ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ: 9 ಮಂದಿ ಬಂಧನ
Team Udayavani, Aug 22, 2022, 11:15 PM IST
ಬೆಳಗಾವಿ: ರಾಜ್ಯದಲ್ಲಿ ಪಿಎಸ್‌ಐ ಹಗರಣದ ಬೆನ್ನಲ್ಲೇ ಕೆಪಿಟಿಸಿಎಲ್ ಕಿರಿಯ ದರ್ಜೆ ಸಹಾಯಕರ ನೇಮಕಾತಿ ಪರೀಕ್ಷೆ ಅಕ್ರಮವೂ ಬಯಲಿಗೆ ಬಂದಿದ್ದು, ಮೂವರು ಅಭ್ಯರ್ಥಿಗಳೂ ಸೇರಿ ಒಂಬತ್ತು ಜನರನ್ನು ಪೊಲೀಸರು ಬಂ ಧಿಸಿದ್ದಾರೆ.
ಬೆಳಗಾವಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಿಸಿರುವ ಈ ಅಕ್ರಮವನ್ನು ಭೇದಿಸಿರುವ ಬೆಳಗಾವಿ ಪೊಲೀಸರು ಪ್ರಕರಣದ ಇಂಚಿಂಚೂ ತನಿಖೆ ನಡೆಸಿದ್ದಾರೆ. ಪರೀûಾ ಅಕ್ರಮಕ್ಕೆ ಬಳಸಿರುವ ಸ್ಮಾರ್ಟ್ ವಾಚ್, ಬ್ಲೂಟೂತ್ ಡಿವೈಸ್, ಪ್ರಿಂಟರ್, ಕಂಪ್ಯೂಟರ್ ಸೇರಿ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದ ಹಿಂದಿರುವ ಇನ್ನೂ ಅನೇಕರನ್ನು ಬಂ ಧಿಸಲು ಜಾಲ ಬೀಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಎಸ್‌ಪಿ ಸಂಜೀವ್ ಪಾಟೀಲ, ಕೆಪಿಟಿಸಿಎಲ್ ಕಿರಿಯ ದರ್ಜೆ ಸಹಾಯಕ ಹುದ್ದೆಗೆ ಆ.7ರಂದು ಪರೀಕ್ಷೆ ನಡೆದಿತ್ತು. ಈ ವೇಳೆ ಅಕ್ರಮ ನಡೆದಿರುವ ಬಗ್ಗೆ ಚಿಕ್ಕೋಡಿ ಪದವಿಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ದರ್ಜೆ ಸಹಾಯಕ ಸಚಿನ್ ಕಮತರ ಎಂಬುವರು ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದಾಗ ಪ್ರಕರಣ ಬಯಲಿಗೆ ಬಂದಿದೆ ಎಂದರು.
ಗೋಕಾಕ ತಾಲೂಕಿನ ನಾಗನೂರ ಗ್ರಾಮದ ಸಿದ್ದಪ್ಪ ಕೆಂಪಣ್ಣ ಮದಿಹಳ್ಳಿ, ಮಾಲದಿನ್ನಿ ಗ್ರಾಮದ ಸುನೀಲ ಅಜ್ಜಪ್ಪ ಭಂಗಿ, ಹುಕ್ಕೇರಿ ತಾಲೂಕಿನ ಶಿರಹಟ್ಟಿ ಬಿ.ಕೆ. ಗ್ರಾಮದ ಬಸವಣ್ಣಿ ಶಿವಪ್ಪ ದೊಣವಾಡ, ಗೋಕಾಕ ತಾಲೂಕಿನ ಬೆಣಚಿನಮರಡಿ ಗ್ರಾಮದ ಸಿದ್ದಪ್ಪ ಕೆಂಚಪ್ಪ ಕೊತ್ತಲ, ವೀರನಗಡ್ಡಿ ಗ್ರಾಮದ ಸಂತೋಷ ಪ್ರಕಾಶ ಮಾನಗಾಂವಿ, ಮಾಲದಿನ್ನಿ ಗ್ರಾಮದ ರೇಣುಕಾ ವಿಠuಲ ಜವಾರಿ, ಗದಗ ಬೆಟಗೇರಿಯ ಅಮರೇಶ ಚಂದ್ರಶೇಖರಯ್ಯ ರಾಜೂರ, ಚಿಕ್ಕೋಡಿ ತಾಲೂಕಿನ ಮೀರಾಪುರ ಗ್ರಾಮದ ಹಾಲಿ ಗದಗ ಬೆಟಗೇರಿಯ ಮಾರುತಿ ಶಂಕರ ಸೋನವಣಿ, ಸಮೀತಕುಮಾರ ಮಾರುತಿ ಸೋನವಣಿ ಎಂಬವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ತಿಳಿಸಿದರು.
ಗೋಕಾಕ ಡಿಎಸ್‌ಪಿ ಮನೋಜಕುಮಾರ ನಾಯ್ಕ, ಸಿಪಿಐ ವೀರೇಶ ದೊಡಮನಿ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ. ಪ್ರಕರಣದ ಹಿಂದಿರುವ ಆರೋಪಿಗಳನ್ನು ಬಂಧಿಸಲು ಜಾಲ ಬೀಸಲಾಗಿದೆ. ಪರೀಕ್ಷಾ ಅವಧಿ ಒಂದೂವರೆ ಗಂಟೆಯ ಕಾಲಾವಧಿಯಲ್ಲಿಯೇ ಅವರೆಲ್ಲರೂ ಅಕ್ರಮ ಎಸಗಿದ್ದಾರೆ. ಪ್ರತಿ ಅಭ್ಯರ್ಥಿ ಕಡೆಯಿಂದ ಆರು ಲಕ್ಷ ರೂ. ಪಡೆಯುವ ಮಾತುಕತೆ ಆಗಿದ್ದು, ಕೆಲವರು ಮೂರು ಲಕ್ಷ ರೂ. ಮುಂಗಡ ಕೊಟ್ಟಿದ್ದಾರೆ ಎಂದರು.
ಈ ಪರೀಕ್ಷೆ ವೇಳೆ ಗೋಕಾಕ ನಗರದ ಪರೀಕ್ಷಾ ಕೇಂದ್ರದಲ್ಲಿ ಸ್ಮಾರ್ಟ್ ವಾಚ್ ಮೂಲಕ ಪರೀಕ್ಷೆ ಪತ್ರಿಕೆಯ ಫೋಟೋ ತೆಗೆದು ನಕಲು ಮಾಡುತ್ತಿರುವ ದೂರಿನ ಮೇರೆಗೆ ತನಿಖೆ ಆರಂಭಿಸಲಾಯಿತು. ಪರೀಕ್ಷೆ ಕೇಂದ್ರದಲ್ಲಿದ್ದ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಜಾಲ ಸಿಕ್ಕಿತು. ಒಟ್ಟು ಮೂರು ತಂಡಗಳು ಇದರಲ್ಲಿ ಸಕ್ರಿಯವಾಗಿದ್ದು, ಇನ್ನೂ ಕೆಲವರ ಪತ್ತೆಗೆ ಜಾಲ ಬೀಸಲಾಗಿದೆ. ಬೆಳಗಾವಿ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಯಿಂದ ಅಕ್ರಮ ಕಾರ್ಯನಿರ್ವಹಣೆ ಆಗಿದೆ ಎಂದರು.
ಗದಗ ಬೆಟಗೇರಿಯ ಅಭ್ಯರ್ಥಿಯ ತಂದೆ ಪ್ರಾಚಾರ್ಯರಾಗಿದ್ದು, ಪರೀಕ್ಷಾ ಕೇಂದ್ರಕ್ಕೆ ಪತ್ರಕರ್ತರ ಸೋಗಿನಲ್ಲಿ ಹೋಗಿ ಪ್ರಶ್ನೆ ಪತ್ರಿಕೆಯ ಫೋಟೋ ಕ್ಲಿಕ್ಕಿಸಿಕೊಂಡು ಹುಕ್ಕೇರಿ ತಾಲೂಕಿನ ಶಿರಹಟ್ಟಿ ಬಿ.ಕೆ.ಗ್ರಾಮದ ಫಾರ್ಮ್ ಹೌಸ್‌ನಲ್ಲಿ ಕುಳಿತುಕೊಂಡು ಉತ್ತರ ಹೇಳುತ್ತಿದ್ದರು. ವಿವಿಧ ಪರೀಕ್ಷಾ ಕೇಂದ್ರದಲ್ಲಿನ ಅಭ್ಯರ್ಥಿಗಳು ಬ್ಲೂಟೂತ್ ಸಾಧನ ಬಳಸಿ ಉತ್ತರಗಳನ್ನು ಬರೆದಿದ್ದಾರೆ. ಉತ್ತರಗಳನ್ನು ಶಿಕ್ಷಕರೊಬ್ಬರು ಹೇಳಿರುವುದು ಗೊತ್ತಾಗಿದ್ದು, ಅವರನ್ನೂ ಶೀಘ್ರದಲ್ಲಿ ಬಂಧಿಸಲಾಗುವುದು. ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ನಡೆಸುತ್ತಿರುವ ವ್ಯಕ್ತಿಯೊಬ್ಬ ಆರೋಪಿಯಾಗಿದ್ದು, ಈತನ ಬಂಧನಕ್ಕೆ ತಂಡ ಸಕ್ರಿಯವಾಗಿದೆ ಎಂದರು.
ಬಾಯಲ್ಲಿ ಡಿವೈಸ್!
ಪರೀಕ್ಷಾ ಅಕ್ರಮ ನಡೆಸಲು ಆರೋಪಿಗಳು ಅನೇಕ ಕಾರ್ಯತಂತ್ರ ಹೆಣೆಯುತ್ತಾರೆ. ಕೆಪಿಟಿಸಿಎಲ್ ಪರೀಕ್ಷೆ ವೇಳೆ ಕಿರಿದಾದ ಬ್ಲೂಟೂತ್ ಕಿವಿಯಲ್ಲಿ ಹಾಕಿಕೊಳ್ಳುತ್ತಾರೆ. ನಂತರ ಅದಕ್ಕೆ ಕನೆಕ್ಟ್ ಇರುವ ಸಾಧನವನ್ನು ಬಾಯಲ್ಲಿ ಇಟ್ಟುಕೊಂಡಿದ್ದರು. ಇನ್ನೂ ಕೆಲವರು ತೋಳಿನಲ್ಲಿ, ಬಟ್ಟೆಯಲ್ಲಿ ಸುತ್ತಿಕೊಂಡು ಒಳ ಉಡುಪಿನಲ್ಲಿ ಇಟ್ಟುಕೊಂಡಿದ್ದರು. ಕಿವಿಯಲ್ಲಿ ಹಾಕುವ ಬ್ಲೂಟೂತ್ ತೆಗೆಯಲು ಸಣ್ಣದಾದ ಕಡ್ಡಿಯೂ ಅಭ್ಯರ್ಥಿಗಳ ಬಳಿ ಪತ್ತೆಯಾಗಿವೆ.
ಕೆಪಿಟಿಸಿಎಲ್ ಕಿರಿಯ ದರ್ಜೆ ಸಹಾಯಕ ಪರೀಕ್ಷೆ ವೇಳೆ ಅಕ್ರಮ ನಡೆದಿರುವುದನ್ನು ಗೋಕಾಕ ಪೊಲೀಸರು ತನಿಖೆ ನಡೆಸಿ ಬಯಲಿಗೆಳೆದಿದ್ದಾರೆ. ಈತನಕ 9 ಜನರನ್ನು ಬಂಧಿಸಲಾಗಿದೆ. ತನಿಖೆ ಮುಂದುವರೆದಿದ್ದು, ಯಾರೇ ಭಾಗಿಯಾಗಿದ್ದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು.
-ಸಂಜೀವ್ ಪಾಟೀಲ, ಎಸ್‌ಪಿ, ಬೆಳಗಾವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.