನೇ ದರ್ಜೆ ನಗರಗಳ ವಿಮಾನಯಾನ ಸೇವೆಯ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…
Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.