ಮೋದಿ ನಾಯಕತ್ವದಿಂದ ಬಲಿಷ್ಠ ಭಾರತ
Team Udayavani, Jul 7, 2020, 4:13 PM IST
ಗೋಕಾಕ: ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದ 2ನೇ ಅವಧಿಯ ಒಂದು ವರ್ಷ ಪೂರ್ಣಗೊಂಡಿದ್ದು, ವಿಶ್ವದಲ್ಲಿಯೇ ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಇದಕ್ಕೆ ಪ್ರಧಾನಿ ಮೋದಿ ಅವರ ದೂರದೃಷ್ಟಿ ನಾಯಕತ್ವವೇ ಕಾರಣವೆಂದು ಅರಭಾಂವಿ ಶಾಸಕ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಸೋಮವಾರ ಸಂಜೆ ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಬಿಜೆಪಿ ಅರಭಾಂವಿ ಮಂಡಲ ಹಮ್ಮಿಕೊಂಡಿದ್ದ ಕರ್ನಾಟಕ ಜನಸಂವಾದ ಸಮಾರೋಪ ಸಮಾರಂಭದ ನಿಮಿತ್ತ ಕಾರ್ಯಕರ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ಮಹಾಮಾರಿ ಕೋವಿಡ್ ವೈರಸ್ ಹಿನ್ನೆಲೆಯಲ್ಲಿ ನಾಗರಿಕರ ಸುರಕ್ಷತೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಗೊಂಡ ಕ್ರಮಗಳನ್ನು ಶ್ಲಾಘಿಸಿ ಅಭಿನಂದಿಸಿದರು. ಕಳೆದ ಮಾರ್ಚ್ ತಿಂಗಳಿನಿಂದ ಮಹಾಮಾರಿ ಕಾಡುತ್ತಿದೆ. ಜನತೆಗೆ ಲಾಕ್‌ಡೌನ್ ಸಮಯದಲ್ಲಿ ಸಾಕಷ್ಟು ತೊಂದರೆಯಾಗಿದೆ. ಜನರ ಸಂಕಷ್ಟವನ್ನು ಅರಿತು ನಮ್ಮ ಕಾರ್ಯಕರ್ತರು ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಕಷ್ಟದಲ್ಲಿರುವ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್, ಬಟ್ಟೆ, ಹೊದಿಕೆ, ಮಾಸ್ಕ್, ಸ್ಯಾನಿಟೆ„ಸರ್ ಸೇರಿದಂತೆ ದಿನಬಳಕೆ ವಸ್ತುಗಳನ್ನು ವಿತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ವರು ಸಮರ್ಥವಾಗಿ ಕಾರ್ಯ ನಿಭಾಯಿಸುವ ಮೂಲಕ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಿದರು.
ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಮಾತನಾಡಿ, ಪ್ರಧಾನಿ ಮೋದಿ ಅವರ ಆತ್ಮನಿರ್ಭರ ಪರಿಕಲ್ಪನೆಯು ದೇಶದ ನಾಗರಿಕರ ಸ್ವಾವಲಂಬಿ ಬದುಕಿಗೆ ಬುನಾದಿ ಯಾಗಿದೆ. ರೈತರಿಗೆ ಸಾಕಷ್ಟು ಯೋಜನೆಗಳನ್ನುಜಾರಿಗೊಳಿಸಿದೆ. ಬಿಜೆಪಿ ಮುಸ್ಲಿಮರ ವಿರೋಧಿಯಲ್ಲ. ದೇಶ ವಿರೋಧಿ ಚಟುವಟಿಕೆ ನಡೆಸುವವರನ್ನು ಬಿಜೆಪಿ ಸಹಿಸುವುದಿಲ್ಲ ಎಂದು ಹೇಳಿದರು.
ಶಾಸಕರ ಆಪ್ತ ಕಾರ್ಯದರ್ಶಿ ನಾಗಪ್ಪ ಶೇಖರಗೋಳ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಷ ಪಾಟೀಲ, ಮುಖಂಡರಾದ ಬಸವಂತ ಕಮತಿ, ಎಮ್. ಕೆ.ಕುಳ್ಳೂರ, ಜಯಾನಂದ ಪಾಟೀಲ, ಈರಣ್ಣ ಅಂಗಡಿ, ಅಬ್ದುಲ ಡಾಂಗೆ, ಚುನಾಯಿತ ಪ್ರತಿನಿಧಿ ಗಳು, ಸಹಕಾರಿಗಳು, ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮೂಡಲಗಿ, ಕೌಜಲಗಿ, ಹಳ್ಳೂರ, ಯಾದವಾಡ ಮುಂತಾದೆಡೆ ಜನಸಂವಾದ ಸಮಾರೋಪ ಸಮಾರಂಭವನ್ನು ವೀಕ್ಷಿಸಲು ಎಲ್ ಇಡಿ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.