ಜನರ ಕೆಂಗಣ್ಣಿಗೆ ಕಾಂಗ್ರೆಸ್ ಗುರಿಯಾಗಿದೆ: ಕಾರಜೋಳ
Team Udayavani, Dec 19, 2022, 1:07 PM IST
ಬೆಳಗಾವಿ: ವೀರ್ ಸಾವರ್ಕರ್ ಫೋಟೋ ಅನಾವರಣ ಮಾಡುವುದರಿಂದ ಕಾಂಗ್ರೆಸ್ ಗೆ ಏನ್ ಆಗುತ್ತದೆಯೋ ಗೊತ್ತಿಲ್ಲ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.
ಈ ಕುರಿತು ಮಾತನಾಡಿದ ಅವರು, ಸಾವರ್ಕರ್ ಈ ದೇಶದ ಗೌರವಾನ್ವಿತ ವ್ಯಕ್ತಿ,ದೇಶಕ್ಕಾಗಿ ಹೋರಾಟ ಮಾಡಿದ ಯಶಸ್ಸು ಅವರಿಗೆ ಸಲ್ಲುತ್ತದೆ. ಕಾಂಗ್ರೆಸ್ ನವ್ರು ಈಗಾಗಲೇ ವಿವೇಚನಾ ರಹಿತವಾದಂತಹ ವಿಚಾರಗಳನ್ನು ಪ್ರಸ್ತಾಪಿಸಿ, ದೇಶದ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಷ್ಟೇ ಅಲ್ಲದೇ ದೇಶದಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನ ತಿರಸ್ಕರಿಸಿದ್ದಾರೆ. ಈಗಲೂ ಅವರಿಗೆ ಬುದ್ದಿ ಬಂದಿಲ್ಲ ಅಂದರೆ ಜನರೇ ತಿರ್ಮಾನ ಮಾಡುತ್ತಾರೆ ಎಂದರು.
ಬಸವಣ್ಣ, ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿಜೀ ಸೇರಿದಂತೆ ಇನ್ನೂ ಹಲವು ನಾಯಕರ ಫೋಟೋ ಹಾಕುತ್ತೇವೆ, ಬಸವಣ್ಣನವರ ಬಗ್ಗೆ ಕಾಂಗ್ರೆಸ್ ನಿಂದ ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದರು.
ಜನರು ಕಾಂಗ್ರೆಸನ್ನು ತಿರಸ್ಕರ ಮಾಡಿದ್ದಕ್ಕೆ ಅವರು ಬೀದಿಗೆ ಬಿದ್ದಿದ್ದಾರೆ. ಅವರ ಪಾಲಿಗೆ ಇರುವಂತದ್ದು, ಬೀದಿ ಹೋರಾಟ. ಅವರಿಗೆ ಅಧಿಕಾರ ನಡೆಸಲು ಈ ದೇಶನ ಜನ ಒಪ್ಪುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ವೋಟ್ ಗಳನ್ನು ತೆಗೆದು ಹಾಕಲು ಕಾಂಗ್ರೆಸ್ ನವರು ಹುನ್ನಾರ ನಡೆಸುತ್ತಿದ್ದಾರೆ. ಈಗಾಗಲೇ ನನ್ನ ಮತ ಕ್ಷೇತ್ರದ ಕೆಲ ಹಳ್ಳಿಗಳಿಂದಲೂ ಈಗಾಗಲೇ ದೂರುಗಳು ಬಂದಿವೆ. ಈ ರೀತಿಯಾದ ವೋಟ್ ಗಳನ್ನ ತೆಗೆದು ಹಾಕುವ ನಿಟ್ಟಿನಲ್ಲಿ ಎಲ್ಲಾ ಕಡೆ ಗದ್ದಲವನ್ನ ಮಾಡುತ್ತಿದ್ದಾರೆ. ಈ ರೀತಿ ಸ್ವಾತಂತ್ರ್ಯ ನಂತರದ ಮಾಡಿರುವ ಅಪರಾಧದ ಹಿನ್ನೆಲೆಯಿಂದಲೇ ಕಾಂಗ್ರೆಸನ್ನು ದೇಶದಲ್ಲಿ ತಿರಸ್ಕರಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್ ಮೀನಾ ಬಂಧನ!
Constitution: ಪ್ರಧಾನಿ ಸಂವಿಧಾನ ಓದಿಲ್ಲ, ಇದಕ್ಕೆ ನಾನು ಗ್ಯಾರಂಟಿ: ರಾಹುಲ್
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.