ಕೊಟ್ಟಲಗಿ ಮೆಟ್ರಿಕ್‌ ಪೂರ್ವ ಹಾಸ್ಟೆಲ್‌ಗೆ ಸೌಲಭ್ಯ ಭಾಗ್ಯ

ಫಲ ನೀಡಿದ ಸುಧಾರಣಾ ಪ್ರಯತ್ನಗಳು; ಸ್ವಚ್ಚಗೊಂಡ ಶೌಚಾಲಯ-ಅಡುಗೆ ಕೋಣೆ

Team Udayavani, Nov 29, 2022, 4:24 PM IST

20

ತೆಲಸಂಗ: ಅವ್ಯವಸ್ಥೆಗಳ ಆಗರವಾಗಿ ಗ್ರಾಮಸ್ಥರು, ಮಕ್ಕಳ ಪಾಲಕರ ಕೆಂಗಣ್ಣಿಗೆ ಗುರಿಯಾಗಿದ್ದ ಸಮೀಪದ ಕೊಟ್ಟಲಗಿಯ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿಗಳ ವಸತಿ ನಿಲಯ ಈಗ ಮಾದರಿಯಾಗುವತ್ತ ಹೆಜ್ಜೆ ಹಾಕಿದೆ.

ಆಗಸ್ಟ್‌ 29ರಂದು ಉದಯವಾಣಿ “ಕೊಟ್ಟಲಗಿ ಮೆ. ಪೂರ್ವ ಹಾಸ್ಟೇಲ್‌ ಸುಧಾರಣೆ ಎಂದು?’ ಶೀರ್ಷಿಕೆ ಅಡಿಯಲ್ಲಿ ಸಮಗ್ರ ವರದಿ ಪ್ರಕಟಿಸಿತ್ತು. ವರದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಕೈಗೊಂಡ ಸುಧಾರಣಾ ಪ್ರಯತ್ನಗಳು ಫಲಿಸಿದ್ದು, ಇಂದು ವಸತಿ ಶಾಲೆ ಕನ್ನಡಿಯಂತೆ ಕಂಗೊಳಿಸತೊಡಗಿದೆ.

ತಿಂಗಳಿಗೊಮ್ಮೆ ಮಾತ್ರ ಬರುತ್ತಿದ್ದ ಮೇಲ್ವಿಚಾರಕರು ನಿತ್ಯ ಕಾಣ ಸಿಗುತ್ತಾರೆ. ಶೌಚಾಲಯಗಳು, ಅಡುಗೆ ಕೋಣೆ ಗಬ್ಬೆದ್ದು ನಾರುತ್ತಿದ್ದವು. ಈಗ ಸ್ವಚ್ಛಗೊಂಡಿವೆ. ವಸತಿ ಶಾಲೆಗೆ ದಾಖಲಾದ 43 ಮಕ್ಕಳ ಪೈಕಿ ಕೇವಲ 13 ಮಕ್ಕಳು ಇರುತ್ತಿದ್ದರು. ಸದ್ಯ ಹಾಜರಾತಿಯೂ ಹೆಚ್ಚಿದೆ. ಸಿಸಿ ಕ್ಯಾಮೆರಾಗಳು ಹಾಳಾಗಿದ್ದವು. ಮಕ್ಕಳಿಗೆ ಮಚ್ಚರದಾನಿ ಇರದೆ ಸೊಳ್ಳೆಗಳಿಂದ ಕಚ್ಚಿಸಿಕೊಳ್ಳುವ ಸ್ಥಿತಿ ಇತ್ತು. ಈಗ ಎಲ್ಲವೂ ಸುಧಾರಿಸಿದೆ.

ವಸತಿ ನಿಲಯದಲ್ಲಿನ ಸಮಸ್ಯೆಗಳನ್ನು ಪರಿಹರಿಸುವ ಪ್ರಯತ್ನ ಮಾಡಿದ್ದೇವೆ. ಸದ್ಯಕ್ಕೆ ಎಲ್ಲ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಮುಂದೆ ಹೀಗಾಗದಂತೆ ನಿಗಾ ವಹಿಸಲಾಗಿದೆ. ಯಾವುದೇ ಸಮಸ್ಯೆ ಇದ್ದಲ್ಲಿ ನಮ್ಮ ಗಮನಕ್ಕೆ ತಂದರೆ ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಪ್ರವೀಣ ಪಾಟೀಲ ಸ.ನಿ.ಸಮಾಜ ಕಲ್ಯಾಣ ಇಲಾಖೆ

ಮಕ್ಕಳಿಗೆ ಸರಕಾರದ ಪ್ರತಿ ಸೌಲತ್ತು ತಲುಪಿಸಲಾಗುತ್ತಿದೆ. ಯಾವುದೇ ತೊಂದರೆ ಇಲ್ಲ. ಇಂತಹ ಒಂದು ಬದಲಾವಣೆಗೆ ಸಹಕರಿಸಿದ ಗ್ರಾಮದ ಹಿರಿಯರಿಗೆ ಅಭಿನಂದಿಸುತ್ತೇನೆ. ವಸತಿ ನಿಲಯವನ್ನು ಮಾದರಿ ಆಗಿ ಪರಿವರ್ತಿಸುತ್ತೇನೆ. ಫಕೀರಪ್ಪ ಕೋರಕೊಪ್ಪ, ವಸತಿ ನಿಲಯದ ಮೇಲ್ವಿಚಾರಕ,

ಗ್ರಾಮೀಣ ಭಾಗದಲ್ಲಿ ಬಹುತೇಕ ಸರಕಾರಿ ಕಚೇರಿಗಳು ನಿರ್ಲಕ್ಷ್ಯಕ್ಕೊಳಗಾಗಿವೆ. ಇಂತಹ ಸಂದರ್ಭದಲ್ಲಿ ಮಾಧ್ಯಮಗಳು ಮುಖ್ಯ ಪಾತ್ರ ವಹಿಸುತ್ತವೆ. ಉದಯವಾಣಿ ವರದಿ ಪರಿಣಾಮ ಇಂದು ಗ್ರಾಮದ ವಸತಿ ನಿಲಯ ಕಂಗೊಳಿಸುತ್ತಿದೆ. ರಘು ದೊಡ್ಡನಿಂಗಪ್ಪಗೋಳ, ಯುವ ಮುಖಂಟ

ಒಬ್ಬ ಅಧಿಕಾರಿ ವಸತಿ ನಿಲಯಗಳಲ್ಲಿನ ಮಕ್ಕಳನ್ನು ತನ್ನ ಮಕ್ಕಳಂತೆ ನೋಡಿಕೊಂಡಾಗ ಮಾತ್ರ ವೃತ್ತಿಯಲ್ಲಿ ತೃಪ್ತಿ ಹಾಗೂ ಆತನ ಕುಟುಂಬ ಸಂತಸದಿಂದ ಇರುತ್ತದೆ. ಇಲ್ಲಿನ ವಸತಿ ನಿಲಯ ಇಂದು ಸಾಕಷ್ಟು ಸುಧಾರಣೆ ಕಂಡಿದೆ. ಡಾ|ರವಿ ಸಂಕ, ಸ್ಥಳೀಯ ವೈದ್ಯರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

President  ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.