ವೈದ್ಯ ರಂಗದಲ್ಲಿ ಜ್ಞಾನ ಅವಶ್ಯ
•ತುರ್ತು ಸಂದರ್ಭದಲ್ಲಿ ತಾಳ್ಮೆ ಇರಲಿ •ಸಿಪಿಆರ್ ಜೀವ ರಕ್ಷಣೆ ಕಲೆ
Team Udayavani, Jul 22, 2019, 10:24 AM IST
ಬೆಳಗಾವಿ: ಕೆಎಲ್ಇ ಶತಮಾನೋತ್ಸವ ಚಾರಿಟೇಬಲ್ ಆಸ್ಪತ್ರೆಯಲ್ಲಿ ಆರೋಗ್ಯ ಸಹಾಯಕಿ ಪ್ರಶಿಕ್ಷಣಾರ್ಥಿಗಳು ಹಾಗೂ ಜೈನ್ ಕಾಲೇಜಿನ ವಿದ್ಯಾರ್ಥಿಗಳಿಗೆ ಬಿಎಲ್ಎಸ್ ಕಾರ್ಯಾಗಾರ ಆಯೋಜಿಸಲಾಗಿತ್ತು.
ಬೆಳಗಾವಿ: ಹೃದಯಾಘಾತ ಹಾಗೂ ಅಪಘಾತಗಳಿಂದ ಅಸುನೀಗುವವರ ಸಂಖ್ಯೆ ಅಧಿಕವಾಗುತ್ತಿದೆ. ಆದ್ದರಿಂದ ವೈದ್ಯಕೀಯ ರಂಗದಲ್ಲಿ ಎಲ್ಲರೂ ತಕ್ಕಮಟ್ಟಿನ ಜ್ಞಾನ ಹೊಂದಿರುವುದು ಅತ್ಯವಶ್ಯ ಎಂದು ಯು ಎಸ್‌ಎಂ ಕೆಎಲ್ಇ ನಿರ್ದೇಶಕ ಡಾ. ಎಚ್.ಬಿ. ರಾಜಶೇಖರ ಹೇಳಿದರು.
ನಗರದ ಕೆಎಲ್ಇ ಶತಮಾನೋತ್ಸವ ಚಾರಿಟೇಬಲ್ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಸಿಪಿಆರ್ ದಿನಾಚರಣೆ ಅಂಗವಾಗಿ ಆರೋಗ್ಯ ಸಹಾಯಕಿ ಪ್ರಶಿಕ್ಷಣಾರ್ಥಿಗಳು ಹಾಗೂ ಜೈನ್ ಕಾಲೇಜಿನ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಬಿಎಲ್ಎಸ್ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ತುರ್ತು ಸಂದರ್ಭಗಳು ಜೀವನದಲ್ಲಿ ಹೇಳಿ ಕೇಳಿ ಬರುವುದಿಲ್ಲ. ಆದರೆ ಈ ಸಂದರ್ಭ ಎದುರಿಸುವ ತಾಳ್ಮೆ ಹಾಗೂ ಜ್ಞಾನ ಹೊಂದಿರಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆಎಲ್ಇ ಶತಮಾನೋತ್ಸವ ಚಾರಿಟೇಬಲ್ ಆಸ್ಪತ್ರೆ ನಿಯೋಜಿತ ನಿರ್ದೇಶಕ ಡಾ. ಆರ್.ಜಿ. ನೆಲವಿಗಿ ಮಾತನಾಡಿ, ಸಿಪಿಆರ್ ಇದು ಜೀವ ರಕ್ಷಣೆಯ ಅದ್ಭುತ ಕಲೆಯಾಗಿದ್ದು, ಪ್ರತಿಯೊಬ್ಬರೂ ಅರಿಯಬೇಕಾದ ವಿಷಯವಾಗಿದೆ. ಅಲ್ಲದೇ ಮಾನವೀಯತೆ ಮೆರೆಯಲು ಅವಶ್ಯಕ ಅಂಶವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಐಎಪಿಯ ಸದಸ್ಯ ಡಾ. ಶರದ ಶ್ರೇಷ್ಠಿ, ಕೆಎಲ್ಇ ಶತಮಾನೋತ್ಸವ ಚಾರಿಟೇಬಲ್ ಆಸ್ಪತ್ರೆಯ ಚಿಕ್ಕಮಕ್ಕಳ ವಿಭಾಗದ ಮುಖ್ಯಸ್ಥ ಡಾ. ಎಂ.ಎಸ್. ಕಡ್ಡಿ, ಡಾ. ಅನಿತಾ ಮೋದಗೆ, ಡಾ. ಸೌಮ್ಯ ವೆರ್ಣೇಕರ, ಡಾ. ಸಂತೋಷ ಕರಮಸಿ ಮುಂತಾದವರು ಪ್ರಶಿಕ್ಷಣಾರ್ಥಿಗಳಿಗೆ ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಜೈನ್ ಕಾಲೇಜಿನ 25ಕ್ಕೂ ಅಧಿಕ ವಿದ್ಯಾರ್ಥಿಗಳು ಹಾಗೂ ಕೆಎಲ್ಇ ಶತಮಾನೋತ್ಸವ ಚಾರಿಟೇಬಲ್ ಆಸ್ಪತ್ರೆಯ ಆರೋಗ್ಯ ಸಹಾಯಕಿ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.
ಡಾ. ಪ್ರಜ್ಞಾ ಕುರಕುರೆ ನಿರೂಪಿಸಿದರು. ಡಾ. ಬಸವರಾಜ ಕುಡಸೋಮಣ್ಣವರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.