ವೀರರಾಣಿ ಚನ್ನಮ್ಮನ ಕಿತ್ತೂರ್ ಉತ್ಸವದ ವೀರಜ್ಯೋತಿಗೆ ಚಾಲನೆ


Team Udayavani, Oct 18, 2021, 1:29 PM IST

Untitled-1

ಬೈಲಹೊಂಗಲ‌: ವೀರರಾಣಿ  ಚನ್ನಮ್ಮನ ಕಿತ್ತೂರ್ ಉತ್ಸವ 2021 ವೀರಜ್ಯೋತಿಗೆ ಪಟ್ಟಣ ಕಿತ್ತೂರ ಚನ್ನಮ್ಮ ಸಮಾಧಿ ಸ್ಥಳದ ರಸ್ತೆಯಲ್ಲಿ ಮೂರುಸಾವಿರಮಠದ ಪ್ರಭು ನೀಲಕಂಠ ಮಹಾಸ್ವಾಮೀಜಿ  ಚಾಲನೆ ನೀಡಿದರು.

ಮೂರುಸಾವಿರಮಠದ ಪ್ರಭು ನೀಲಕಂಠ ಮಹಾಸ್ವಾಮೀಜಿ ಮಾತನಾಡಿ,  ಸ್ವಾತಂತ್ರ ಸಂಗ್ರಾಮದ ಬೆಳ್ಳಿಚುಕ್ಕಿ ವೀರರಾಣಿ ಕಿತ್ತೂರ್ ಚೆನ್ನಮ್ಮಳ ಶೌರ್ಯಸಾಹಸ ಇಂದಿನ ಯುವಪೀಳಿಗೆ ಮೈಗೂಡಿಸಿಕೊಳ್ಳುವದು ಅತ್ಯಗತ್ಯವಾಗಿದೆ‌. ಸರಕಾರ ಈ ಬಾರಿ ಕಿತ್ತೂರ  ಉತ್ಸವವನ್ನು ರಜತ ಮಹೋತ್ಸವವನ್ನು ಅ.23, 24 ರಂದು ಆಯೋಜಿಸಿರುವದು ಶ್ಲಾಘನೀಯವಾದುದು ಎಂದರು.

ಕಿತ್ತೂರ್ ಚನ್ನಮ್ಮಳ ಹೋರಾಟ ಇತಿಹಾಸದಲ್ಲಿ ಅಜರಾಮರ. ಭಾರತದ ಮೊದಲ ಸ್ವಾತಂತ್ರ್ಯ ಸಂಗ್ರಾಮಕ್ಕೂ ಮೂರು ದಶಕಗಳ ಮೊದಲೇ ಕಿತ್ತೂರ ಕ್ರಾಂತಿಯ ಮೂಲಕ ಸ್ವಾತಂತ್ರ್ಯದ ಕಿಡಿಯನ್ನು ಹಚ್ಚಿದ ರಾಣಿ ಚನ್ನಮ್ಮ ನಮ್ಮೆಲ್ಲರಿಗೂ ಪ್ರೇರಣಾ ಶಕ್ತಿ ಎಂದರು.

ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿ ಮಾತನಾಡಿ,ಕಳೆದ ಎರಡು ವರ್ಷಗಳಿಂದ ಕೋರೋಣ ಮಹಾಮಾರಿ ಯಿಂದಾಗಿ  ಉತ್ಸವ ನಡೆಸಲು ಸಾಧ್ಯವಾಗಿರಲಿಲ್ಲ. ಉತ್ಸವ ನಡೆಸಬೇಕೆಂಬ ಚೆನ್ನಮ್ಮಾಜಿ ರಾಯಣ್ಣನ ಅಭಿಮಾನಿಗಳ ಕನಸು ಈ ವರ್ಷ ನನಸಾಗಲಿದೆ ಎಂದರು.

ಕಿತ್ತೂರು ಶಾಸಕ ಮಹಾಂತೇಶ್ ದೊಡ್ಡ ಗೌಡರ ಮಾತನಾಡಿ, ಪ್ರತಿವರ್ಷ ಕಿತ್ತೂರು ಉತ್ಸವ ಅತಿ ವಿಜೃಂಭಣೆ ಯಿಂದ ನಡೆಸಲಾಗುತ್ತಿತ್ತು.ಆದರೆ ಮಹಾಮಾರಿ ಕೊರೋಣದ ಪ್ರಭಾವದಿಂದ ಕಳೆದ ಎರಡು ವರ್ಷಗಳಿಂದ ಉತ್ಸವವನ್ನು ಸಾಂಕೇತಿಕವಾಗಿ ಆಚರಿಸಲಾಗಿತ್ತು. ಆದರೆ ಈ ವರ್ಷ  ಕೋರೋಣ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು, ಆದಕಾರಣ ಈ ವರ್ಷ ಕಿತ್ತೂರು ಉತ್ಸವ ನಡೆಸಲು ಸರಕಾರ ನಿರ್ಧರಿಸಿ ಎರಡು ದಿನದ ಉತ್ಸವಕ್ಕೆ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ.

ಆದರೆ ಇನ್ನು ಸಹ ಕೋರೋಣದ ಭಯ ಇರುವುದರಿಂದ ಉತ್ಸವದಲ್ಲಿ ಭಾಗವಹಿಸುವ ಸಾರ್ವಜನಿಕರು ಮಾಸ್ಕ್,ಧರಿಸಿ ಸರಕಾರದ ಕೋವಿಡ್ ನಿಯಮಾವಳಿಗಳನ್ನು ಪಾಲಿಸಬೇಕೆಂದು ತಿಳಿಸಿದರು.

ಚನ್ನಮ್ಮಾ ಸಮಾಧಿಗೆ ಪೂಜೆ ಸಲ್ಲಿಸುವ ಮೂಲಕ ಜ್ಯೋತಿಗೆ ಚಾಲನೆ ನೀಡಲಾಯಿತು. ನಂತರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಮಾಲಾರ್ಪಣೆ ಮಾಡಲಾಯಿತು. ಚೆನ್ನಮ್ಮ ವೃತ್ತದ ಮೂಲಕ ಅನಿಗೋಳ‌ಮಾರ್ಗವಾಗಿ ಜ್ಯೋತಿಯು ಮುಂದೆ ಸಾಗಿತು‌.

ಜ್ಯೋತಿ ಯಾತ್ರೆ ಚಾಲನೆ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಶಶಿಧರ್ ಬಗಲಿ,ತಹಸೀಲ್ದಾರ್ ಬಸವರಾಜ್ ನಾಗರಾಳ, ಮಾಜಿ ಶಾಸಕ ಜಗದೀಶ್ ಮೆಟಗುಡ್ಡ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ್ ಸಂಪಗಾವಿ,ಪುರಸಭೆ ಅಧ್ಯಕ್ಷ ಬಾಬು ಕೂಡಸೋಮನ್ನವರ, ಪುರಸಭೆ ಮುಖ್ಯಾಧಿಕಾರಿ ಕವಿರಾಜ್ ನಾಗನೂರ, ಪುರಸಭೆ ಸದಸ್ಯ ರಾಜು ಜನ್ಮಟ್ಟಿ,ಗುರು ಮೆಟಗುಡ್ಡ,ಅರ್ಜುನ್ ಕಲಕುಟ್ಕರ್,ಕಂದಾಯ ನೀರಿಕ್ಷಕ ಸುರೇಶ ಮಾಳಗಿ , ಮಲ್ಲೇಶ ಹೊಸಮನಿ, ಡಾ.ಮಹಾಂತೇಶ ಕಳ್ಳಿಬಡ್ಡಿ, ಬಸವರಾಜ ಶಿಂತ್ರಿ, ಅಂಜನಾ ಬೊಂಗಾಳೆ, ಲೋಕೊಪಯೋಗಿ ಇಲಾಖೆ ಎಇ ಇ ವಿ.ಎಸ್.ಆನಿಕಿವಿ, ವಿವಿಧ ಇಲಾಖೆ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ವಿದ್ಯಾರ್ಥಿಗಳು ಇದ್ದರು.

 

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.