ಕೆವಿಜಿ ಅಧಿಕಾರಿ ವರ್ಗಾವಣೆ ರದ್ದತಿಗೆ ಮನವಿ
Team Udayavani, Apr 23, 2021, 7:48 PM IST
ಅಡಹಳ್ಳಿ: ಗ್ರಾಮದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಶಾಖೆಯ ಫೀಲ್ಡ್ ಆಫೀಸರ್ ಪಿ. ಸತೀಶ ವರ್ಗಾವಣೆ ರದ್ದು ಪಡಿಸಿ ಪುನಃ ಇದೇ ಶಾಖೆಯಲ್ಲಿ ಮುಂದುವರೆಸಬೇಕು ಎಂದು ಆಗ್ರಹಿಸಿ ಮ್ಯಾನೇಜರ್ ವಿಜಯ ಕೇಡಕರ್ ಅವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.
ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯವಿಟ್ಟುಕೊಂಡು ಬ್ಯಾಂಕಿನ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ತಮಗೆ ತಿಳಿದಿರುವಂತೆ 66 ಶಾಖೆಗಳಲ್ಲಿಯೇ ಅತಿಹೆಚ್ಚು ಕಟಬಾಕಿ ಸಾಲ ವಸೂಲಾತಿ ಮಾಡಿ ಪ್ರಥಮ ಸ್ಥಾನ ಪಡೆದಿದ್ದಾರೆ, ಹೀಗಾಗಿ ಕನಿಷ್ಠ ಇನ್ನೂ ಒಂದು ವರ್ಷವಾದರೂ ಈ ಗ್ರಾಮದಲ್ಲಿಯೇ ಮುಂದುವರೆಯುವಂತೆ ಆದೇಶ ಮಾಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.
3 ವರ್ಷಗಳಲ್ಲಿ ಗಣನೀಯ ಸಾಧನೆ ಮಾಡಿದ ಸತೀಶರ ವರ್ಗಾವಣೆ ರದ್ದು ಮಾಡದಿದ್ದರೆ ಬ್ಯಾಂಕಿಗೆ ಬೀಗ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ. ಈ ವೇಳೆ ಎಪಿಎಂಸಿ ನಿರ್ದೇಶಕ ಅಡಿವೆಪ್ಪಾ ಕೆಂಚಣ್ಣವರ, ಗ್ರಾಪಂ ಮಾಜಿ ಅಧ್ಯಕ್ಷ ಈರಗೌಡ ಪಾಟೀಲ, ಸಿದ್ಧು ಕೆಂಚಣ್ಣವರ, ಬಸವಂತ ಕಳ್ಳಿ, ಗಂಗಪ್ಪ ಖೋತ, ದಾನಯ್ಯ ಮಠಪತಿ, ಲಕ್ಷ್ಮಣ ಸಾತಣ್ಣವರ, ಶಿವಾಜಿ ಡಂಬಳಕರ, ಕಲಗೌಡ ಪಾಟೀಲ, ಸೋಮನಿಂಗ ಗುಡ್ಡಾಪುರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.