ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಮಸೂದೆಗೆ ಅಂಗೀಕಾರ
Team Udayavani, Dec 28, 2022, 7:20 AM IST
ಬೆಳಗಾವಿ: ರಾಜ್ಯದಲ್ಲಿ ಕೈಗಾರಿಕೋದ್ಯಮಿಗಳು ಮತ್ತು ಹೂಡಿಕೆದಾರರಿಗೆ ಹಾದಿ ಸುಗಮ ಮಾಡಿಕೊಡಲು ಹಾಗೂ ಕೈಗಾರಿಕಾ ಸ್ಥಾಪನೆಗೆ ಎದುರಾಗುವ ತಾಂತ್ರಿಕ, ಕಾನೂನಾತ್ಮಕ ಅಡೆತಡೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರತ್ಯೇಕವಾಗಿ ಕರ್ನಾಟಕ ರಾಜ್ಯ ಹೂಡಿಕೆದಾರರ ಪ್ರಾಧಿಕಾರ ರಚಿಸುವ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಮಸೂದೆ-2022ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರಕಿತು.
ವಿಧಾನಸಭೆಯಲ್ಲಿ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಮಸೂದೆ ಮಂಡಿಸಿ, ರಾಜ್ಯದಲ್ಲಿ ದೊಡ್ಡ-ಅತಿದೊಡ್ಡ ಅಥವಾ ಬೃಹತ್ ಗಾತ್ರದ ಅಂದರೆ 1,250 ಎಕರೆಗೂ ಮೀರಿದ ಹೂಡಿಕೆ ಪ್ರದೇಶ, ಕೈಗಾರಿಕಾ ಪ್ರದೇಶಗಳು ಅಥವಾ ಕ್ಲಸ್ಟರ್‌ಗಳನ್ನು ಸ್ಥಾಪಿಸಲು, ನಡೆಸಲು, ನಿಯಂತ್ರಿಸಲು ಮತ್ತು ನಿರ್ವಹಿಸಲು ಮುಖ್ಯವಾಗಿ ಜಾಗತಿಕ ಉತ್ಪಾದನ ಪ್ರಮುಖ ತಾಣವಾಗಿ ಕರ್ನಾಟಕದ ಸ್ಥಾನವನ್ನು ಉಳಿಸಿಕೊಳ್ಳಲು, ಈ ಮಸೂದೆವನ್ನು ತರಲಾಗುತ್ತಿದೆ ಎಂದು ವಿವರಣೆ ನೀಡಿದರು.
ವಿಶೇಷ ಹೂಡಿಕೆ ಪ್ರದೇಶ ಪ್ರಾಧಿಕಾರ
ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಹಿಂದಿನ ಕಾಂಗ್ರೆಸ್ ಸರಕಾರದಲ್ಲಿ ಬೆಂಗಳೂರಿಗೆ ಸೀಮಿತವಾಗಿ ಮಾಡಿರುವ ಎಲೆಕ್ಟ್ರಾನಿಕ್ ಸಿಟಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಯಶಸ್ವಿ ಪ್ರಯೋಗವನ್ನು ಆಧರಿಸಿಯೇ ರಾಜ್ಯಕ್ಕೆ ಅನ್ವಯವಾಗುವಂತೆ ವಿಶೇಷ ಹೂಡಿಕೆ ಪ್ರದೇಶ ಪ್ರಾಧಿಕಾರ ತರಲಾಗುತ್ತಿದೆ. ಕೆಎಐಡಿಬಿ ಕೆಲಸ ಈ ಪ್ರಾಧಿಕಾರ ಮಾಡಲಿದೆ. ಹಾಗಂತ, ಕೆಎಐಡಿಬಿ ಅಧಿಕಾರ ಮೊಟಕುಗೊಳ್ಳುವುದಿಲ್ಲ. ಮಸೂದೆಗೆ ಕಾನೂನು ಇಲಾಖೆಯ ಪರಿಶೀಲನೆ ಆಗಿದೆ.
ಕಂದಾಯ, ಗ್ರಾಮೀಣಾಭಿವೃದ್ಧಿ ಇಲಾಖೆಯ ಒಪ್ಪಿಗೆ ಪಡೆದುಕೊಳ್ಳಲಾಗಿದೆ. ಬೇರೆ-ಬೇರೆ ಕೈಗಾರಿಕಾ ಸಂಘ-ಸಂಸ್ಥೆಗಳ ಬೇಡಿಕೆಯಂತೆ ಈ ಪ್ರಾಧಿಕಾರ ತರಲಾಗುತ್ತಿದೆ. ಮೊದಲ ಹಂತದಲ್ಲಿ ರಾಜ್ಯದ ಉತ್ತರ ಮತ್ತು ದಕ್ಷಿಣದಲ್ಲಿ ಒಂದು ಮಾದರಿಯನ್ನಾಗಿ ಮಾಡಲಾಗುತ್ತಿದೆ ಎಂದರು.
ಜಿಮ್‌ನಲ್ಲಿ 9.81 ಲಕ್ಷ ಕೋಟಿ ರೂ.ಯೋಜನೆಗೆ ಒಡಂಬಡಿಕೆ
ರಾಜ್ಯದಲ್ಲಿ ನವೆಂಬರ್‌ನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಒಟ್ಟು 9.81 ಲಕ್ಷ ಕೋಟಿ ರೂ.ಗಳ 77 ಒಡಂಬಡಿಕೆಗಳಿಗೆ ಸಹಿ ಮಾಡಲಾಗಿದೆ ಎಂದು ಕೈಗಾರಿಕಾ ಸಚಿವ ಡಾ| ಮುರುಗೇಶ ನಿರಾಣಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.