ರೈತರ ಬಾಳಿಗೆ ಆಸರೆಯಾದ ಜಲಾಮೃತ

ಜಲಮೂಲ ಪುನಶ್ಚೇತನಕ್ಕೆ ಯೋಜನೆಯಲ್ಲಿ ಒತ್ತು

Team Udayavani, Jun 11, 2020, 3:25 PM IST

ರೈತರ ಬಾಳಿಗೆ ಆಸರೆಯಾದ ಜಲಾಮೃತ

ಬೆಳಗಾವಿ: ರೈತ ಸಮುದಾಯಕ್ಕೆ ಇದು ಬಹಳ ಕಷ್ಟ ಕಾಲ. ಒಂದು ಕಡೆ ಪ್ರಕೃತಿ ವಿಕೋಪ ಎಡಬಿಡದೆ ಕಾಡುತ್ತಿದ್ದರೆ ಈಗ ಕೋವಿಡ್ ಮಹಾಮಾರಿ ಜೀವನದ ನೆಮ್ಮದಿ ಕಸಿದುಕೊಂಡಿದೆ. ರೈತ ಸಮುದಾಯದ ಆರ್ಥಿಕ ಅಭಿವೃದ್ಧಿಗೆ ಸರಕಾರ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಮಾಹಿತಿ ಕೊರತೆಯಿಂದ ಎಲ್ಲ ರೈತರಿಗೆ ತಲುಪುತ್ತಿಲ್ಲ. ಪರಿಣಾಮ ಅನೇಕ ರೈತರು ಈಗಲೂ ನಷ್ಟದ ಸುಳಿಯಲ್ಲೇ ಸಿಲುಕಿದ್ದಾರೆ.

ಕಳೆದ ಮೂರ್‍ನಾಲ್ಕು ವರ್ಷ ಉಂಟಾದ ಭೀಕರ ಬರಗಾಲದಿಂದ ಹೊಲದಲ್ಲಿ ಕೆಲಸವಿಲ್ಲದೆ ಅಸಹಾಯಕರಾಗಿ ಬೇರೆ ಪ್ರದೇಶಗಳಿಗೆ ಕೆಲಸಕ್ಕಾಗಿ ವಲಸೆ ಹೋಗುತ್ತಿದ್ದ ಜನರಿಗೆ ಅದರಲ್ಲೂ ರೈತ ಸಮುದಾಯಕ್ಕೆ ಆಸರೆಯಾಗಬೇಕು. ಅವರ ಕೈಗಳಿಗೆ ಕೆಲಸ ನೀಡಬೇಕು ಎಂಬ ಉದ್ದೇಶದಿಂದ ಸರಕಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಜಾರಿಗೆ ತಂದ “ಜಲಾಮೃತ’ ಯೋಜನೆ ಅಕ್ಷರಶಃ ರೈತರ ಬಾಳಿಗೆ ಆಸರೆಯಾಗಿದೆ. ಭೂ ಅಭಿವೃದ್ಧಿ, ನೀರಿನ ಸಂಗ್ರಹಣೆ ಮತ್ತು ನೀರಿನ ಸಂರಕ್ಷಣೆ ಜಲಾಮೃತ ಯೋಜನೆ ಮುಖ್ಯ ಉದ್ದೇಶ. ರೈತರು ಈ ಯೋಜನೆ ಅಳವಡಿಸಿಕೊಂಡಿದ್ದೇ ಆದರೆ ಮುಂದೆ ಅವರ ಅನೇಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ ಎಂಬುದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಂದ್ರ ಕೆ.ವಿ. ಅವರ ಅಭಿಪ್ರಾಯ.

ಹರಿದು ಹೋಗುವ ನೀರನ್ನು ತಡೆದು ಇಂಗಿಸುವುದರಿಂದ ತೆರೆದಬಾವಿ, ಕೊಳವೆಬಾವಿಗಳು ಮರು ಜೀವ ಪಡೆಯುತ್ತವೆ. ಕೃಷಿಗೆ ಮತ್ತು ಕುಡಿಯಲು ನೀರಿನ ಲಭ್ಯತೆ ಉಂಟಾಗುತ್ತದೆ. ಜನರ ಸಹಭಾಗಿತ್ವದಿಂದ ಜಲಾಮೃತ ಯೋಜನೆಯಡಿ ಈ ವರ್ಷ ಹೊರತುಪಡಿಸಿ ಉದ್ಯೋಗ ಖಾತ್ರಿ ಯೋಜನೆಯಡಿ ಸುಮಾರು 12 ಲಕ್ಷ ಮಾನವ ದಿನಗಳನ್ನು ಸೃಷ್ಟಿಸಲಾಗಿದೆ. 40ಕ್ಕೂ ಹೆಚ್ಚು ಕಡೆಗಳಲ್ಲಿ ಕೃಷಿ ಹೊಂಡ, ಬದುಗಳ ನಿರ್ಮಾಣ, ಜಲ ಸಂಗ್ರಹ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂಬುದು ಕೃಷಿ ಇಲಾಖೆ ಉಪನಿರ್ದೇಶಕ ಎಚ್‌.ಡಿ. ಕೋಳೇಕರ ಹೇಳಿಕೆ.

ಆರಂಭದಲ್ಲಿ ಮಳೆ ಆಧಾರಿತ ಪ್ರದೇಶದಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗಿತ್ತು. ಯೋಜನೆ ಜಾರಿಗೆ ಮುನ್ನ ಕಿರು ಜಲಾನಯನ ಪ್ರದೇಶಗಳನ್ನು ಗುರುತಿಸಿ ರೈತರೊಂದಿಗೆ ಚರ್ಚೆ ನಡೆಸಿದ ಬಳಿಕ ಕಾಮಗಾರಿ ಆರಂಭಿಸಲಾಯಿತು. ಪರಿಣಾಮ ಜಿಲ್ಲೆಯಲ್ಲಿ ನಿಗದಿಪಡಿಸಿದ ಗುರಿಯಂತೆ 55 ಕಿರು ಜಲಾನಯನ ಯೋಜನೆಗಳನ್ನು ಪೂರ್ಣಗೊಳಿಸಲು ಸಾಧ್ಯವಾಯಿತು ಎಂಬುದು ಅಧಿಕಾರಿಗಳ ಹೇಳಿಕೆ.

2ನೇ ಹಂತಕ್ಕೆ ಚಾಲನೆ :  ಜಿಲ್ಲೆಯಲ್ಲಿ ಈಗ ಜಲಾಮೃತ ಯೋಜನೆಯ ಎರಡನೇ ಹಂತದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಜಲಾಮೃತ (ಕಿರುಜಲಾನಯನ) ಯೋಜನೆಯಡಿ ಜಿಲ್ಲೆಯಲ್ಲಿ 55 ಜಾಗಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಕಾಮಗಾರಿ ಕೈಗೊಳ್ಳಲಾಗಿದೆ. ಬದು ನಿರ್ಮಾಣ, ಚೆಕ್‌ ಡ್ಯಾಮ್‌, ಕೃಷಿ ಹೊಂಡ, ನಾಲಾ ಬಂಡ್‌, ಕೃಷಿ ತೋಟಗಾರಿಕೆ, ಕೃಷಿ ಅರಣ್ಯ, ಆಳವಿಲ್ಲದ ಬಾವಿಗಳು ಹಾಗೂ ಕೆರೆಗಳ ಪುನಶ್ಚೇತನ ಕಾಮಗಾರಿ ಈ ಜಲಾಮೃತ ಯೋಜನೆಯಡಿ ಕೈಗೊಳ್ಳಲಾಗುತ್ತಿದೆ

ಚಿಕ್ಕೋಡಿಯಲ್ಲಿ ಆರಂಭ : ನಾಲ್ಕು ವರ್ಷಗಳ ಹಿಂದೆ ರಾಜ್ಯದಲ್ಲೇ ಮೊದಲ ಬಾರಿಗೆ ಚಿಕ್ಕೋಡಿ ತಾಲೂಕಿನಲ್ಲಿ ಈ ಜಲಾಮೃತ ಯೋಜನೆ ಅನುಷ್ಠಾನ ಗೊಳಿಸಲಾಯಿತು. ರೈತರಿಂದ ಉತ್ತಮ ಪ್ರತಿಕ್ರಿಯೆಯೂ ಸಿಕ್ಕಿತು. ಚಿಕ್ಕೋಡಿಯಲ್ಲಿ ಆರಂಭವಾದ ಯೋಜನೆ ಈಗ ಜಿಲ್ಲೆಯ ಎಲ್ಲ ಪ್ರದೇಶಗಳಿಗೆ ವಿಸ್ತರಣೆಯಾಗಿದೆ. ಇದುವರೆಗೆ ಯೋಜನೆಗೆ 35 ಕೋಟಿ ರೂ. ವೆಚ್ಚವಾಗಿದೆ. ಅನೇಕ ಕಡೆ ನೀರಿನ ಸಮಸ್ಯೆ ದೂರವಾಗಿದೆ. ಯೋಜನೆ ಯಶಸ್ವಿಯಾದಂತೆ ಬೇಡಿಕೆಯೂ ವೃದ್ಧಿಯಾಗಿದೆ.

ರೈತರಿಂದಲೂ ಹೆಚ್ಚಿನ ಬೇಡಿಕೆ : ಯೋಜನೆಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಯೋಜನೆಯ ಲಾಭ ಎಲ್ಲ ರೈತರಿಗೆ ಸಿಗಲಿ ಎನ್ನುವ ಕಾರಣದಿಂದ ಎರಡನೇ ಹಂತದ ಜಲಾಮೃತ ಯೋಜನೆ ಬಗ್ಗೆ ರೈತರಿಗೆ ಅರಿವು ಮೂಡಿಸುವ ಕಾರ್ಯಕ್ರಮ ನಿರಂತರವಾಗಿ ನಡೆದಿದೆ. ಎರಡನೇ ಹಂತದಲ್ಲಿ ಇದುವರೆಗೆ ಮೂರು ಲಕ್ಷ ಮಾನವ ದಿನಗಳನ್ನು ಸೃಷ್ಟಿಸಲಾಗಿದೆ. ಒಟ್ಟು 66 ಕಿರು ಜಲಾನಯನ ಯೋಜನೆಗಳ ನಿರ್ಮಾಣದ ಗುರಿ ಹಾಕಿಕೊಳ್ಳಲಾಗಿದೆ. ರೈತರಿಂದಲೂ ಬಹಳ ಬೇಡಿಕೆ ಬರುತ್ತಿದೆ ಎಂಬುದು ಅಧಿಕಾರಿಗಳ ಹೇಳಿಕೆ

ಜಲಾಮೃತ ಯೋಜನೆ ಒಳ್ಳೆಯ ಪರಿಣಾಮ ಬೀರಿದೆ. ವಿಶೇಷವಾಗಿ ಖಾನಾಪುರ ತಾಲೂಕಿನಲ್ಲಿ ಇದರಲ್ಲಿ ನೇರ ಪರಿಣಾಮ ಕಂಡುಬಂದಿದೆ. ಯೋಜನೆಯಡಿ ಕೆರೆಗಳ ಪುನಶ್ಚೇತನ, ಬದುಗಳ ನಿರ್ಮಾಣದಿಂದ ಅಂತರ್ಜಲ ಹೆಚ್ಚಳವಾಗಿದೆ. ಅನೇಕ ಕಡೆ ಕುಡಿಯುವ ನೀರಿನ ಸಮಸ್ಯೆ ದೂರವಾಗಿದೆ. ರೈತರು ಸ್ವಯಂ ಪ್ರೇರಣೆಯಿಂದ ಯೋಜನೆ ಲಾಭಪಡೆಯುತ್ತಿದ್ದಾರೆ.-ರಾಜೇಂದ್ರ ಕೆ.ವಿ., ಜಿಪಂ ಸಿಇಒ

ಜಲಾಮೃತ ಯೋಜನೆಯಿಂದ 55 ಕಿರು ಜಲಾನಯನ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ. ಜಿಲ್ಲೆಯಲ್ಲಿ ಇದು ಸಂಪೂರ್ಣ ಯಶಸ್ವಿಯಾಗಿದೆ. ರೈತರಿಗೆ ಒಳ್ಳೆಯ ಬದುಕು ಕಟ್ಟಿಕೊಟ್ಟಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಬಡವರಿಗೆ ವರದಾನವಾಗಿದೆ. -ಎಚ್‌.ಡಿ. ಕೋಳೇಕರ, ಕೃಷಿ ಇಲಾಖೆ ಉಪನಿರ್ದೇಶಕ

-ಕೇಶವ ಆದಿ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.