ನೂತನ ಬಸ್ ಗಳ ಲೋಕಾರ್ಪಣೆ ಮಾಡಿದ ಡಿಸಿಎಂ ಲಕ್ಷ್ಮಣ ಸವದಿ
Team Udayavani, Jan 6, 2020, 11:27 AM IST
ಬೆಳಗಾವಿ: ನಗರ ಕೇಂದ್ರ ಬಸ್ ನಿಲ್ದಾಣದ ಕಾಮಗಾರಿಗಳನ್ನು ಬೇಗನೆ ಪೂರ್ಣಗೊಳಿಸಿ ಜೂನ್ ವೇಳೆಗೆ ಸಾರ್ವಜನಿಕರ ಸೇವೆಗೆ ಸಮರ್ಪಣೆ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಹೇಳಿದರು. ನಗರದ ಬಸ್ ನಿಲ್ದಾಣದಲ್ಲಿ ಸೋಮವಾರ ಒಂಬತ್ತು ನೂತನ ಬಸ್ ಗಳನ್ನು ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳಿಸಿ ನಂತರ ಬಸ್ ನಿಲ್ದಾಣ ಕಾಮಗಾರಿಯ ಪರಿವೀಕ್ಷಣೆ ಕೈಗೊಂಡ ಅವರು, ಜೂನ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ್ ಕವಟಗಿಮಠ, ಶಾಸಕರಾದ ಅನಿಲ್ ಬೆನಕೆ, ಅಭಯ್ ಪಾಟೀಲ, ಮಹಾಂತೇಶ ದೊಡಗೌಡ್ರ, ಮಹೇಶ್ ಕುಮಠಳ್ಳಿ ಮತ್ತಿತರರು ಉಪಸ್ಥಿತರಿದ್ದರು.
ವಾಯವ್ಯ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್.ಮುಂಜಿ ಅವರು, ಬಸ್ ನಿಲ್ದಾಣದ ಕಾಮಗಾರಿ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಬಳಿಕ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು, ನೂತನ ಮಲ್ಟಿ ಎಕ್ಸೆಲ್ ಬಸ್ ನಲ್ಲಿ ಸುವರ್ಣ ವಿಧಾನಸೌಧಕ್ಕೆ ಪ್ರಯಾಣಿಸಿದರು.
ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ ಹಾಗೂ ಶಾಸಕರು ಬಸ್ ನಲ್ಲಿ ಜತೆಗೆ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Belagavi: ಎಸ್‌ಡಿಎ ರುದ್ರಣ್ಣ ಮೊಬೈಲ್ ಪತ್ತೆ: ಪೊಲೀಸರಿಂದ ತನಿಖೆ ಚುರುಕು
Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್
MUST WATCH
ಹೊಸ ಸೇರ್ಪಡೆ
Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ
Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ
Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.