ಜಾರಕಿಹೊಳಿ ಸೋದರರಿಗೆ ನಾಯಕರಿಂದ ಸಡ್ಡು?
ಉಮೇಶ ಕತ್ತಿ ಮನೆಯಲ್ಲಿ ಸಭೆ ಸವದಿ, ಜೊಲ್ಲೆ ಸಹಿತ ಹಲವರ ಉಪಸ್ಥಿತಿ
Team Udayavani, Jan 24, 2022, 6:55 AM IST
ಬೆಳಗಾವಿ: ರಾಜ್ಯ ಮತ್ತು ಜಿಲ್ಲಾ ರಾಜಕೀಯದಲ್ಲಿ ತಮ್ಮದೇ ಆದ ಪ್ರಭಾವ ಹಾಗೂ ವರ್ಚಸ್ಸು ಹೊಂದಿರುವ ಜಾರಕಿಹೊಳಿ ಸಹೋ ದರರನ್ನು ಬಿಜೆಪಿ ರಾಜಕೀಯ ಚಟುವಟಿಕೆಗಳಿಂದ ದೂರವಿಡುವ ಪ್ರಯತ್ನ ನಡೆದಿದೆ. ಇದೇ ಹಾದಿಯಲ್ಲಿ ಬಿಜೆಪಿಯ ಎಲ್ಲ ಸಮುದಾಯದ ಮುಖಂಡರೆಲ್ಲ ಒಂದಾಗಿದ್ದಾರೆ ಎಂಬ ಗುಲ್ಲು ಶುರುವಾಗಿದೆ. ಎರಡು ದಿನಗಳ ಹಿಂದೆ ಅರಣ್ಯ ಸಚಿವ ಉಮೇಶ ಕತ್ತಿ ಮನೆಯಲ್ಲಿ ನಡೆದ ಜಿಲ್ಲೆಯ ಪ್ರಮುಖ ಮುಖಂಡರ ರಹಸ್ಯ ಸಭೆ ಈ ಅನುಮಾನಗಳಿಗೆ ಆಸ್ಪದ ಮಾಡಿಕೊಟ್ಟಿದೆ.
ಸಭೆಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಸಂಸದ ಅಣ್ಣಾಸಾಹೇಬ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಮಹಾಂತೇಶ ದೊಡ್ಡಗೌಡರ, ಪಿ.ರಾಜೀವ್, ಶ್ರೀಮಂತ ಪಾಟೀಲ್, ಮಹೇಶ ಕುಮಟಳ್ಳಿ, ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ ಕೋರೆ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಮೊದಲಾದವರಿದ್ದರು. ರಮೇಶ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮಾತ್ರ ಸಭೆಗೆ ಆಹ್ವಾನ ನೀಡಿರಲಿಲ್ಲ.
ಬೆಳಗಾವಿ ಉಪಚುನಾವಣೆ, ವಿಧಾನ ಪರಿಷತ್ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿ ತಾಂಶದ ಬಳಿಕ ಜಿಲ್ಲಾ ರಾಜಕೀಯ ಮೊದಲಿ ನಂತಿಲ್ಲ ಎನ್ನಲಾಗುತ್ತಿದೆ. ಮುಖ್ಯವಾಗಿ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಸೋಲು, ಸ್ಥಳೀಯ ಸಂಸ್ಥೆಗಳಲ್ಲಿ ಪಕ್ಷದ ಹಿನ್ನಡೆಯು ರಮೇಶ ಜಾರಕಿಹೊಳಿ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಅನುಮಾನದಿಂದ ನೋಡುವಂತೆ ಮಾಡಿದೆ.
ಡಿಸಿಸಿ ಬ್ಯಾಂಕ್ ವಿಚಾರದಲ್ಲಿ ಕತ್ತಿ ಸಹೋದರರ ಜತೆ ಮುನಿಸಿಕೊಂಡಿದ್ದ ಲಕ್ಷ್ಮಣ ಸವದಿ ಅವರು ಉಮೇಶ ಕತ್ತಿ ಜತೆ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿರುವುದು ಚರ್ಚೆಗೆ ಕಾರಣವಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಚಿಹ್ನೆ ಮೇಲೆ ಸ್ಪರ್ಧಿಸುವ ಅವಕಾಶ ಇದ್ದರೂ ಪಕ್ಷೇತರರ ಹೆಸರಿನಲ್ಲಿ ತಮ್ಮ ಬೆಂಬಲಿಗರನ್ನು ನಿಲ್ಲಿಸಿ ಅವರನ್ನು ಗೆಲ್ಲಿಸಿ ತಂದಿದ್ದು, ಪಕ್ಷದ ನಿಷ್ಠಾವಂತ ಮುಖಂಡರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವು.
ಜಿಲ್ಲಾ ಉಸ್ತುವಾರಿ ಮೇಲೆ ಕಣ್ಣು
ಇನ್ನೊಂದೆಡೆ ಉಮೇಶ ಕತ್ತಿ ಅವರಿಗೆ ಜಿಲ್ಲಾ ಉಸ್ತುವಾರಿ ಮೇಲೆ ಕಣ್ಣು ಬಿದ್ದಿದೆ. ಹೀಗಾಗಿ ಜಿಲ್ಲೆಯ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಹಾಗೂ ಡಿಸಿಸಿ ಬ್ಯಾಂಕ್‌ನಲ್ಲಿ ತಮ್ಮ ಶಕ್ತಿ ಇನ್ನೂ ಗಟ್ಟಿ ಮಾಡಿಕೊಳ್ಳಲು ಈ ಸಭೆ ಕರೆದಿದ್ದರು. ಇದೇ ಸಮಯದಲ್ಲಿ ಕೆಲ ಶಾಸಕರಿಗೆ ಸಚಿವ ಸ್ಥಾನ ಹಾಗೂ ನಿಗಮ-ಮಂಡಳಿ ಆಸೆಯನ್ನೂ ಸಹ ತೋರಿಸಲಾಗಿದೆ ಎಂಬ ಮಾತುಗಳು ಸಹ ಕೇಳಿಬಂದಿವೆ. ಸಂಪುಟ ಪುನಾರಚನೆ ವೇಳೆ ಕತ್ತಿ ಹಾಗೂ ಜೊಲ್ಲೆ ಅವರನ್ನು ಕೈಬಿಡಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿವೆ.
ಸ್ಥಾನಮಾನ ಚರ್ಚೆ
ಜಿಲ್ಲಾ ರಾಜಕೀಯದ ಜತೆಗೆ ಶಿವರಾತ್ರಿ ವೇಳೆಗೆ ಸಂಪುಟ ಪುನಾರಚನೆ, ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ಹಾಗೂ ಪಿ.ರಾಜೀವ್‌ಗೆ ಸಚಿವ ಸ್ಥಾನ, ಶಾಸಕ ಅನಿಲ ಬೆನಕೆ ಹಾಗೂ ಮಹಾಂತೇಶ ದೊಡ್ಡಗೌಡರಿಗೆ ನಿಗಮದ ಅಧ್ಯಕ್ಷ ಹುದ್ದೆ ಕೊಡಿಸುವ ಚರ್ಚೆ ನಡೆದಿದೆ. ಅಲ್ಲದೆ, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ, ಬೆಳಗಾವಿ ಪಾಲಿಕೆ ಮೇಯರ್, ಉಪ ಮೇಯರ್ ಆಯ್ಕೆ ಕುರಿತೂ ಚರ್ಚಿಸಲಾಗಿದೆ.
ಇದು ಬಿಜೆಪಿ ಅಧಿಕೃತ ಸಭೆ ಅಲ್ಲ. ದಿನಕ್ಕೊಂದು ಸಭೆ ನಡೆಯುತ್ತದೆ. ಅದರ ಬಗ್ಗೆ ನಾವು ತಲೆಕೆಡಿಸಿಕೊಳ್ಳುವು ದಿಲ್ಲ. ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಈ ಸಭೆ ಮಾಡಿದ್ದಾರೆ. ಪಕ್ಷದಲ್ಲಿ ಯಾರು ಏನು ಕೆಲಸ ಮಾಡಿದ್ದಾರೆ. ಯಾರ ಕೊಡುಗೆ ಏನು ಎಂಬುದು ವರಿಷ್ಠರಿಗೆ ಗೊತ್ತಿದೆ.
-ಬಾಲಚಂದ್ರ ಜಾರಕಿಹೊಳಿ, ಶಾಸಕರು
ಇದು ಯಾರ ವಿರುದ್ಧದ ಸಭೆಯೂ ಅಲ್ಲ. ಕೆಲವು ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಕಾರಣ ತಿಳಿದುಕೊಳ್ಳಲು ನಡೆಸಿದ ಸಭೆ. ಜಾರಕಿಹೊಳಿ ಸೋದರರನ್ನು ಕರೆಯದೇ ಇರುವುದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ.
– ಅಣ್ಣಾಸಾಹೇಬ ಜೊಲ್ಲೆ, ಸಂಸದ
-ಕೇಶವ ಆದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.