ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ
ನಾಳೆ 11 ಗಂಟೆಗೆ ಅಂತಿಮ ಕ್ರೀಯೆ
Team Udayavani, Nov 20, 2024, 7:52 PM IST
ಬೈಲಹೊಂಗಲ: ನ. 13 ರಂದು ಯಮಸಲ್ಲೇಖನ ವೃತ್ತ ಸ್ವೀಕರಿಸಿದ್ದ ಶ್ರೀ 108 ಜ್ಞಾನೇಶ್ವರ ಮುನಿ ಮಹಾರಾಜರು ತಮ್ಮ 86 ನೇ ವಯಸ್ಸಿನಲ್ಲಿ ಎಂಟು ದಿನಗಳ ನಂತರ ನ.20 ರಂದು ಸಂಜೆ 5 ದೇವಲಾಪೂರ ಕ್ಷೇತ್ರದಲ್ಲಿ ಸಮಾಧಿ ಮರಣ ಹೊಂದಿದರು.
ಇವರ ಅಂತಿಮ ದಹನ ಕ್ರೀಯಾದಿ ವಿಧಿ ವಿಧಾನಗಳು ಗುರುವಾರ (ನ.21) ಮುಂಜಾನೆ 11 ಗಂಟೆಗೆ ದೇವಲಾಪೂರ ಗ್ರಾಮದ ಅಷ್ಟಮ ನಂದೀಶ್ವರ ಕ್ಷೇತ್ರದಲ್ಲಿ ಜರುಗಲಿದೆ. ಅಪಾರ ಭಕ್ತ ಸಮೂಹ ಹೊಂದಿದ್ದ ಮುನಿಗಳು ದೇವಲಾಪೂರ ಗ್ರಾಮದಲ್ಲಿ ಅಷ್ಟಮ ನಂದೀಶ ಕ್ಷೇತ್ರದ ಸಂಸ್ಥಾಪಕರಾಗಿದ್ದರು. ಜ್ಞಾನತೀರ್ಥ ವಿದ್ಯಾಪೀಠ ಶಿಕ್ಷಣ ಸ್ಥಾಪಿಸಿದ್ದಾರೆ. 300 ಕ್ಕೂ ಹೆಚ್ಚು ಗ್ರಾಮೀಣ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಶಿಕ್ಷಣ ಸಂಸ್ಥೆಯಲ್ಲಿ ಲೌಕೀಕ ಶಿಕ್ಷಣದೊಂದಿಗೆ ಧಾರ್ಮಿಕ, ಮೌಲ್ಯ ಶಿಕ್ಷಣ ನಡೆದಿದೆ. ಕುಲಭೂಷಣ ಅಲ್ಪಸಂಖ್ಯಾತರ ಕ್ರೆಡಿಟ್ ಸೊಸೈಟಿ ಸ್ಥಾಪಿಸಿ ಗ್ರಾಮೀಣ ಜನರ ಆರ್ಥಿಕತೆಗೆ ಅನುಕೂಲತೆ ಮಾಡಿದ್ದರು. ಧಾರವಾಡ, ಬೆಳಗಾವಿ ಜಿಲ್ಲೆಯ ನೂರಕ್ಕೂ ಹೆಚ್ಚು ಗ್ರಾಮಗಳಲ್ಲಿ ಜೀನ ಮಂದಿರಗಳನ್ನು ಕಟ್ಟಿಸಿ ಜನರ ಕಲ್ಯಾಣಕ್ಕೆ ನೆರವಾಗಿದ್ದರು. ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ಜಯಕೀರ್ತಿ ವಿದ್ಯಾಪೀಠ, ಸಹಕಾರಿ ಸಂಘ, ಜೀನ ಮಂದಿರಗಳನ್ನು ನಿರ್ಮಿಸಿದ್ದಾರೆ. ಪೂಜ್ಯರು 108 ಸಮೇದ ಶಿಖರಜಿಯ ಯಾತ್ರೆ, 5 ಬಾರಿ ಸಂಘದೊಂದಿಗೆ ಪಾದಯಾತ್ರೆ ಕೂಡಾ ಮಾಡಿದ್ದಾರೆ.
ಮುನಿಗಳು ಗರಗ ಗ್ರಾಮದ ಬಡ ಕುಟುಂಬದಲ್ಲಿ ಜನಿಸಿ ಸ್ವ ಸಾಧನೆಯಿಂದ ತಹಶೀಲ್ದಾರ ಹುದ್ದೆಯ ಮೂಲಕ ಜನಸೇವೆ ಮಾಡಿ ನಂತರ ನಿವೃತ್ತಿ ನಂತರ ಮುನಿ ಧೀಕ್ಷೆ ಪಡೆದು ಲೋಕ ಕಲ್ಯಾಣಕ್ಕಾಗಿ, ಧರ್ಮ ಜಾಗೃತಿಗಾಗಿ ತಮ್ಮ ಜೀವನವನ್ನೆ ಮುಡುಪಾಗಿಟ್ಟು ಸಮಾಜ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಅಪಾರ ಭಕ್ತ ಸಮೂಹ ಮರಣ ಮಹೋತ್ಸವ ಆಚರಣೆಯಲ್ಲಿ ತೊಡಗಿದೆ.
ಇದನ್ನೂ ಓದಿ: Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು
Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
NABARD loan 58 % ಕಡಿತ: ಚರ್ಚೆಗೆ ನಿರ್ಮಲಾ ಬಳಿ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್‌ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Bhagyanagar: ಹೈದರಾಬಾದ್ ಅಲ್ಲ, ಭಾಗ್ಯನಗರ: ಆರೆಸ್ಸೆಸ್ ಮತ್ತೆ ಹಕ್ಕೊತ್ತಾಯ
Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.