ರಸ್ತೆ ಅಪಘಾತದಲ್ಲಿ ಚಿಕ್ಕೋಡಿಯ ಯೋಧ ಸಾವು : ಗ್ರಾಮದಲ್ಲಿ ನಿರವಮೌನ, ನಾಳೆ ಅಂತ್ಯಕ್ರಿಯೆ
Team Udayavani, Jul 19, 2022, 6:25 PM IST
ಚಿಕ್ಕೋಡಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದ ಬಿಎಸ್‌ಎಫ್ ಯೋಧ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಅಟೋದಿಂದ ಕೆಳಗಿಳಿಯುತ್ತಿದ್ದಾಗ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಯೋಧ ಪಶ್ಚಿಮ ಬಂಗಾಳ ರಾಜ್ಯದ ಪಂಜಿ ಪಾಡಾ ಎಂಬಲ್ಲಿ ರಸ್ತೆ ಅಪಘಾತದಲ್ಲಿ ನಿಧನವಾಗಿದ್ದಾರೆ.
ಸೂರಜ ಧೋಂಡಿರಾಮ ಸುತಾರ (30) ಸಾವನ್ನಪ್ಪಿದ ಯುವಕ. ಇತನು ಪಶ್ಚಿಮ ಬಂಗಾಳದಲ್ಲಿ ಗಡಿಭದ್ರತಾ ಪಡೆಯಲ್ಲಿ ಪೊಲೀಸ್ ಪೇದೆ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸೋಮವಾರ ಬೆಳಗ್ಗೆ ಪತ್ನಿಯೊಂದಿಗೆ ಸೇವಾ ಸ್ಥಳಕ್ಕೆ ಹೋಗುತ್ತಿದ್ದಾಗ ಅಟೋದಿಂದ ಕೆಳಗಿಳಿಯುತ್ತಿದ್ದಾಗ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಯೋಧ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದಲ್ಲಿ ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣವನ್ನು ಮುಗಿಸಿದ್ದರು. 2012 ರಲ್ಲಿ ಭಾರತೀಯ ಬಿಎಸ್‌ಎಫ್ ಸೇನೆಗೆ ಸೇರ್ಪಡೆಗೊಂಡಿದ್ದರು.ಮೃತ ಯೋಧ ಸೂರಜ ಇವರು ತಂದೆ,ಪತ್ನಿ,ಮೂರು ವರ್ಷದ ಮಗಳು,ಓರ್ವ ಸಹೋದರನ್ನು ಬಿಟ್ಟು ಅಗಲಿದ್ದಾರೆ. ಮಂಗಳವಾರ ಬೆಳಗ್ಗೆ ಸಾವಿನ ಸುದ್ದಿ ತಿಳಿಯುತ್ತಿದಂತೆ ಯಡೂರವಾಡಿ ಗ್ರಾಮದಲ್ಲಿ ನೀರವಮೌನ ಆವರಿಸಿತ್ತು.ಅವರ ಪಾರ್ಥಿವ ಶರೀರ ಬುಧವಾರ ಬೆಳಗ್ಗೆ ದೆಹಲಿಯ ಮೂಲಕ ಸಾಂಬ್ರಾ ವಿಮಾನ ನಿಲ್ದಾಣ ತಲುಪಲಿದೆ.ಬಳಿಕ ಯಡೂರವಾಡಿ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
ಇದನ್ನೂ ಓದಿ : ಜೂಲನ್ ಗೋಸ್ವಾಮಿ ಬೌಲಿಂಗ್ ಎದುರಿಸಿದ ಕೆ.ಎಲ್. ರಾಹುಲ್! ವಿಡಿಯೋ ವೈರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.