ಸೆ.20 ರಂದು ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಗೆ ರೈತ ಸಂಘ ಮುತ್ತಿಗೆ
Team Udayavani, Sep 18, 2021, 5:42 PM IST
ಬೈಲಹೊಂಗಲ: ಇದೆ ತಿಂಗಳು 20 ರಂದು ಅಥಣಿಯಲ್ಲಿನ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಲು ರಾಜ್ಯ ರೈತ ಸಂಘ ನಿರ್ಧರಿಸಿದೆ ಎಂದು ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಚೂನಪ್ಪ ಪೂಜೇರಿ ತಿಳಿಸಿದರು.
ತಾಲೂಕಿನ ನಯಾ ನಗರ ಗ್ರಾಮದ ಸಮೀಪದ ಮಲಪ್ರಭಾ ನದಿಯ ದಡದಲ್ಲಿನ ಕಬ್ಬಿನ ಗದ್ದೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೆಪ್ಟೆಂಬರ್ 20 ರಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಶಶಿಕಾಂತ್ ಪಡಸಲಗಿ ನೇತೃತ್ವದಲ್ಲಿ ಅಥಣಿಯ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಲು ರೈತ ಸಂಘ ನಿರ್ಧರಿಸಿದೆ. ಅಥಣಿ ಭಾಗದ ಕಬ್ಬು ಬೆಳೆಗಾರರಿಗೆ ಆಗುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬೆಳಗಾವಿ ಜಿಲ್ಲಾ ಅಧ್ಯಕ್ಷ ರಾಘವೇಂದ್ರ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೀರೇಶ್ ಮಂಡೆದ, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಈಶ್ವರ್ ಶಿಲ್ಲೇದಾರ, ಬೈಲಹೊಂಗಲ ತಾಲೂಕು ಅಧ್ಯಕ್ಷ ಮಹಾಂತೇಶ್ ಹಿರೇಮಠ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.