ಮೈದುಂಬಿದ ಕೃಷ್ಣಾ-ವೇದಗಂಗಾ
•ಕೊಂಕಣ ಭಾಗದಲ್ಲಿ ಧಾರಾಕಾರ ಮಳೆ •ಕೃಷ್ಣಾ ನದಿ ನೀರಿನ ಮಟ್ಟ ಏರಿಕೆ
Team Udayavani, Jul 8, 2019, 10:07 AM IST
ಚಿಕ್ಕೋಡಿ: ಕೃಷ್ಣಾ ನದಿಗೆ ಅಪಾರ ಪ್ರಮಾಣ ನೀರು ಹರಿದು ಬರುತ್ತಿದ್ದು, ಕಲ್ಲೋಳ-ಯಡೂರ ಸೇತುವೆ ಮುಳುಗಡೆಗೊಂಡಿದೆ.
ಚಿಕ್ಕೋಡಿ: ಕೃಷ್ಣಾ ನದಿ ಉಗಮ ಸ್ಥಾನ ವ್ಯಾಪ್ತಿಯಲ್ಲಿ ಭಾರಿ ಮಳೆ ಸುರಿದಿರುವ ಪರಿಣಾಮ ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಭಾರೀ ಏರಿಕೆ ಕಂಡಿದ್ದು, ರವಿವಾರ ಚಿಕ್ಕೋಡಿ ತಾಲೂಕಿನ ಆರು ಸೇತುವೆಗಳು ಜಲಾವೃತಗೊಂಡು ಸಂಚಾರ ಕಡಿತಗೊಂಡಿವೆ.
ಮಹಾರಾಷ್ಟ್ರದ ಕೊಂಕಣ ಭಾಗವಾದ ನವಜಾ, ಕೊಯ್ನಾ, ಮಹಾಬಲೇಶ್ವರ ಜಲಾನಯನ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಧಾರಾಕಾರ ಸುರಿದ ಮಳೆಯಿಂದ ಗಡಿ ಭಾಗದ ನದಿಗಳು ಅಪಾಯ ಮಟ್ಟ ಮೀರಿ ಹರಿಯಲಾರಂಭಿಸಿವೆ. ಚಿಕ್ಕೋಡಿ ತಾಲೂಕಿನ ಆರು ಸೇತುವೆಗಳು ರವಿವಾರ ಬೆಳಗಿನ ಜಾವ ಮುಳುಗಡೆಗೊಂಡು ಸಂಚಾರ ಕಡಿತಗೊಂಡಿವೆ. ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಲ್ಲೋಳ-ಯಡೂರ, ವೇದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬೋಜವಾಡಿ-ಕುನ್ನುರ, ಸಿದ್ನಾಳ-ಅಕ್ಕೋಳ, ಜತ್ರಾಟ-ಭಿವಸಿ, ದೂಧಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಮಲಿಕವಾಡ-ದತ್ತವಾಡ, ಕಾರದಗಾ-ಭೋಜ ಸೇತುವೆಗಳು ಮುಳುಗಡೆಗೊಂಡಿವೆ.
ಕೃಷ್ಣಾ ನದಿ ಹಾಗೂ ದೂಧಗಂಗಾ ನದಿಗೆ ನೀರಿನ ಮಟ್ಟ ಹೆಚ್ಚಳವಾಗಿರುವ ಹಿನ್ನೆಲ್ಲೆಯಲ್ಲಿ ಮಹಾರಾಷ್ಟ್ರದ ಗಡಿ ಭಾಗದಲ್ಲಿರುವ ರಾಜಾಪುರ ಬ್ಯಾರೇಜ್ ಮೂಲಕ ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ 36066 ಕ್ಯೂಸೆಕ್ ನೀರು ಹರಿದು ಜಮಖಂಡಿ ತಾಲೂಕಿನ ಹಿಪ್ಪರಗಿ ಅಣೆಕಟ್ಟಿಗೆ ಹೋಗುತ್ತಿದೆ. ಅಲ್ಲಿಂದ 23600 ಕ್ಯೂಸೆಕ್ ನೀರು ಹರಿದು ಆಲಮಟ್ಟಿಗೆ ಹರಿದು ಹೋಗುತ್ತಿದೆ. ಇದೇ ರೀತಿ ಕೊಂಕಣ ಭಾಗದಲ್ಲಿ ಮಳೆ ಅಬ್ಬರ ಮುಂದುವರೆದರೆ ಮತ್ತಷ್ಟು ನದಿಗಳ ನೀರಿನ ಮಟ್ಟದಲ್ಲಿ ಹೆಚ್ಚಳವಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ತಹಶೀಲ್ದಾರ್ ಡಾ| ಸಂತೋಷ ಬಿರಾದಾರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ
Belgavi; ಕರಾಳ ದಿನಾಚರಣೆ ನಡೆಸಿದ ಎಂಇಎಸ್ ನವರ ವಿರುದ್ಧ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.