Belagavi; ಮಹಾದೇವಪ್ಪ ಯಾದವಾಡ ಭೇಟಿಯಾದ ಜಗದೀಶ್ ಶೆಟ್ಟರ್
Team Udayavani, Apr 5, 2024, 4:33 PM IST
ಬೆಳಗಾವಿ: ರಾಮದುರ್ಗ ಕ್ಷೇತ್ರದ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಮನೆಗೆ ಬೆಳಗಾವಿ ಲೋಕಸಭಾ ಅಭ್ಯರ್ಥಿ ಜಗದೀಶ ಶೆಟ್ಟರ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಮಹಾದೇವಪ್ಪ ಯಾದವಾಡ ನಂತರ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಬಿಜೆಪಿ ಬಗ್ಗೆ ಅಸಮಾಧಾನ ಗೊಂಡಿದ್ದ ಮಹಾದೇವಪ್ಪ ಯಾದವಾಡ ಅವರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಕಾಂಗ್ರೆಸ್ ನಾಯಕರು ಗಾಳಹಾಕಿದ್ದರು.
ಇದರ ನಡುವೆ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಮಹಾದೇವಪ್ಪ ಯಾದವಾಡ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದು ವಿಶೇಷ ಮಹತ್ವ ಪಡೆದುಕೊಂಡಿದೆ.
ಮಹಾದೇವಪ್ಪ ಯಾದವಾಡ ಜೊತೆಗೆ ಮಾತುಕತೆ ನಡೆಸಿದ ಜಗದೀಶ್ ಶೆಟ್ಟರ್ ಯಾದವಾಡರ ಅಸಮಾಧಾನ ತಣಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಡೆದ ಕೆಲ ಕಹಿ ಘಟನೆಗಳನ್ನು ಮರೆತು ಎಲ್ಲರೂ ಗೆಲುವಿಗೆ ಶ್ರಮಿಸಲಿದ್ದಾರೆ. ಸ್ಥಳಿಯ ಮುಖಂಡರ ಏನೇ ಸಮಸ್ಯೆಗಳಿದ್ದರೂ ಅವುಗಳನ್ನು ಕೋರ್ ಕಮಿಟಿಯ ಸಭೆಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.