ನಾಮಫಲಕದಲ್ಲಿ ಕನ್ನಡ ಕಡ್ಡಾಯ: ಡಿಸಿ
|ಕನ್ನಡ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ |ಸಭೆ ನಿಯಮಿತವಾಗಿ ನಡೆಸಲು ಸೂಚನೆ
Team Udayavani, Jul 12, 2019, 8:44 AM IST
ಬೆಳಗಾವಿ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕನ್ನಡ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ| ಎಸ್.ಬಿ. ಬೊಮ್ಮನಹಳ್ಳಿ ಮಾತನಾಡಿದರು.
ಬೆಳಗಾವಿ: ಜಾಹೀರಾತು ಫಲಕಗಳಲ್ಲಿ ನಿಯಮಾವಳಿ ಪ್ರಕಾರ ಇಂತಿಷ್ಟು ಪ್ರಮಾಣದಲ್ಲಿ ಕನ್ನಡ ಬಳಕೆ ಮಾಡುವ ಕುರಿತು ಸಂಬಂಧಪಟ್ಟ ಜಾಹೀರಾತುದಾರರಿಗೆ ನೋಟಿಸ್ ನೀಡಿದ ಬಳಿಕ ಮುಂದಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ| ಎಸ್.ಬಿ. ಬೊಮ್ಮನಹಳ್ಳಿ ಅವರು ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕನ್ನಡ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅಂಗಡಿ-ಮುಂಗಟ್ಟುಗಳ ಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿರುವಂತೆ ಪಾಲಿಕೆ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿ ಅನ್ಯ ಭಾಷೆಗೆ ಪ್ರಾಧಾನ್ಯತೆ ನೀಡಿದರೆ ಅಂಥವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಜಾಹೀರಾತು ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸುವ ಬಗ್ಗೆ ಪ್ರತಿ ಸಭೆಯಲ್ಲೂ ಚರ್ಚೆ ನಡೆಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಮೇಯರ್ ಸಿದ್ದನಗೌಡ ಪಾಟೀಲ ಒತ್ತಾಯಿಸಿದರು. ಕನ್ನಡ ಅನುಷ್ಠಾನದಲ್ಲಿ ಯಾವುದೇ ಇಲಾಖೆ ನಿರ್ಲಕ್ಷ್ಯ ತೋರಿಸಿದರೆ ಕ್ರಮ ಕೈಗೊಳ್ಳುವಂತೆ ಕೋರಿ ಸರ್ಕಾರಕ್ಕೆ ವರದಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ| ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತಿ ಸಮಿತಿಯ ಸದಸ್ಯ ಅನಂತಕುಮಾರ್ ಬ್ಯಾಕೂಡ ಮಾತನಾಡಿ, ಪ್ರತಿ ಮೂರು ತಿಂಗಳಿಗೊಮ್ಮೆ ಕನ್ನಡ ಅನುಷ್ಠಾನ ಸಭೆಯನ್ನು ನಿಯಮಿತವಾಗಿ ನಡೆಸಬೇಕು. ಸರ್ಕಾರಿ ಕಚೇರಿಗಳಲ್ಲಿ ನಡೆಯುವ ಪತ್ರ ವ್ಯವಹಾರಗಳ ಕುರಿತು ನಿಗದಿತ ನಮೂನೆಯ ಮಾಹಿತಿಯನ್ನು ಕನ್ನಡ ಜಾಗೃತಿ ಸಮಿತಿಯ ಗಮನಕ್ಕೆ ತರುತ್ತಿಲ್ಲ. ಮುಂಬರುವ ದಿನಗಳಲ್ಲಿ ಸಮಿತಿ ಸದಸ್ಯರಿಗೂ ಸಭೆಗಿಂತ ಮುಂಚೆ ಮಾಹಿತಿ ಸಲ್ಲಿಸುವಂತೆ ಒತ್ತಾಯಿಸಿದರು.
ಕನ್ನಡದಲ್ಲಿ ದೋಷಾರೋಪಣೆ ಪಟ್ಟಿ: ಪೊಲೀಸ್ ಇಲಾಖೆಯಲ್ಲಿ ಕೆಲವು ಅನಿವಾರ್ಯ ಪ್ರಸಂಗ ಹೊರತುಪಡಿಸಿ ದರೆ ಬಹುತೇಕ ಆಡಳಿತ ವ್ಯವಹಾರ ಕನ್ಮಡದ ಲ್ಲಿಯೇ ನಡೆಯುತ್ತಿದೆ. ನ್ಯಾಯಾಲಯಕ್ಕೆ ಪ್ರಥಮ ವರ್ತಮಾನ ವರದಿ ಹಾಗೂ ದೋಷಾರೋಪಣೆ ಪಟ್ಟಿಯನ್ನು ಕನ್ನಡದಲ್ಲಿಯೇ ಸಲ್ಲಿಸಲಾಗುತ್ತಿದೆ ಎಂದು ಮಹಾನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶಕುಮಾರ ತಿಳಿಸಿದರು.
ಶಿಕ್ಷಣ ಇಲಾಖೆ, ಸಹಕಾರ ಸಂಘಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳ ಪ್ರತಿನಿಧಿಗಳನ್ನು ಕರೆಸುವ ಅಗತ್ಯವಿದೆ. ಅದೇ ರೀತಿ ಚಿಕ್ಕೋಡಿ ಉಪ ವಿಭಾಗದ ವ್ಯಾಪ್ತಿಯಲ್ಲಿ ಕೆಲವು ನಗರಸಭೆ, ಪುರಸಭೆ ಸೇರಿಂದತೆ ಕೆಲ ಸ್ಥಳೀಯ ಸಂಸ್ಥೆಗಳು ಮರಾಠಿ ಫಲಕಗಳನ್ನು ಅಳವಡಿಸುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒಕ್ಕೊರಲಿನಿಂದ ಆಗ್ರಹಿಸಲಾಯಿತು.
ಈ ಬಗ್ಗೆ ಒಂದು ಸಭೆ ನಡೆಸಿ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಕನ್ನಡ ಫಲಕ ಬಳಕೆಗೆ ನಿರ್ದೇಶನ ನೀಡುವಂತೆ ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿ, ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರಗಳನ್ನು ತಮ್ಮ ಕಚೇರಿಯ ಆಡಳಿತ ವೆಚ್ಚದಲ್ಲಿ ಅಳವಡಿಸುವಂತೆ ತಿಳಿಸಿದರು.
ಗಡಿ ತಾಲೂಕುಗಳಲ್ಲಿರುವ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ತಕ್ಷಣ ನಿಯೋಜಿಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಡಾ| ಬೂದೆಪ್ಪ ಎಚ್.ಬಿ., ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಉಪ ವಿಭಾಗಾಧಿಕಾರಿ ಡಾ| ಕವಿತಾ ಯೋಗಪ್ಪನವರ, ಶಿವಾನಂದ ಭಜಂತ್ರಿ, ರವಿ ಸೋಮಲಿಂಗಣ್ಣವರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
PAK Vs SA: ಸರಣಿ ಕ್ಲೀನ್ ಸ್ವೀಪ್ ಗೈದ ಪಾಕಿಸ್ಥಾನ
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
BCCI: ಇನ್ನೆರಡು ಟೆಸ್ಟ್ ನಿಂದ ಮೊಹಮ್ಮದ್ ಶಮಿ ಹೊರಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.