12 ಮಸೂದೆ ಮಂಡನೆ, 9 ಅಂಗೀಕಾರ: ಕಾಗೇರಿ
Team Udayavani, Dec 31, 2022, 7:05 AM IST
ಬೆಳಗಾವಿ : ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಒಟ್ಟು 12 ಮಸೂದೆಗಳನ್ನು ಮಂಡಿಸಲಾಗಿದ್ದು, ಈ ಪೈಕಿ 9 ಅಂಗೀಕಾರಗೊಂಡಿದೆ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು 9 ದಿನಗಳ ಅಧಿವೇಶನದಲ್ಲಿ 41 ಗಂಟೆ 20 ನಿಮಿಷಗಳ ಕಾಲ ಕಲಾಪ ನಡೆದಿದೆ. ಶಾಸಕರ ಒಟ್ಟು ಹಾಜರಾತಿ ಶೇ.75ರಷ್ಟಿದ್ದು, ಇದು ತೃಪ್ತಿ ತಂದಿಲ್ಲ. ದಿನೇಶ್ ಗುಂಡೂರಾವ್, ಹರೀಶ್ ಪೂಂಜ, ಕೃಷ್ಣಪ್ಪ, ಜಮೀರ್ ಅಹ್ಮದ್ ಹಾಗೂ ಅನಿತಾ ಕುಮಾರಸ್ವಾಮಿ ಸಹಿತ 9 ಶಾಸಕರು ಅನುಮತಿ ಪಡೆಯದೆ ಸದನಕ್ಕೆ ಗೈರಾಗಿದ್ದರು ಎಂದರು.
ಕಲಾಪದಲ್ಲಿ ಒಟ್ಟು 2,125 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಸದನ ದಲ್ಲಿ ಉತ್ತರಿಸಬೇಕಿದ್ದ 150 ಪ್ರಶ್ನೆಗಳ ಪೈಕಿ 146ಕ್ಕೆ ಉತ್ತರಿಸಲಾಗಿದೆ. ಲಿಖೀತ ಉತ್ತರ ಬಯಸಿದ 1,923 ಪ್ರಶ್ನೆಗಳ ಪೈಕಿ 1,614 ಪ್ರಶ್ನೆಗಳಿಗೆ ಉತ್ತರ ಸ್ವೀಕರಿಸಲಾಗಿದೆ. ಗಮನಸೆಳೆಯುವ 289 ಸೂಚನೆಗಳ ಪೈಕಿ 85ನ್ನು ಚರ್ಚಿ ಸಲಾಗಿದೆ. ಮಹಾರಾಷ್ಟ್ರದ ಜನತೆಯು ಅನಾವಶ್ಯಕವಾಗಿ ಸೃಷ್ಟಿಸಿ ರುವ ಗಡಿ ವಿವಾದವನ್ನು ಖಂಡಿಸಿ ರಾಜ್ಯದ ಹಿತರಕ್ಷಣೆಗೆ ಕಟಿಬದ್ಧರಾಗಿರುವುದಾಗಿ ಸದನವು ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ ಎಂದು ಹೇಳಿದರು.
ಮುಖ್ಯವಾಗಿ ಸದನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚಿನ ಚರ್ಚೆಯಾಗಬೇಕಿತ್ತು. ಇದು ಎಲ್ಲರ ನಿರೀಕ್ಷೆ. ಹೆಚ್ಚಿನ ಕಾಲಾವಕಾಶ ಸಿಗದಿದ್ದರೂ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ವಿಶೇಷ ಚರ್ಚೆ ನಡೆಸಲಾಗಿದೆ. ಮುಂದಿನ ಅಧಿವೇಶನದಲ್ಲಿ ಮೊದಲ ವಾರದ ಕಲಾಪದಲ್ಲೇ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಚರ್ಚೆ ಮಾಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಹೇಳಿದರು.
ಸಭಾಧ್ಯಕ್ಷರಿಗೆ ಅಧಿಕಾರ
2021-22ನೇ ಸಾಲಿನ ವಿಧಾನಮಂಡಲದ ವಿವಿಧ ಜಂಟಿ ಸಮಿತಿಗಳು ಮತ್ತು ವಿಧಾನಸಭೆಯ ವಿವಿಧ ಸಮಿತಿಗಳನ್ನು ಪುನರ್‌ರಚನೆ ಮಾಡಲು ಸದನವು ಸಭಾಧ್ಯಕ್ಷರಿಗೆ ಅಧಿಕಾರ ನೀಡಿದೆ. ಒಂದು ಹಕ್ಕುಚ್ಯುತಿ ಪ್ರಸ್ತಾವವನ್ನು ಸದನದಲ್ಲಿ ಮಂಡಿಸಿದ್ದು, ಈ ಬಗ್ಗೆ ಚರ್ಚಿಸಿ ತಿರಸ್ಕರಿಸಲಾಗಿದೆ. ಸದನದಲ್ಲಿ ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 2022-23ನೇ ಸಾಲಿನ ಪೂರಕ ಅಂದಾಜುಗಳ ಎರಡನೇ ಕಂತು ಹಾಗೂ 2022-23ನೇ ಸಾಲಿನ ರಾಜ್ಯ ಹಣಕಾಸಿನ ಮಧ್ಯವಾರ್ಷಿಕ ಪರಿಶೀಲನಾ ವರದಿ ಮಂಡಿಸಿದ್ದು, ಡಿ.29ರಂದು ಮತಕ್ಕೆ ಹಾಕಿ ಅಂಗೀಕರಿಸಲಾಗಿದೆ. 2021ನೇ ಸಾಲಿನ ಬಂದಿಗಳ ಗುರುತಿಸುವಿಕೆ (ಕರ್ನಾಟಕ ತಿದ್ದುಪಡಿ) ಮಸೂದೆಯನ್ನು ಹಿಂಪಡೆಯಲಾಗಿದೆ ಎಂದರು.
ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಪೊಲೀಸ್ ಆಯುಕ್ತ ಎಂ.ಬಿ.ಬೋರಲಿಂಗಯ್ಯ, ಜಿಪಂ ಸಿಇಒ ದರ್ಶನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.