Lakshmi Hebbalkar ಬಿದ್ದಾಗ ಸೊರಗೋದು, ಗೆದ್ದಾಗ ಸೊಕ್ಕು ಮಾಡೋದು ರಾಜಕಾರಣವಲ್ಲ


Team Udayavani, Jul 11, 2024, 8:42 PM IST

Lakshmi Hebbalkar ಬಿದ್ದಾಗ ಸೊರಗೋದು, ಗೆದ್ದಾಗ ಸೊಕ್ಕು ಮಾಡೋದು ರಾಜಕಾರಣವಲ್ಲ

ಮೂಡಲಗಿ: ಗೆದ್ದಾಗ ಸೊಕ್ಕಾಗಲಿ, ಸೋತಾಗ ಸೊರಗುವುದಾಗಲಿ ನನ್ನ ಜಾಯಮಾನವಲ್ಲ. ಸೋಲಲಿ, ಗೆಲ್ಲಲಿ ಯಾವತ್ತೂ ಜನರೊಂದಿಗಿದ್ದು ಅವರ ಕಷ್ಟ ಸುಖದಲ್ಲಿ ಭಾಗಿಯಾಗುವುದು ನನ್ನ ಗುಣ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಗುರುವಾರ ಮೂಡಲಗಿ ತಾಲೂಕಿನ ಅರಭಾವಿ ಬಳಿಯ ಬಸವೇಶ್ವರ ಸಮುದಾಯ ಭವನದಲ್ಲಿ ಅರಭಾವಿ ಮತ್ತು ಗೋಕಾಕ ಮತಕ್ಷೇತ್ರ ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಣಾ ಸಮಾರಂಭದಲ್ಲಿ ಸಚಿವರು ಮಾತನಾಡುತ್ತಿದ್ದರು. ಸೋಲು, ಗೆಲುವು ಸಹಜ ಪ್ರಕ್ರಿಯೆ.

ರಾಜಕಾರಣ ನಿಂತ ನೀರಲ್ಲ, ಗೆಲುವು ಯಾರ ಸ್ವತ್ತಲ್ಲ, ಬಿದ್ದಾಗ ಸೊರಗೋದು, ಗೆದ್ದಾಗ ಸೊಕ್ಕು ಮಾಡೋದು ರಾಜಕಾರಣವಲ್ಲ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಬೆಳಗಾವಿ ಲೋಕಸಭೆಯ ಇತಿಹಾಸದಲ್ಲೇ ಕಳೆದ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಮತ ಪಡೆದಿದೆ. ತಾಂತ್ರಿಕವಾಗಿ ಸೋತಿರಬಹುದು. ಆದರೆ ಅತೀ ದೊಡ್ಡ ಸಂಖ್ಯೆಯಲ್ಲಿ ಜನರು ನಮ್ಮನ್ನು ಬೆಂಬಲಿಸಿದ್ದಾರೆ. ಪ್ರಚಾರಕ್ಕೆ ಹೋದಾಗ ಎಲ್ಲಕಡೆ ಅಭೂತಪೂರ್ವ ಬೆಂಬಲ ಸಿಗುತ್ತಿತ್ತು. ಈ ಬಾರಿ ಕಾಂಗ್ರೆಸ್ ಗೆೆಲುವು ಖಚಿತ ಎಂದು ಎಲ್ಲ ಕಡೆ ಜನರೇ ಮಾತನಾಡುತ್ತಿದ್ದರು. ಆದರೆ ಕಾರಣಾಂತರಗಳಿಂದ ಸೋತಿರಬಹುದು.

ಇಂದಿರಾಗಾಂಧಿ, ಸಿದ್ದರಾಮಯ್ಯ ಸೇರಿದಂತೆ ಸೋತವರೆಲ್ಲ ಮತ್ತೆ ಎದ್ದು, ಗೆದ್ದು ರಾಜಕಾರಣದಲ್ಲಿ ಹೆಸರು ಮಾಡಿದ್ದಾರೆ. ಅವರು ನಮಗೆ ಆದರ್ಶ ಎಂದು ಹೇಳಿದರು.

ನಾವು ಸದಾ ನಿಮ್ಮ ಜೊತೆಗಿರುತ್ತೇವೆ. ನಿಮ್ಮನ್ನು ದೂರ ಮಾಡುವ ಮನೋಭಾವ ನಮ್ಮದಲ್ಲ. ಸೋಲಿನಿಂದ ಕಂಗೆಡುವುದು ಬೇಡ. ಕೆಲವರು ಸೋತರೆ ಧಮಕಿ ಹಾಕುತ್ತಾರೆ. ಪ್ರಜಾಪ್ರಭುತ್ವದಲ್ಲಿ ಯಾರಿಗೂ ಹೆದರಬೇಕಿಲ್ಲ. ಬೇರೆಯವರು ನಮಗೆ ಅನ್ನ ಹಾಕುವುದಿಲ್ಲ. ಸ್ವಾಭಿಮಾನದಿಂದ ಬದುಕೋಣ. ಎಲ್ಲರೂ ಸೇರಿ ಪಕ್ಷ ಸಂಘಟನೆ ಮಾಡೋಣ ಎಂದು ಅವರು ತಿಳಿಸಿದರು.

ಕೆಲಸ ಮಾಡದವರು, ಮತ ಹಾಕಿದವರು, ಮತ ಹಾಕದವರು ಎಲ್ಲರೂ ಸಹ ನಮ್ಮವರೇ ಎಂದು ತಿಳಿಯೋಣ. ಯಾರ ಮೇಲೂ ಆರೋಪ ಮಾಡುವುದು ಬೇಡ.

ಬಹಳ ಶಿಸ್ತಿನಿಂದ ಎಲ್ಲರೂ ಕೆಲಸ ಮಾಡಿದ್ದೀರಿ. ಶ್ರಮ ಪಟ್ಟಿದ್ದೀರಿ. ನಿಮ್ಮ ಸಹಾಯಕ್ಕೆ ನಾವು ನಿಲ್ಲುತ್ತೇವೆ. ಗೋಕಾಕ, ಅರಬಾವಿ ಕ್ಷೇತ್ರದ ಜನರಲ್ಲಿ ಮಂದಹಾಸ ತಂದು ಕೊಡು ಎಂದು ನಾನು ದೇವಿ ಮಹಾಲಕ್ಷ್ಮಿಯಲ್ಲಿ ಬೇಡಿಕೊಳ್ಳುತ್ತೇನೆ ಎಂದು ಹೇಳಿದರು.

ನಿಮ್ಮ ಜೊತೆಗಿರುತ್ತೇನೆ: ಮೃಣಾಲ್‌ ಹೆಬ್ಬಾಳ್ಕರ್
ಲೋಕಸಭಾ ಚುನಾವಣೆ ಅಭ್ಯರ್ಥಿಯಾಗಿದ್ದ ಮೃಣಾಲ್‌ ಹೆಬ್ಬಾಳಕರ್ ಮಾತನಾಡಿ, ಚುನಾವಣೆ ಪ್ರಚಾರದ ವೇಳೆ ಪ್ರತಿ ಊರನ್ನು ತಲುಪುವ ಪ್ರಯತ್ನ ಮಾಡಿದ್ದೆವು. ಎಲ್ಲಕಡೆ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗಿತ್ತು. ಚುನಾವಣೆಯಲ್ಲಿ ಸೋತಿರಬಹುದು. ಆದರೆ 6 ಲಕ್ಷ ಜನರು ನಮ್ಮನ್ನು ಬೆಂಬಲಿಸಿದ್ದಾರೆ. ಇದು ಸಣ್ಣ ಸಂಖ್ಯೆಯಲ್ಲ. ಪ್ರತಿ ದಿನ ಚುನಾವಣೆ ಎಂದು ತಿಳಿದು ಕೆಲಸ ಮಾಡೋಣ. ನಾನು ಹಿಂಜರಿಯುವ ಪ್ರಶ್ನೆಯೇ ಇಲ್ಲ. ಸದಾ ನಿಮ್ಮ ಮನೆ ಮಗನಾಗಿ ಜೊತೆಗಿರುತ್ತೇನೆ. ಜಿಲ್ಲಾ, ತಾಲೂಕು ಪಂಚಾಯತ ಚುನಾವಣೆಯಲ್ಲಿ ನಿಮ್ಮೆಲ್ಲರ ಜೊತೆ ಇರುತ್ತೇನೆ.ಪಕ್ಷವನ್ನು ಬಲಿಷ್ಠಗೊಳಿಸಿ ಮುಂದಿನ ದಿನಗಳಲ್ಲಿ ಗೆಲ್ಲೋಣ ಎಂದು ಹೇಳಿದರು.

ಹಿರಿಯ ಮುಖಂಡ ಅಶೋಕ ಪೂಜಾರಿ ಮಾತನಾಡಿ, ಈ ಬಾರಿ ಹಿನ್ನಡೆ ಅನುಭವಿಸಿರಬಹುದು. ಆದರೆ ಮೃಣಾಲ ಹೆಬ್ಬಾಳ್ಕರ್ ಅವರ ವಿಚಾರ, ಕ್ರಿಯಾಶೀಲತೆ, ಎಲ್ಲರನ್ನೂ ಗೌರವಿಸುವ ಮನೋಭಾವ ಖಂಡಿತ ಅವರನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕ್ರಿಯಾಶೀಲತೆ, ಕತೃತ್ವ ಶಕ್ತಿ ಅವರನ್ನು ಈ ಎತ್ತರಕ್ಕೆ ಕೊಂಡೊಯ್ದಿದೆ ಎಂದರು.

ಸಿದ್ಧಲಿಂಗ ದಳವಾಯಿ ಮಾತನಾಡಿ, ಎಲ್ಲರೂ ಮನಸ್ಫೂರ್ತಿಯಿಂದ ಕೆಲಸ ಮಾಡಿದ್ದಾರೆ. ಆದರೂ ಕೆಲವೊಮ್ಮೆ ಅನಿರೀಕ್ಷಿತ ಫಲಿತಾಂಶ ಬರುತ್ತದೆ. ನಾವು ಎದೆಗುಂದುವುದು ಬೇಡ ಎಂದರು.

ಅನಿಲ ದಳವಾಯಿ ಮಾತನಾಡಿ, ಬಿಜೆಪಿಯ ಪೊಳ್ಳು ಭರವಸೆ, ಹಣ ಬಲದ ಮುಂದೆ ನಾವು ಸೋಲಬೇಕಾಯಿತು. ಸೋತಲ್ಲೇ ಗೆಲ್ಲೋಣ, ಹಿಂಜರಿಯಬೇಕಿಲ್ಲ. ಮುಂದಿನ ಬಾರಿ ಗೆಲ್ಲುವ ಪ್ರತಿಜ್ಞೆ ಮಾಡೋಣ ಎಂದರು.

ಮಹಾಂತೇಶ ಕಡಾಡಿ ಸ್ವಾಗತಿಸಿದರು. ಚಂದ್ರಶೇಖರ್ ಕೊಣ್ಣೂರ, ಲಕ್ಕಣ್ಣ ಸಂಶುದ್ದಿ, ರಾವ್ ಸಾಹೇಬ ಬೆಳಕೂಡ, ರಮೇಶ ಉಟಗಿ, ಕಲ್ಪನಾ ಜೋಶಿ, ಭೀಮಪ್ಪ ಹಂದಿಗುಂದ, ಚಂದನ ಗಿಡನ್ನವರ, ವಿ.ಪಿ.ನಾಯಕ, ಶಂಕರ್ ಗಿಡ್ಡನ್ನವರ, ಪ್ರಕಾಶ ಭಾಗೋಜಿ, ಬಸವರಾಜ ಬೆಳಕೊಡ್, ಲಗಮಣ್ಣ ಕಳಸಣ್ಣವರ, ಪ್ರಕಾಶ ಅರಳಿ, ಶಿವಪುತ್ರ ಜಕ‌ನಾಳ, ಜಯಗುನಿ ಬಡೇಖಾನ್, ದಸ್ತಗೀರ್ ಪೈಲವಾನ್, ಜಾಕೀರ್ ನದಾಫ್, ಅಪ್ಜಲ್ ಖತೀಬ್, ಶಬ್ಬೀರ್ ಮುಜಾವರ್, ಪುಟ್ಟು ಖಾನಾಪುರೆ, ರಾಜು ತೇಲಿ, ರಾಜುಗೌಡ ಪಾಟೀಲ, ಬಾಬು ಜಮಖಂಡಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

1-vvv

Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?

1-ausi

Australia; ‘ವನ್‌ ಡೇ ಕಪ್‌’ಗೆ ಡೀನ್‌ ಜೋನ್ಸ್‌  ಹೆಸರು

ravishankar-guruji

Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್‌

Ramalinga-reddy

Distribution: ಕೆಎಸ್ಸಾರ್ಟಿಸಿ ನಿವೃತ್ತ ಸಿಬಂದಿಗೆ 224 ಕೋಟಿ ರೂ. ಪಾವತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

1-vvv

Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?

1-ausi

Australia; ‘ವನ್‌ ಡೇ ಕಪ್‌’ಗೆ ಡೀನ್‌ ಜೋನ್ಸ್‌  ಹೆಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.