ಚಿಕ್ಕೋಡಿ ಪುರಸಭೆಯಲ್ಲಿ ವಿದ್ಯಾರ್ಥಿನಿಯರಿಂದ ಒಂದು ದಿನ ಅಧಿಕಾರ ನಿರ್ವಹಣೆ
Team Udayavani, Mar 8, 2021, 2:19 PM IST
ಚಿಕ್ಕೋಡಿ: ನಗರದ 23 ವಾರ್ಡ್ ಗಳಲ್ಲಿ ಕಸ ವಿಲೇವಾರಿ ಸಮಸ್ಯೆ, ತಿಂಗಳಿಗೊಮ್ಮೆ ಗಟಾರ ಸ್ವಚ್ಚತೆ, ಹಂದಿಗಳ ಕಾಟಕ್ಕೆ ಜನ ಕಂಗಾಲು, ಖಾಸಗಿ ಜಾಗದಲ್ಲಿ ಕಸದ ರಾಶಿ ಕುರಿತು ಪ್ರಶ್ನೆಗಳ ಮೇಲೆ ಪ್ರಶ್ನೆ ಹಾಕಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಘಟನೆ ನಡೆಯಿತು.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಚಿಕ್ಕೋಡಿ ಪುರಸಭೆಯಲ್ಲಿ ವಿದ್ಯಾರ್ಥಿನಿಯರಿಂದ ಒಂದು ದಿನದ ಪುರಸಭೆ ಅಧಿಕಾರದ ನಿರ್ವಹಣೆಯಲ್ಲಿ ನಗರದ ಎಲ್ಲ ವಾರ್ಡ್ ಗಳ ಸದಸ್ಯರು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ದೃಶ್ಯವಿದು.
ಅಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಮತ್ತು ನಗರದ 23 ವಾರ್ಡ್ ಸದಸ್ಯರನ್ನು ಮತದಾರರು ಚುನಾವಣೆ ಮೂಲಕ ಆಯ್ಕೆ ಮಾಡಿ ಸ್ಥಳೀಯ ಸಂಸ್ಥೆಗಳ ರೀತಿ ಚುನಾವಣೆ ನಡೆದಿರುವುದು ವಿಶೇಷವಾಗಿತ್ತು.
ಇದನ್ನೂ ಓದಿ:ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ, ಕುರಿ, ಕೋಳಿ ತಳಿ ಸಂವರ್ಧನೆಗೆ ಹೊಸ ಯೋಜನೆ ಘೋಷಣೆ
ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಪ್ರೀಯಾ ಕುಲಕರ್ಣಿ, ನಗರದ ಸಮಗ್ರ ಅಭಿವೃದ್ಧಿಗೆ ಅಧಿಕಾರಿಗಳು ಮುತುರ್ವಜಿ ವಹಿಸಬೇಕು. ನಗರದಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಅಧಿಕಾರಿಗಳು ಗಮನ ಹರಿಸಬೇಕು. ಕುಡಿಯುವ ನೀರು, ವಿದ್ಯುತ್ ದೀಪ, ಕಸವಿಲೇವಾರಿ ಸಮರ್ಪಕವಾಗಿ ನಡೆಯಬೇಕು, ನಗರದ ನಾಗರಿಕರಿಂದ ಯಾವುದೇ ತಕರಾರು ತಂಟೆ ಬರದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಪುರಸಭೆ ಪರಿಸರ ಅಭಿಯಂತರ ಪ್ರೀಯಂಕಾ ವಿನಾಯಕ ಅವರು. ನಗರದಲ್ಲಿ ಕಸವಿಲೇವಾರಿ ಮಾಡಲು 6 ವಾಹನಗಳಿದ್ದು. ಪ್ರತಿ ದಿನ ಬೆಳಿಗ್ಗೆ ನಗರದ ಎಲ್ಲ ವಾರ್ಡಗಳಿಗರ ಗಂಟೆ ವಾಹನಕ್ಕೆ ನಾಗರಿಕರು ಕಸ ಹಾಕಲು ವ್ಯವಸ್ಥೆ ಮಾಡಲಾಗಿದೆ ಎಂದರು.
ಮುಖ್ಯಾಧಿಕಾರಿ ಡಾ.ಸುಂದರ ರೋಗಿ ಮಾತನಾಡಿ, ವಾರ್ಡದಲ್ಲಿರುವ ಸಮಸ್ಯೆಗಳ ಕುರಿತು ಸದಸ್ಯರ ಮನವಿಗೆ ಪುರಸಭೆ ಸ್ಪಂದಿಸುತ್ತದೆ. ಹಂತಹಂತವಾಗಿ ಅಭಿವೃದ್ಧಿ ಕಾರ್ಯ ಮಾಡಿ ಸುಂದರ ನಗರವನ್ನಾಗಿ ಮಾಡಲಾಗುತ್ತದೆ. ಎಲ್ಲ ಸದಸ್ಯರು ಸಹಕಾರ ನೀಡಬೇಕು. ಪೌರಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಎಲ್ಲ ಸೌಲಭ್ಯ ನೀಡಲಾಗುತ್ತದೆ. ಪ್ರತಿ ತಿಂಗಳು ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಎಂದರು.
ಇದನ್ನೂ ಓದಿ: ಕರ್ನಾಟಕ ಬಜೆಟ್ 2021: ಮಹಿಳೆಯರಿಗೆ ಬಂಪರ್ ಯೋಜನೆ ಘೋಷಣೆ, ಶೇ.4ರ ಬಡ್ಡಿದರದಲ್ಲಿ 2 ಕೋಟಿ ಸಾಲ
ಸ್ಥಾಯಿ ಸಮಿತಿ ಅಧ್ಯಕ್ಷ ಜ್ಯೋತಿ ಹಿರೇಮಠ, ಉಪಾಧ್ಯಕ್ಷರಾಗಿ ತೇಜಸ್ವಿನಿ ಮಲ್ನಾಡೆ ಸಭೆಯಲ್ಲಿ ಇದ್ದರು.
ಈ ಸಂದರ್ಭದಲ್ಲಿ ಜಗದೀಶ ಕವಟಗಿಮಠ, ಪುರಸಭೆ ಅಧ್ಯಕ್ಷ ಪ್ರವೀಣ್ ಕಾಂಬಳೆ, ಉಪಾಧ್ಯಕ್ಷ ಸಂಜಯ ಕವಟಗಿಮಠ, ವರ್ಧಮಾನ ಸದಲಗೆ, ನಾಗರಾಜ ಮೇಧಾರ, ವಿಶ್ವನಾಥ ಕಾಮಗೌಡ, ಸಂತೋಷ ಟವಳೆ, ಸಿದ್ದಪ್ಪ ಡಂಗೇರ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Belagavi: ಗಾಂಧಿ ಭಾರತ ಹಿನ್ನೆಲೆ ಡಿ. 26, 27 ರಂದು ಕೆಲ ಶಾಲೆಗಳಿಗೆ ರಜೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.