ಮೈತ್ರಿ ಸರ್ಕಾರ ಪತನವಾದರೆ ನಾವು ಜವಾಬ್ದಾರರಲ್ಲ: ಸತೀಶ
Team Udayavani, Sep 17, 2018, 6:00 AM IST
ಬೆಳಗಾವಿ: ಕಾಂಗ್ರೆಸ್‌ನ ಬೇರೆ ಶಾಸಕರಿಂದ ಸಮ್ಮಿಶ್ರ ಸರ್ಕಾರ ಪತನವಾದರೆ ನಾವು ಜವಾಬ್ದಾರರಲ್ಲ. ಅದಕ್ಕೆ ನಾವೇನೂ ಮಾಡಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಖಂಡ ಸತೀಶ ಜಾರಕಿಹೊಳಿ ಮೈತ್ರಿ ಸರ್ಕಾರ ಅಪಾಯದಲ್ಲಿದೆ ಎಂಬ ಸುಳಿವು ನೀಡಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ. ನಮ್ಮಿಂದ ಸರ್ಕಾರಕ್ಕೆ ಅಪಾಯವೂ ಇಲ್ಲ. ಇನ್ನೂ 24 ಗಂಟೆಗಳು ಬಾಕಿಯಿವೆ. ಆಗ ಏನು ಬೇಕಾದರೂ ಆಗಬಹುದು. ಬಿಜೆಪಿಯವರು ಆಪರೇಷನ್ ಕಮಲ ನಡೆಸಿರಬಹುದು. ಕೆಲವು ಶಾಸಕರು ಕಾಂಗ್ರೆಸ್‌ನಿಂದ ಆ ಪಕ್ಷಕ್ಕೆ ಹೋಗುತ್ತಿರಬಹುದು. ಹಣ ಕೊಟ್ಟು ಶಾಸಕರನ್ನು ಖರೀದಿಸುತ್ತಿದ್ದಾರೆಂಬ ಆರೋಪಗಳೂ ಕೇಳಿ ಬಂದಿವೆ. ಆದರೆ ಇದರ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಕಾಂಗ್ರೆಸ್ ತೊರೆದು ಬಿಜೆಪಿಗೆ ಕೆಲ ಶಾಸಕರು ಹೋಗುವ ನಿರ್ಧಾರ ಮಾಡಿದ್ದರೆ ನಾವು ಏನೂ ಮಾಡಲು ಆಗುವುದಿಲ್ಲ. ಅದು ಅವರ ವೈಯಕ್ತಿಕ ವಿಷಯ. ಹೀಗಾಗಿ ಪಕ್ಷ ಬಿಟ್ಟು ಹೋಗುವವರ ಬಗ್ಗೆ ನಮಗೆ ಹೇಳಲಿಕ್ಕೆ ಆಗುವುದಿಲ್ಲ. ಈ ಎಲ್ಲ ಬೆಳವಣಿಗೆಯ ನಡುವೆಯೂ ಸರ್ಕಾರ ಸುಭದ್ರವಾಗಿರಲಿದೆ ಎಂಬ ವಿಶ್ವಾಸವಿದೆ ಎಂದರು.
ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಬಳಿ ಚರ್ಚಿಸಲು ಯಾವುದೇ ವಿಷಯವಿಲ್ಲ. ಸೋಮವಾರ ಬೆಂಗಳೂರಿಗೆ ಹೋಗುತ್ತಿದ್ದೇನೆ. ಒಂದು ವೇಳೆ ಅವರು ಮಾತುಕತೆಗೆ ಕರೆದರೆ ಹೋಗುತ್ತೇನೆ ಎಂದರು.
ಸಚಿವ ರಮೇಶ ಜಾರಕಿಹೊಳಿ ಎಲ್ಲಿಯೂ ಹೋಗಿಲ್ಲ, ಗೋಕಾಕದಲ್ಲಿದ್ದಾರೆ. ನಾನೂ ಸಹ ಸಚಿವನಾಗಿದ್ದಾಗ ಖಾಸಗಿ ಕಾರನ್ನೇ ಬಳಸುತ್ತಿದ್ದೆ. ಅವರೂ ಸಹ ಈಗ ಖಾಸಗಿ ಕಾರನ್ನು ಬಳಕೆ ಮಾಡುತ್ತಿದ್ದಾರೆ. ಅದರಲ್ಲೇನೂ ವಿಶೇಷವಿಲ್ಲ. ನಮ್ಮಿಂದ ಸರ್ಕಾರಕ್ಕೆ ಯಾವುದೇ ಅಪಾಯ ಇಲ್ಲ. ಸಿದ್ದರಾಮಯ್ಯ ಅವರ ಮನೆಗೆ ಕಾಂಗ್ರೆಸ್ ನಾಯಕರು ಭೇಟಿ ಮಾಡಿ ಸಭೆ ನಡೆಸಿರುವುದು ರಾಜಕೀಯದಲ್ಲಿ ಸಹಜ. ಸಿದ್ದರಾಮಯ್ಯ ಒಬ್ಬ ಉಸ್ತುವಾರಿ. ಹೀಗಾಗಿ ಸಿಎಂ ಸೇರಿದಂತೆ ಪ್ರತಿಯೊಬ್ಬರೂ ಅವರ ಜತೆ ಚರ್ಚೆ ಮಾಡಲೇಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.