ಕೆಎಲ್‌ಇ ಕೋವಿಡ್ ಪರೀಕ್ಷಾ ಲ್ಯಾಬ್‌ಗ ಚಾಲನೆ
ವಿಶ್ವ ಆರೋಗ್ಯ ಸಂಸ್ಥೆ, ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ, ಅಮೆರಿಕದ ಆಹಾರ - ಔಷಧ ಸಂಸ್ಥೆ ಮಾನ್ಯತೆ
Team Udayavani, May 14, 2020, 1:46 PM IST
ಬೆಳಗಾವಿ: ನಗರದ ಕೆ ಎಲ್ ಇ ಆಸ್ಪತ್ರೆಯಲ್ಲಿ ಆರಂಭಿಸಲಾಗಿರುವ ಕೋವಿಡ್ -19 ಪರೀಕ್ಷಾ ಪ್ರಯೋಗಾಲಯವನ್ನು ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಬುಧವಾರ ಜನರ ಸೇವೆಗೆ ಅರ್ಪಿಸಿದರು.
ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಡಾ| ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ನೂತನ ಕೆಎಲ್‌ಇ ಕೋವಿಡ್ ಪರೀಕ್ಷಾ ಲ್ಯಾಬ್‌ಗ ಚಾಲನೆ ವೈರಸ್ ಕೋವಿಡ್ -19 ಪರೀಕ್ಷಾ ಪ್ರಯೋಗಾಲಯವನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಬುಧವಾರ ಜನರ ಸೇವೆಗೆ ಸಮರ್ಪಿಸಿದರು. ಈ ಪ್ರಯೋಗಾಲಯವು ವಿಶ್ವ ಆರೋಗ್ಯ ಸಂಸ್ಥೆ, ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ, ಅಮೇರಿಕದ ಆಹಾರ ಮತ್ತು ಔಷಧ ಸಂಸ್ಥೆ ಮಾನ್ಯತೆ ಪಡೆದಿದ್ದು, ಅತ್ಯಾಧುನಿಕ ವೈದ್ಯಕೀಯ ಪ್ರಯೋಗಾಲಯ ಸಾಮಗ್ರಿಗಳನ್ನು ಹೊಂದಿದೆ.
ಇದರಲ್ಲಿ, ಟಿಬಿ, ಹೆಚ್1ಎನ್1, ಹೆಪಟೈಟಿಸ್ (ಬಿಳಿಕಾಮಾಲೆ) ವೈರಸ್ ಪರೀಕ್ಷಿಸಬಹುದಾಗಿದೆ. ಪ್ರಯೋಗಾಲಯವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ಸುರೇಶ ಅಂಗಡಿ ಅವರು, ದೇಶವಷ್ಟೇ ಅಲ್ಲ, ಇಡೀ ವಿಶ್ವವೇ ಇಂದು ಕೊರೊನಾ ವೈರಸ್ ಕೋವಿಡ್ -19ಗೆ ತಲೆಬಾಗಿ ನಿಂತಿದೆ. ಅದನ್ನು ಹಿಮ್ಮೆಟ್ಟಿಸಲು ಕೇಂದ್ರ ಸರಕಾರವು ಸಕಲ ಕಾರ್ಯ ಹಾಗೂ ಮುಂಜಾಗ್ರತಾ
ಕ್ರಮಗಳನ್ನು ಕೈಕೊಂಡಿದೆ. ಆರೋಗ್ಯವನ್ನು ಕಾಪಾಡಲು ಅಗತ್ಯ ಸೇವಾ ಸೌಲಭ್ಯವನ್ನು ಒದಗಿಸಲಾಗುತ್ತಿದೆ ಎಂದರು.
ಲಾಕ್‌ಡೌನ್ ಪರಿಸ್ಥಿತಿಯಲ್ಲಿ ಯಾರಿಗೂ ತೊಂದರೆಯಾಗದಂತೆ ಸಾಮಾಜಿಕ, ಆರ್ಥಿಕ ಹಾಗೂ ವೈದ್ಯಕೀಯ ಸೌಲತ್ತುಗಳನ್ನು ಸರಕಾರವೇ ಭರಿಸುತ್ತಿದೆ. ವೈದ್ಯಕೀಯ ಸಿಬ್ಬಂದಿಗಳು ಸಾರ್ವಜನಿಕರ ಆರೋಗ್ಯ ಕಾಪಾಡಲು ಶ್ರಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಕೊರೊನಾ ಸೈನಿಕರಿಗೆ ಎಲ್ಲ ರೀತಿಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜ್ಯೂಕೇಶನ್ ಆ್ಯಂಡ್ ರಿಸರ್ಚನ ಕುಲಾಧಿಪತಿ ಡಾ| ಪ್ರಭಾಕರ ಕೋರೆ ಮಾತನಾಡಿ, ಕೊರೊನಾ ವೈರಸ್ ಕಂಡು ಬಂದ ತಕ್ಷಣ ಕೆಎಲ್‌ಇ ಸಂಸ್ಥೆಯು ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿತು. ಕೊವಿಡ್ ಅಲ್ಲದ ರೋಗಿಗಳ ಚಿಕಿತ್ಸೆಗೆ ತೊಂದರೆಯಾಗದಂತೆ ಎಚ್ಚರಿಕೆ ಕ್ರಮ ಕೈಕೊಂಡು ನಿರಂತರವಾಗಿ ರೋಗಿಗಳ ಆರೈಕೆಯಲ್ಲಿ ತೊಡಗಿಕೊಂಡಿದೆ ಎಂದು ಹೇಳಿದರು.
ಆಸ್ಪತ್ರೆಯಲ್ಲಿ ಫ್ಲ್ಯೂ ಕ್ಲೀನಿಕ್, ಉಚಿತ ಆಂಬ್ಯುಲೆನ್ಸ್, ಪರಿಹಾರ ನಿಧಿಗೆ 2 ಕೋಟಿ ದೇಣಿಗೆ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯಗಳನ್ನು ಸಂಸ್ಥೆಯು ಮಾಡುತ್ತಿದೆ. ಜಿಲ್ಲಾಡಳಿತ ಹಾಗೂ ಸರಕಾರದ ಕಾರ್ಯಕ್ಕೆ ಕೆಎಲ್‌ಇ ಸಂಸ್ಥೆ ಸದಾ ಬೆನ್ನೆಲುಬಾಗಿ ನಿಲ್ಲಲಿದೆ. ಕೊರೊನಾ ವೈರಸ್ ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತ ಸದಾ ಮಾಸ್ಕ್ ಧರಿಸಬೇಕು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಡಾ| ವಿ.ಎಸ್ ಸಾಧುನವರ, ಕಾಹೆರನ ಕುಲಪತಿ ಡಾ| ವಿವೇಕ ಸಾವೋಜಿ, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ| ಎಂ ವಿ ಜಾಲಿ, ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎನ್.ಎಸ್ ಮಹಾಂತಶೆಟ್ಟಿ, ಕಾಹೆರನ ಕುಲಸಚಿವ ಡಾ| ವಿ.ಎ ಕೋಠಿವಾಲೆ, ಡಾ| ವಿ ಡಿ ಪಾಟೀಲ, ಡಾ|ಎಚ್
ಬಿ ರಾಜಶೇಖರ, ಡಾ| ಪ್ರೀತಿ ಮಾಸ್ತೆ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.