“ಜಿಲ್ಲೆಗೆ ಇನ್ನೂ ಹೆಚ್ಚಿನ ಸಚಿವ ಸ್ಥಾನ ಸಿಗಬೇಕಿತ್ತು”: ಸತೀಶ ಜಾರಕಿಹೊಳಿ
Team Udayavani, Aug 6, 2021, 8:08 PM IST
ಗೋಕಾಕ: ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನ ನೀಡಬೇಕಾಗಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ ಕೊಡಬೇಕು, ಆ ಜಿಲ್ಲೆಯಲ್ಲಿ ಎಷ್ಟು ಶಾಸಕರಿದ್ದಾರೆ ಎಂಬುದನ್ನು ಸರ್ಕಾರ ನಡೆಸುವವರು ವಿಚಾರ ಮಾಡಿ, ನಿರ್ಧಾರ ತೆಗೆದುಕೊಳ್ಳಬೇಕು. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಬೆಳಗಾವಿಯ ಇನ್ನೂ ಕೆಲವರಿಗೆ ಸಚಿವ ಸ್ಥಾನ ನೀಡಿದರೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ನಾವು ಕೂಡ ಆಗ್ರಹ ಮಾಡುತ್ತೇವೆ ಎಂದು ಹೇಳಿದರು.
ಸರ್ಕಾರದ ಆಡಳಿತಾವಧಿ ಮುಂದಿನ ಕೆಲವೇ ತಿಂಗಳಾಗಿರುವುದರಿಂದ ಮತ್ತೆ ಜಿಲ್ಲೆಗೆ ಸಚಿವ ಸ್ಥಾನ ನೀಡುತ್ತಾರೋ ಇಲ್ಲವೋ ಗೊತ್ತಿಲ್ಲ. ಸರ್ಕಾರ ಹಾಗೂ ಮುಖ್ಯಮಂತ್ರಿಗಳೇ ಈ ಬಗ್ಗೆ ಉತ್ತರ ಕೊಡಬೇಕು. ವಿರೋಧ ಪಕ್ಷದವರಾಗಿ ನಾವು ಈ ಬಗ್ಗೆ ಮಾತನಾಡಲು ಆಗುವುದಿಲ್ಲ ಎಂದರು.
ಮೊಟ್ಟೆ ಹಗರಣ ತನಿಖೆಯಾಗಲಿ: ಮೊಟ್ಟೆ ಹಗರಣದ ಆರೋಪ ಎದುರಿಸುತ್ತಿರುವ ಶಶಿಕಲಾ ಜೊಲ್ಲೆ ಅವರಿಗೆ ಮತ್ತೆ ಮಂತ್ರಿ ಸ್ಥಾನ ನೀಡಲಾಗಿದೆ. ಅವರು ಮತ್ತಷ್ಟು ಪ್ರಬಲರಾಗಿದ್ದಾರೆ. ಅವರ ಮೇಲಿನ ಹಗರಣದ ಕುರಿತು ಸರ್ಕಾರ ತನಿಖೆ ನಡೆಸಬೇಕು ಎಂದು ಸತೀಶ ಒತ್ತಾಯಿಸಿದರು. ಜೊಲ್ಲೆ ಅವರು ಸಚಿವರಾಗುವುದಕ್ಕಿಂತ ಮುಂಚೆಯೇ ಝಿರೋ ಟ್ರ್ಯಾಕ್‌ನಲ್ಲಿ ಆಗಮಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಅ ಧಿಕಾರವನ್ನು ಯಾವ ರೀತಿ ಬೇಕಾದರೂ ಬಳಸಿಕೊಳ್ಳುತ್ತಾರೆ ಎಂಬುದಕ್ಕೆ ಇದೊಂದು ಉದಾಹರಣೆ ಎಂದರು.
ಇಡಿ ದಾಳಿ ಬಗ್ಗೆ ಈಗಲೇ ಏನನ್ನು ಹೇಳಲು ಆಗಲ್ಲ: ಶಾಸಕ ಹಾಗೂ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಮನೆ ಮೇಲೆ ಇಂದು ಇಡಿ ದಾಳಿ ಆಗಿರುವ ಬಗ್ಗೆ ಈಗಲೇ ಏನನ್ನೂ ಹೇಳಲು ಆಗುವುದಿಲ್ಲ. ಈ ಬಗ್ಗೆ ಕಾದು ನೋಡೋಣ ಎಂದು ಪ್ರತಿಕ್ರಿಯೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Maharashtra Poll: ವಿಪಕ್ಷಗಳ ದೂರವಾಣಿ ಕದ್ದಾಲಿಕೆ-ಪೊಲೀಸ್ ವರಿಷ್ಠಾಧಿಕಾರಿ ವರ್ಗಾವಣೆ!
Maharashtra Election:ಕೈತಪ್ಪಿದ ಟಿಕೆಟ್-ಶಿಂಧೆ ಸೇನಾ ಶಾಸಕ ವಂಗಾ ನಾಪತ್ತೆ, ಪೊಲೀಸರ ಶೋಧ!
Maharashtra Assembly Elections: 23 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್‌ಸಿಪಿಗೆ ಸೇರ್ಪಡೆ…
MUST WATCH
ಹೊಸ ಸೇರ್ಪಡೆ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.