ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ

ಗ್ರಾಮೀಣ ಪ್ರದೇಶದ ಜನರ ಗೋಳಾಟ

Team Udayavani, Jun 9, 2020, 12:10 PM IST

ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ

ಚಿಕ್ಕೋಡಿ: ಗಡಿಭಾಗದಲ್ಲಿ ಕಿಲ್ಲರ್‌ ಕೋವಿಡ್ ತಾಂಡವವಾಡುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರದ ನಾಲ್ಕು ಜನ ಪ್ರಭಾವಿ ಸಚಿವರ ತವರು ಜಿಲ್ಲೆಯಲ್ಲಿಯೇ ತಜ್ಞ ವೈದ್ಯರ ಕೊರತೆ ಎದುರಾಗಿದೆ. ಇದರಿಂದ ಸಾರ್ವಜನಿಕ ಆಸ್ಪತ್ರೆಗಳು ಬಣಗುಡುತ್ತಿವೆ. ಸೂಕ್ತ ಚಿಕಿತ್ಸೆಗಾಗಿ ಗ್ರಾಮೀಣ ಪ್ರದೇಶದ ಜನ ಪರದಾಡುವಂತಾಗಿದೆ.

ಚಿಕ್ಕೋಡಿ ಅಪರ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ವ್ಯಾಪ್ತಿಯಲ್ಲಿ ಬರುವ ಚಿಕ್ಕೋಡಿ, ಅಥಣಿ, ರಾಯಬಾಗ, ಗೋಕಾಕ ಮತ್ತು ಹುಕ್ಕೇರಿ ತಾಲೂಕುಗಳನ್ನು ಒಳಗೊಂಡ ನಿಯೋಜಿತ ಚಿಕ್ಕೋಡಿ ಜಿಲ್ಲೆಯಲ್ಲಿ 52 ಜನ ತಜ್ಞ ವೈದ್ಯರ ಕೊರತೆ ಎದ್ದು ಕಾಣುತ್ತಿದೆ. ಬಡ ರೋಗಿಗಳಿಗೆ ಆಪತ್ಭಾಂಧವವಾಗಬೇಕಿದ್ದ ಸರಕಾರಿ ಆಸ್ಪತ್ರೆಗಳು ತಜ್ಞ ವೈದ್ಯರು ಇಲ್ಲದ ಕಾರಣ ಖಾಸಗಿ ಆಸ್ಪತ್ರೆಗಳ ಮೋರೆ ಹೋಗುವುದು ಅನಿವಾರ್ಯವಾಗಿದೆ.

ಎಲ್ಲೆಲ್ಲಿ ಎಷ್ಟು ಹುದ್ದೆ ಖಾಲಿ?: ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಇಡೀ ತಾಲೂಕಿನಲ್ಲಿರುವ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸಲು 39 ಜನ ವೈದ್ಯರ ಮಂಜೂರಾತಿದೆ. ಇದರಲ್ಲಿ 11 ಜನ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಿದರೆ, 14 ಜನ ವೈದ್ಯರ ಕೊರತೆ ಇದೆ. ಅಥಣಿ ತಾಲೂಕಿನಲ್ಲಿ 38 ಜನ ವೈದ್ಯರ ಹುದ್ದೆ ಮಂಜೂರಾತಿಯಲ್ಲಿ 16 ಜನ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದು, 4 ಜನ ವೈದ್ಯರ ಹುದ್ದೆ ಖಾಲಿ ಇದೆ. ಗೋಕಾಕ ತಾಲೂಕಿನಲ್ಲಿ 48 ಹುದ್ದೆಗಳ ಮಂಜೂರಾತಿಯಲ್ಲಿ 17 ಜನ ಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದು, 14 ಹುದ್ದೆಗಳು ಖಾಲಿ ಇದೆ. ಹುಕ್ಕೇರಿ ತಾಲೂಕಿನ 39 ಹುದ್ದೆಗಳ ಪೈಕಿ 7 ಜನ ಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದು, 6 ಹುದ್ದೆ ಖಾಲಿ ಇವೆ. ರಾಯಬಾಗ ತಾಲೂಕಿನಲ್ಲಿ 28 ವೈದ್ಯರ ಹುದ್ದೆಯಲ್ಲಿ ಇಬ್ಬರು ಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದು, 14 ಹುದ್ದೆಗಳು ಖಾಲಿ ಇವೆ. ಕಾರ್ಯಭಾರ ಹೊರೆ: ಹುದ್ದೆಗಳು ಖಾಲಿ ಇರುವುದರಿಂದ ಒಬ್ಬೊಬ್ಬ ವೈದ್ಯರು ಎರಡ್ಮೂರು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿದೆ. ವಾರದಲ್ಲಿ ಒಂದೊಂದು ಆಸ್ಪತ್ರೆಯಲ್ಲಿ ಮೂರು ಮೂರು ದಿನಗಳ ಕರ್ತವ್ಯ ನಿರ್ವಹಿಸುವಂತಾಗಿದೆ. ಇದರಿಂದ ಗ್ರಾಮೀಣ ಪ್ರದೇಶದ ಜನರು ವೈದ್ಯಕೀಯ ಸೇವೆಯಿಂದ ವಂಚಿತರಾಗುತ್ತಿದ್ದಾರೆ.

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಸಚಿವ ಶ್ರೀಮಂತ ಪಾಟೀಲ ತವರು ಜಿಲ್ಲೆಯಲ್ಲಿ ತಜ್ಞ ವೈದ್ಯರು ಇಲ್ಲದೇ ಸರಕಾರಿ ಆಸ್ಪತ್ರೆಗಳು ಬಾಗಿಲು ಮುಚ್ಚುವ ಸ್ಥಿತಿಗೆ ಬಂದಿವೆ. ಬಡವರ ಆರೋಗ್ಯದ ಕಡೆ ಗಮನ ಹರಿಸಿ ಸುಸಜ್ಜಿತ ಆಸ್ಪತ್ರೆಗಳಲ್ಲಿ ವೈದ್ಯರನ್ನು ನೇಮಕ ಮಾಡಬೇಕು ಎಂಬುದು ಗಡಿ ಜನರ ಒತ್ತಾಯವಾಗಿದೆ.

ವೈದ್ಯರ ಕೊರತೆ ಚಿಕ್ಕೋಡಿ ಭಾಗಕ್ಕಷ್ಟೇ ಅಲ್ಲದೆ ಇಡೀ ರಾಜ್ಯಕ್ಕೆ ಎದುರಾಗಿದೆ. ಎಲ್ಲ ಆಸ್ಪತ್ರೆಯಲ್ಲಿ ವೈದ್ಯರ ನೇಮಕ ಕುರಿತು ನಾಲ್ಕು ಬಾರಿ ನೇಮಕಾತಿ ಟೆಂಡರ್‌ ಕರೆದರೂ ಯಾರು ಆಸಕ್ತಿ ತೋರಲಿಲ್ಲ. ಹೀಗಾಗಿ ಗ್ರಾಮೀಣ ಪ್ರದೇಶದಲ್ಲಿ ವೈದ್ಯರ ಕೊರತೆ ಇದ್ದು, ಇರುವಷ್ಟು ವೈದ್ಯರಲ್ಲಿಯೇ ಸೇವೆ ನೀಡಲಾಗುತ್ತಿದೆ. ವೈದ್ಯರ ನೇಮಕ ಕುರಿತು ಸರಕಾರದ ಮಟ್ಟದಲ್ಲಿಯೂ ಪ್ರಸ್ತಾವನೆ ಇದೆ. -ಡಾ| ಎಸ್‌.ವಿ. ಮುನ್ಯಾಳ, ಜಿಲ್ಲಾ ಆರೋಗ್ಯಾಧಿಕಾರಿ

ಸರಕಾರ ಗ್ರಾಮೀಣ ಪ್ರದೇಶದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡುತ್ತದೆ. ಆದರೆ ಪೂರ್ಣ ಪ್ರಮಾಣದ ವೈದ್ಯರ ನೇಮಕ ಮಾಡಿಕೊಳ್ಳದೇ ಇರುವುದರಿಂದ ಗ್ರಾಮೀಣ ಪ್ರದೇಶದ ಜನರಿಗೆ ವೈದ್ಯಕೀಯ ಸೇವೆ ಲಭ್ಯವಾಗುತ್ತಿಲ್ಲ. ಸರಕಾರ ಎಚ್ಚೆತ್ತುಕೊಂಡು ಆಸ್ಪತ್ರೆಗಳಿಗೆ ವೈದ್ಯರ ನೇಮಕ ಮಾಡಲು ಚಿಂತನೆ ಮಾಡಬೇಕು. -ಸಂತೋಷ ನವಲೆ, ಸಾಮಾಜಿಕ ಹೋರಾಟಗಾರ, ಸದಲಗಾ

ಮಹಾದೇವ ಪೂಜೇರಿ

ಟಾಪ್ ನ್ಯೂಸ್

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

accident2

Gangolli: ಸ್ಕೂಟರ್‌ – ಬೈಕ್‌ ಢಿಕ್ಕಿ; ಗಾಯ

ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

Congress Session: ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.