ಸುವರ್ಣ ಸೌಧದಲ್ಲಿ ಕನ್ನಡ ಡಿಂಡಿಮ
ದೈನಂದಿನ ವ್ಯವಹಾರಗಳಲ್ಲಿ ಕನ್ನಡ ಭಾಷೆಯನ್ನೇ ಬಳಸುವ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.
Team Udayavani, Oct 29, 2021, 7:28 PM IST
ಬೆಳಗಾವಿ: ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ, ವಿವಿಧ ಸಂಘಟನೆಗಳ ಪ್ರತಿಭಟನೆ ಮಾತ್ರ ಕೇಳುತ್ತಿದ್ದ ಸುವರ್ಣ ವಿಧಾನಸೌಧದ ಆವರಣದಲ್ಲಿ ಗುರುವಾರ ಕನ್ನಡದ ಕಂಪು ಮಾರ್ದನಿಸಿತು. ಸಾವಿರಾರು ಕನ್ನಡ ಅಭಿಮಾನಿಗಳು ಒಂದೇ ಸ್ವರದಲ್ಲಿ ಕನ್ನಡ ಹಾಡುಗಳನ್ನು ಹಾಡುವ ಮೂಲಕ ಗಡಿ ಜಿಲ್ಲೆಯಲ್ಲಿ ಕನ್ನಡದ ಕಂಪು ಪಸರಿಸಿದರು. ಸಾವಿರಾರು ಕಂಠದಲ್ಲಿ ಮೊಳಗಿದ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು, ಬಾರಿಸು ಕನ್ನಡ ಡಿಂಡಿಮವ ಗಾಯನ ಅಲೆ ಅಲೆಯಾಗಿ ತೇಲಿದವು. ಈ ವಿಶಿಷ್ಟ ಕಾರ್ಯಕ್ರಮ ಗಡಿ ಭಾಗದಲ್ಲಿ ಕನ್ನಡದ ಬೇರುಗಳು ಮತ್ತಷ್ಟು ಗಟ್ಟಿಗೊಳ್ಳುವಂತೆ ಮಾಡಿತು.
ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗಿರುವ ಲಕ್ಷ ಕಂಠ ಕನ್ನಡ ಗೀತಗಾಯನ ಕಾರ್ಯಕ್ರಮದ ಅಂಗವಾಗಿ ಕನ್ನಡಕ್ಕಾಗಿ ನಾವು ಅಭಿಯಾನದಲ್ಲಿ ಸುವರ್ಣ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಲಕ್ಷ ಕಂಠ ಗೀತಗಾಯನ ನಡೆಯಿತು. ಸಾವಿರಾರು ವಿದ್ಯಾರ್ಥಿಗಳು, ಅಧಿಕಾರಿಗಳು ಗಾಯನವನ್ನು ಪ್ರಸ್ತುತಪಡಿಸಿದರು.
ರಾಷ್ಟ್ರಕವಿ ಕುವೆಂಪು ವಿರಚಿತ ಬಾರಿಸು ಕನ್ನಡ ಡಿಂಡಿಮವ, ನಿಸಾರ್ ಅಹಮದ್ ಅವರ ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಗೀತೆಗಳನ್ನು ಸಾವಿರಾರು ವಿದ್ಯಾರ್ಥಿಗಳು ಸುಮಧುರವಾಗಿ ಹಾಡುವ ಮೂಲಕ ಕನ್ನಡ ನಾಡು-ನುಡಿಯ ಪ್ರೇಮವನ್ನು ಅನಾವರಣಗೊಳಿಸಿದರು.
ಸಂಗೀತ ಶಿಕ್ಷಕರಾದ ವಿನಾಯಕ ಮೋರೆ ನೇತೃತ್ವದಲ್ಲಿ ಬೆಳಗಾವಿಯ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಗೀತಗಾಯನ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿ ಎಲ್ಲರ ಗಮನಸೆಳೆದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸುವರ್ಣ ಸೌಧದಲ್ಲಿ ಕನ್ನಡ ಡಿಂಡಿಮ
ಆಡಳಿತ, ಪತ್ರವ್ಯವಹಾರ ಸೇರಿದಂತೆ ಪ್ರತಿ ಸಂದರ್ಭದಲ್ಲೂ ಕನ್ನಡವನ್ನೇ ಬಳಸುವುದರ ಜೊತೆಗೆ ಕನ್ನಡ ನಾಡಿನಲ್ಲಿ ವಾಸಿಸುವ ಕನ್ನಡೇತರ ಭಾಷಿಕರಿಗೆ ಪ್ರೀತಿಯಿಂದ ಕನ್ನಡವನ್ನು ಕಲಿಸುವುದಾಗಿ ಎಲ್ಲರೂ ಪ್ರತಿಜ್ಞೆ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಬೆಳಗಾವಿ ಸಂಸದರಾದ ಮಂಗಲಾ ಅಂಗಡಿ ಅವರು, ಕನ್ನಡದ ಶ್ರೇಷ್ಠತೆಯನ್ನು ಸಾರುವುದು ಈ ಅಭಿಯಾನದ ವಿಶೇಷತೆಯಾಗಿದೆ. ಕನ್ನಡ ಗೀತಗಾಯನ ಅದ್ಭುತ ಕಾರ್ಯಕ್ರಮವಾಗಿದ್ದು, ಮಕ್ಕಳು ಸೇರಿದಂತೆ ಎಲ್ಲರೂ ಕನ್ನಡ ಪ್ರೇಮ ಮೆರೆಯಲು ಈ ಅಭಿಯಾನ ಉತ್ತಮ ಅವಕಾಶವಾಗಿದೆ ಎಂದು ಹೇಳಿದರು.
ಈ ವಿನೂತನ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎ.ಬಿ.ಪುಂಡಲೀಕ ಮೊದಲಾದವರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ ಸ್ವಾಗತಿಸಿದರು. ಗೀತ ಗಾಯನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಕನ್ನಡ ಜಾಗೃತ ಸಮಿತಿ ಸದಸ್ಯರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.