Belagavi: ಕುಂಭಮೇಳದಲ್ಲಿ ಬೆಳಗಾವಿಯ ನಾಲ್ವರ ದುರ್ಮರಣ… ಹೆಬ್ಬಾಳ್ಕರ್, ಜಾರಕಿಹೊಳಿ ಸಂತಾಪ

Team Udayavani, Jan 29, 2025, 6:04 PM IST

Belagavi: ಕುಂಭಮೇಳದಲ್ಲಿ ಬೆಳಗಾವಿಯ ನಾಲ್ವರ ದುರ್ಮರಣ… ಹೆಬ್ಬಾಳ್ಕರ್, ಜಾರಕಿಹೊಳಿ ಸಂತಾಪ

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗರಾಜ್‌ನ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.

ದುರಂತದ ಕುರಿತು ಹೇಳಿಕೆ ನೀಡಿದ ಸಚಿವೆ ಹೆಬ್ಬಾಳ್ಕರ್ ‘ಕುಂಭಮೇಳದಲ್ಲಿ ನಡೆದ ದುರಂತದಲ್ಲಿ ಬೆಳಗಾವಿಯ ನಾಲ್ವರು ಸೇರಿದಂತೆ ಹಲವರು ಸಾವಿಗೀಡಾಗಿರುವ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ. ಈ ಸಂದರ್ಭದಲ್ಲಿ ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಹಾಗೂ ಕಾಲ್ತುಳಿತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಕಾಲ್ತುಳಿತದಲ್ಲಿ ರಾಜ್ಯದ ಇನ್ನು ಕೆಲವು ಜನ ಗಾಯಗೊಂಡಿರುವ ಮಾಹಿತಿಯಿದ್ದು, ಎಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ರಾಜ್ಯ ಸರ್ಕಾರ ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರ್ಕಾರ ಸಕಲ ಪ್ರಯತ್ನ ಮಾಡುತ್ತಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು ಘಟನೆ ಸಂಬಂಧ ಸಚಿವ ಸತೀಶ ಜಾರಕಿಹೊಳಿ ಸಂತಾಪ ಸೂಚಿಸಿದ್ದು ‘ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ವಡಗಾವಿ ನಿವಾಸಿಗಳಾದ ಜ್ಯೋತಿ ಹತ್ತರವಾಠ್ (50) ಮೇಘಾ ಹತ್ತರವಾಠ್, ಶೆಟ್ಟಿಗಲ್ಲಿ ನಿವಾಸಿ ಅರುಣ್ ಕೋಪರ್ಡೆ ಹಾಗೂ ಶಿವಾಜಿ ನಗರದ ಮಾಹಾದೇವಿ ಭವನೂರ ಅವರು ಮೃತಪಟ್ಟಿರುವುದು ತಿಳಿದು ದುಃಖಿತನಾಗಿದ್ದೇನೆ. ಆ ದೇವರು ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ಹಾಗೆ ಮೃತರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಪ್ರಯಾಗ್‌ರಾಜ್ ಮಹಾಕುಂಭದಲ್ಲಿ ಏಕಾಏಕಿ ಜನಸಂದಣಿ ಹೆಚ್ಚಾದ ಕಾರಣ ಮಾತಿನ ಚಕಮಕಿ ಉಂಟಾಗಿದೆ. ಈ ವೇಳೆ ಕಾಲ್ತುಳಿತದಿಂದ ಬೆಳಗಾವಿ ಮೂಲದ ನಾಲ್ವರು ಸಾವಣ್ಣಪ್ಪಿದ್ದಾರೆ. ಅಲ್ಲದೇ ಈ ಮಹಾಕುಂಭಮೇಳದಲ್ಲಿ ಬೆಳಗಾವಿ ಮೂಲದ 30 ಜನರು ಭಾಗವಹಿಸಿದ್ದು, ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರು ಸುರಕ್ಷಿತವಾಗಿ ಮರಳಲಿ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.

ಇದನ್ನೂ ಓದಿ: ಕುಂಭಮೇಳ ಕಾಲ್ತುಳಿತದಲ್ಲಿ ಬೆಳಗಾವಿಯ ಮತ್ತೋರ್ವ ಮಹಿಳೆ ಮೃತ್ಯು… ಮೃತರ ಸಂಖ್ಯೆ ನಾಲ್ಕಕ್ಕೆ

ಟಾಪ್ ನ್ಯೂಸ್

Vinaya-kulakarni

ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ

1-sidda

Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

1-rail

Railway; ಮಹಾಕುಂಭಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಲು ಮೋದಿ ಜಿ ಹೇಳಿದ್ದಾರೆ ಎಂದ ಮಹಿಳೆಯರು

Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್‌ ಹಿಟ್‌ ಕಂಡ ಶ್ರೀವಲ್ಲಿ

Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್‌ ಹಿಟ್‌ ಕಂಡ ಶ್ರೀವಲ್ಲಿ

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್   

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್  

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vinaya-kulakarni

ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ

1-sidda

Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

Bengaluru: ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿ ಆಯೋಗಕ್ಕೆ ಸಲ್ಲಿಕೆ

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ

Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ

Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

011

Sandalwood: ಮಾ.28ಕ್ಕೆ ಮನದ ಕಡಲು ತೆರೆಗೆ

Vinaya-kulakarni

ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ

1-sidda

Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ

10(1

Anandapura:ಮನೆಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ; ಶಾಸಕ ಗೋಪಾಲಕೃಷ್ಣ ಬೇಳೂರು ಸ್ಥಳಕ್ಕೆ ಭೇಟಿ

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.