ಜಾರ್ಖಂಡ್ ಶಿಖರ್ಜಿ ಧಾರ್ಮಿಕ ಯಾತ್ರೆಗೆ ತೆರಳಿದ್ದ ಕಾಗವಾಡದ ವೃದ್ಧನಿಗೆ ಸೋಂಕು ದೃಢ
Team Udayavani, May 22, 2020, 1:11 PM IST
ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ಜಾರ್ಖಂಡ್ ದಿಂದ ಬಂದಿದ್ದ 75 ವರ್ಷದ ವೃದ್ಧನಿಗೆ ಕೋವಿಡ್-19 ಸೋಂಕು ತಗುಲಿದ್ದು, ಜಿಲ್ಲೆಯ ಸೋಂಕಿತರ ಸಂಖ್ಯೆ ಒಟ್ಟು 126ಕ್ಕೇರಿದಂತಾಗಿದೆ.
ಜಾರ್ಖಂಡ್ ರಾಜ್ಯದ ಪ್ರವಾಸದಿಂದ ಬಂದಿದ್ದ ವೃದ್ಧನಿಗೆ ಪಾಸಿಟಿವ್ ಸೋಂಕು ತಗುಲಿದೆ. ಜಾಂರ್ಖಂಡ್ ನ ಶಿಖರ್ಜಿಗೆ ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗಿದ್ದ ಈ ವ್ಯಕ್ತಿಗೆ ಸೋಂಕು ತಗುಲಿರುವುದು ವರದಿಯಲ್ಲಿ ದೃಢವಾಗಿದೆ.
ಒಂದೂವರೆ ತಿಂಗಳ ಹಿಂದೆ ಬೆಳಗಾವಿಯಿಂದ ಒಟ್ಟು 15 ಜನರ ತಂಡ ಜಾರ್ಖಂಡ್ ರಾಜ್ಯಕ್ಕೆ ಧಾರ್ಮಿಕ ಯಾತ್ರೆ ಕೈಗೊಂಡಿತ್ತು. ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ತವರಿಗೆ ವಾಪಸ್ಸಾಗಿದ್ದ ಈ ತಂಡವನ್ನು ಕಾಗವಾಡ ತಾಲೂಕಿನ ಶಿರಗುಪ್ಪಿಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಗುರುವಾರದ ವರದಿಯಲ್ಲಿ ಮೂವರಿಗೆ ಸೋಂಕು ತಗುಲಿತ್ತು. ಶುಕ್ರವಾರ ಮತ್ತೊಬ್ಬರಿಗೆ ಸೋಂಕು ತಗುಲಿದ್ದು ಆತಂಕ ಹೆಚ್ಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.