Karnataka polls ನಾಮಪತ್ರ ಸಲ್ಲಿಕೆ: ಲಕ್ಷ್ಮೀ ಹೆಬ್ಬಾಳಕರ ಶಕ್ತಿ ಪ್ರದರ್ಶನ
Team Udayavani, Apr 18, 2023, 4:46 PM IST
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಪಾರ ಜನಸ್ತೋಮದೊಂದಿಗೆ ಮೆರವಣಿಗೆ ಮೂಲಕ ಮಂಗಳವಾರ ನಾಮಪತ್ರ ಸಲ್ಲಿಸಲು ಆಗಮಿಸಿ ಶಕ್ತಿ ಪ್ರದರ್ಶನ ನಡೆಸಿದರು.
ಸುಕ್ಷೇತ್ರ ಸುಳೇಭಾವಿ ಶ್ರೀ ಮಹಾಲಕ್ಷ್ಮಿ ದೇವಿ ಹಾಗೂ ಉತ್ಸವದ ಶ್ರೀ ಮಳೆಕರಣಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಹಿಂಡಲಗಾ ಶ್ರೀ ಗಣೇಶ ಮಂದಿರದಲ್ಲಿ ಪೂಜೆ ಸಲ್ಲಿಸಿ ತೆರೆದ ವಾಹನದಲ್ಲಿ ಮೆರವಣಿಗೆ ಆರಂಭಿಸಿದರು.
ಅಪಾರ ಜನಸ್ತೋಮದ ಮಧ್ಯೆ ಮೆರವಣಿಗೆಯಲ್ಲಿ ಆಗಮಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಅನೇಕ ಮುಖಂಡರೊಂದಿಗೆ ಮೆರವಣಿಗೆ ರ್ಯಾಲಿ ನಡೆಸಿದರು.
ಇದನ್ನೂ ಓದಿ:“ಸಮಂತಾಳ ಸಿನಿಮಾ ಕೆರಿಯರ್ ಮುಗಿಯಿತು, ಆಕೆ ಸ್ಟಾರ್ ನಟಿಯಲ್ಲ..”: ಟಾಲಿವುಡ್ ನಿರ್ಮಾಪಕ
ಸಿ ಪಿ ಎಡ್ ಮೈದಾನದಿಂದ ಆರಂಭವಾದ ಮೆರವಣಿಗೆ ಉದ್ದಕ್ಕೂ ಸಹಸ್ರಾರು ಸಂಖ್ಯೆಯ ಕಾರ್ಯಕರ್ತರು ಕಾಂಗ್ರೆಸ್ ಬಾವುಟ ಹಿಡಿದುಕೊಂಡು ಪಾಲ್ಗೊಂಡಿದ್ದರು. ಧೋಲ್ ತಾಶ ಡೊಳ್ಳು ವಾದನ ಸೇರಿದಂತೆ ವಿವಿಧ ವಾದ್ಯ ಮೇಳಗಳು ಮೆರವಣಿಗೆಯಲ್ಲಿ ಇದ್ದವು.
ಚುನಾವಣಾ ಅಧಿಕಾರಿ ರಾಜಶೇಖರ ಡಂಬಳ ಅವರಿಗೆ ಲಕ್ಷ್ಮೀ ಹೆಬ್ಬಾಳಕರ ನಾಮಪತ್ರ ಸಲ್ಲಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.