ದೇಶಾದ್ಯಂತ ಕೆಎಲ್‌ಇ ಆಯುರ್ ಔಷಧಾಲಯ: ಕೋರೆ
ಆಯುರ್ವೇದ ಅಭಿವೃದ್ಧಿ ಹಾಗೂ ಜನರಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತದೆ
Team Udayavani, Sep 3, 2022, 3:57 PM IST
ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಬಿ.ಎಂ ಕಂಕಣವಾಡಿ ಆಯುರ್ವೇದ ಫಾರ್ಮಾದಲ್ಲಿ ಕಳೆದ 87 ವರ್ಷದಿಂದ ಆಯುರ್ವೇದ ಔಷಧಿ ಹಾಗೂ ಸಾಂಪ್ರದಾಯಿಕ ಆಯುರ್ವೇದ ಉತ್ಪನ್ನಗಳನ್ನು ತಯಾರಿಸುತ್ತಿದ್ದು, ಒಳ್ಳೆಯ ಗುಣಮಟ್ಟದ ಆಯುರ್ ಉತ್ಪನ್ನಗಳನ್ನು ಜನರಿಗೆ ತಲುಪಿಸಲು ಕ್ರಮ ಕೈಕೊಳ್ಳಲಾಗಿದೆ.
ಈಗ ಇದಕ್ಕೆ ಪೂರಕವಾಗಿ ದೇಶಾದ್ಯಂತ ಕೆಎಲ್‌ಇ ಆಯುರ್ ಔಷಧಾಲಯಗಳನ್ನು ತೆರೆಯಲಾಗುತ್ತದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ| ಪ್ರಭಾಕರ ಕೋರೆ ಹೇಳಿದರು.
ಕೆಎಲ್‌ಇ ಸಂಸ್ಥೆಯ ಡಾ| ಪ್ರಭಾಕರ ಕೋರೆ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಕೆಎಲ್‌ಇ ಆಯುರ್ ಔಷಧಾಲಯ (ಆಯುರ್ವೇದಿಕ್ ಫಾರ್ಮಾಸಿ)ವನ್ನು ಜನಸೇವೆಗೆ ಅರ್ಪಿಸಿ ಮಾತನಾಡಿದ ಅವರು, ಅಲೋಪಥಿಗೆ ಅತೀ ಹೆಚ್ಚು ಪ್ರಾಮುಖ್ಯತೆ ನೀಡಿ ಭಾರತೀಯ ಸಾಂಪ್ರಾದಾಯಿಕ ಔಷಧಿ ಪದ್ಧತಿಯನ್ನು ನಾಶಪಡಿಸಿದ್ದೇವೆ. ಅದನ್ನು ಪುನರುಜ್ಜೀವನಗೊಳಿಸಬೇಕಾಗಿದೆ. ಅದಕ್ಕಾಗಿಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಯುಷ್ಯ ಮಂತ್ರಾಲಯಕ್ಕೆ ಅತೀ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದ್ದಾರೆ ಎಂದರು.
ಅಲೋಪಥಿಗೆ ಪರ್ಯಾಯವಾಗಿ ಹೊಮಿಯೋಪಥಿ ಬೆಳೆದಿದೆ. ಆದರೆ ಆಯುರ್ವೇದ ಹಿಂದೆ ಬಿದ್ದಿದೆ. ಆದ್ದರಿಂದ ಆಯುರ್ವೇದಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದಕ್ಕಾಗಿ ದೇಶದ್ಯಾಂತ ಕೆಎಲ್‌ಇ ಆಯುರ್ ಔಷಧಾಲಯವನ್ನು ತೆರೆಯಲಾಗುತ್ತಿದೆ ಎಂದು ಅವರು ಹೇಳಿದರು.
1938ರಲ್ಲಿ ಪ್ರಾರಂಭಿಸಲಾದ ಆಯುರ್ವೇದ ಫಾರ್ಮಾಸಿಗಾಗಿ ಅವಶ್ಯವಿರುವ ಗಿಡಮೂಲಿಕೆಗಳನ್ನು ಬಂಬರಗಾ ಗ್ರಾಮದ ಸುಮಾರು 16 ಎಕರೆ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ಅದೇ ಪ್ರದೇಶದಲ್ಲಿ ಬೃಹತ್ ಆಯುರ್ ಫಾರ್ಮಾ ಹಾಗೂ ಸಂಶೋಧನಾ ಕೇಂದ್ರ ತಲೆ ಎತ್ತಲಿದೆ.
ಪಶ್ಚಿಮ ಘಟ್ಟದಲ್ಲಿ ಸಾಕಷ್ಟು ಆಯುರ್ವೇದಿಕ್ ಗಿಡಮೂಲಿಕೆಗಳಿದ್ದು, ಅವುಗಳ ಸಂಶೋಧನೆಗಾಗಿ ಕೆಎಲ್‌ಇ ಸಂಸ್ಥೆಯ ಬಿ ಎಂ ಕಂಕಣವಾಡಿ ಆಯುರ್ವೇದಿಕ್ ಮಹಾವಿದ್ಯಾಲಯ ಒಡಂಬಡಿಕೆ ಮಾಡಿಕೊಂಡಿದ್ದು, ಅದರೊಂದಿಗೆ ಜೊತೆಗೂಡಿ ಆಯುರ್ವೇದ ಅಭಿವೃದ್ಧಿ ಹಾಗೂ ಜನರಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತದೆ ಎಂದರು.
ಬಿ ಎಂ ಕಂಕಣವಾಡಿ ಆಯುರ್ವೇದಿಕ್ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ| ಸುಹಾಸಕುಮಾರ ಶೆಟ್ಟಿ ಮಾತನಾಡಿ, ಕೆಎಲ್ ಇ ಆಯುರ್ ಫಾರ¾ದಲ್ಲಿ 326 ತರಹದ ಔಷಧಗಳನ್ನು ತಯಾರಿಸುತ್ತಿದ್ದು, ಅದರಲ್ಲಿ 26 ಸಾಂಪ್ರದಾಯಿಕವಾದ ರೋಗತಡೆಗಟ್ಟುವ ಆಯುರ್ವೇದ ಪದ್ಧತಿಯ ಉತ್ಪನ್ನಗಳಿವೆ. ಈ ಉತ್ಪನ್ನಗಳನ್ನು ಮಾರಾಟ ಮಾಡುವ ಮೊದಲು ಆಯುಷ್ಯ ಪ್ರಮಾಣೀಕೃತ ಪ್ರಯೋಗಾಲಯದಲ್ಲಿ ಪರೀಕ್ಷೆಗೊಳಪಡಿಸಲಾಗುತ್ತದೆ. ಉತ್ತಮ ಗುಣಮಟ್ಟ ಮತ್ತು ಪರಿಣಾಮಕಾರಿಯನ್ನು ಖಾತ್ರಿಪಡಿಸಿ ಅದನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಾ| ಪ್ರಭಾಕರ ಕೋರೆ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ| ಎಂ ವಿ ಜಾಲಿ, ಡಾ| ಎಚ್ ಬಿ ರಾಜಶೇಖರ, ಡಾ| ವಿ ಡಿ ಪಾಟೀಲ, ಡಾ| ಎನ್ ಎಸ್ ಮಹಾಂತಶೆಟ್ಟಿ, ಡಾ| ಆರಿಫ್ ಮಾಲ್ದಾರ, ಡಾ| ಸುನೀಲ ಜಲಾಲಪುರೆ, ಡಾ| ಪಿ ಜಿ ಜಾಡರ, ಡಾ| ಸವಿತಾ ಭೊಸಲೆ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.