ಕಲ್ಲೋಳ-ಯಡೂರು ಸೇತುವೆ ಜಲಾವೃತ
ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿಹೆಚ್ಚಿದ ಮಳೆಕೃಷ್ಣೆ-ಉಪನದಿ ಒಳಹರಿವು ಹೆಚ್ಚಳ
Team Udayavani, Jul 17, 2021, 8:38 PM IST
ಚಿಕ್ಕೋಡಿ: ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದ ಕೊಂಕಣ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಗಡಿ ಜಿಲ್ಲೆಯ ಕೃಷ್ಣಾ ನದಿ ಒಳಹರಿವು ಹೆಚ್ಚಳವಾಗಿ ಚಿಕ್ಕೋಡಿ ತಾಲೂಕಿನ ಕಲ್ಲೋಳ-ಯಡೂರು ಸಂಪರ್ಕ ಸೇತುವೆ ಶುಕ್ರವಾರ ಜಲಾವೃತಗೊಂಡಿದೆ.
ಸದ್ಯಕ್ಕೆ ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್ ಮೂಲಕ ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ 56 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿದು ಬರುತ್ತಿದೆ. ನೀರಿನ ಪ್ರಮಾಣ ಹೆಚ್ಚಳವಾಗುತ್ತಿದ್ದು ನದಿ ತೀರದ ಜನರಲ್ಲಿ ಆತಂಕ ಮನೆಮಾಡಿದೆ. ಈಗಾಗಲೇ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಜಾರಿ ಮಾಡಲಾಗಿದೆ.
ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿ ಕಳೆದೆರಡು ದಿನಗಳಿಂದ ಜಿಟಿಜಿಟಿ ಮಳೆ ಆಗುತ್ತಿದೆ. ಮಹಾರಾಷ್ಟ್ರದ ರಾಜಾಪೂರ ಬ್ಯಾರೆಜ್‌ನಿಂದ 44,750 ಕ್ಯೂಸೆಕ್, ದೂಧಗಂಗಾ ನದಿಯಿಂದ 11,649 ಕ್ಯೂಸೆಕ್ ನೀರು ಸೇರಿದಂತೆ ಒಟ್ಟು 56 ಸಾವಿರ ಕ್ಯೂಸೆಕ್‌ಗೂ ಅ ಧಿಕ ನೀರು ಕೃಷ್ಣಾ ನದಿಗೆ ಹರಿದು ಬರುತ್ತಿದೆ.
ಮಹಾರಾಷ್ಟ್ರದ ಜಲಾನಯನ ಪ್ರದೇಶವಾದ ಕೊಯ್ನಾ- 23 ಮಿ.ಮೀ, ನವಜಾ-70 ಮಿ.ಮೀ, ಮಹಾಬಲೇಶ್ವರ-57 ಮಿ.ಮೀ, ವಾರಣಾ-10 ಮಿ.ಮೀ, ಕಾಳಮ್ಮವಾಡಿ-15 ಮಿ.ಮೀ, ರಾಧಾನಗರಿ-42 ಮಿ.ಮೀ, ಪಾಟಗಾಂವ-104 ಮಿ.ಮೀ ಮಳೆಯಾಗಿದೆ. ಹಿಪ್ಪರಗಿ ಬ್ಯಾರೆಜ್‌ನಿಂದ 44,750 ಕ್ಯೂಸೆಕ್ ನೀರನ್ನು ಆಲಮಟ್ಟಿ ಜಲಾಶಯಕ್ಕೆ ಬಿಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ
Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್ ಮೇಲೇ ಕಣ್ಣು!
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.