ಸೋದರರ ವಿರುದ್ಧ ಗೆದ್ದು ಬೀಗಿದ ಲಕ್ಷ್ಮೀ
Team Udayavani, Sep 8, 2018, 6:00 AM IST
ಬೆಳಗಾವಿ: ಜಾರಕಿಹೊಳಿ ಕುಟುಂಬದ ಶಾಸಕರು ಹಾಗೂ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ನಡುವಿನ ತೀವ್ರ ಭಿನ್ನಮತದಿಂದ ಇಡೀ ರಾಜ್ಯದ ಗಮನ ಸೆಳೆದಿದ್ದ ಬೆಳಗಾವಿ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಶುಕ್ರವಾರ ಸುಖಾಂತ್ಯ ಕಂಡಿದೆ.
ಎರಡೂ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದ್ದು, ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಗುಂಪಿನ ಉಚಗಾವ್ ಕ್ಷೇತ್ರದ 83 ವರ್ಷದ ಮಹದೇವ ಯಲ್ಲಪ್ಪ ಪಾಟೀಲ ಅಧ್ಯಕ್ಷರಾಗಿ ಹಾಗೂ ಸುಳೇಭಾವಿ ಕ್ಷೇತ್ರದ ಬಾಪುಸಾಹೇಬ ಮಹ್ಮದಅಲಿ ಜಮಾದಾರ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಬೆಳಗಾವಿ ತಹಶೀಲ್ದಾರ್ ಮಂಜುಳಾ ನಾಯಕ, ಮಧ್ಯಾಹ್ನ 2.10ಕ್ಕೆ ಅವಿರೋಧ ಆಯ್ಕೆಯ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಆ.28ರಂದು ಈ ಚುನಾವಣೆ ನಡೆಯಬೇಕಿತ್ತು. ಆದರೆ, ಒಬ್ಬ ನಿರ್ದೇಶಕರ ಅಪಹರಣ ಆಗಿದೆ ಎಂದು ದೂರು ಬಂದಿತ್ತು. ಪೊಲೀಸ್ ಅಧಿಕಾರಿಗಳು ಸಹ ಈ ಬಗ್ಗೆ ಮಾಹಿತಿ ನೀಡಿದ್ದರು. ಇದೆಲ್ಲವನ್ನು ಪರಿಶೀಲಿಸಿ ಚುನಾವಣೆ ಮುಂದೂಡಲಾಗಿತ್ತು. ಇದರ ಹಿಂದೆ ಯಾರ ಒತ್ತಡವೂ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು.
ಇದಕ್ಕೂ ಮುನ್ನ ಬೆಳಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಯಿತು. ಲಕ್ಷ್ಮೀ ಹೆಬ್ಟಾಳಕರ ಗುಂಪಿನ 9 ನಿರ್ದೇಶಕರು ಹೆಬ್ಟಾಳಕರ ನೇತೃತ್ವದಲ್ಲಿ ಕಪಿಲೇಶ್ವರ ಮಂದಿರದಲ್ಲಿ ಪೂಜೆ ಸಲ್ಲಿಸಿ ನಂತರ ಬ್ಯಾಂಕ್‌ಗೆ ಬಂದು ನಾಮಪತ್ರ ಸಲ್ಲಿಸಿದರು. ಆದರೆ, ಸತೀಶ ಜಾರಕಿಹೊಳಿ ಗುಂಪಿನ ಯಾವ ನಿರ್ದೇಶಕರೂ ಬಾರದೆ ಗೈರು ಹಾಜರಾಗಿ ಅಚ್ಚರಿಯ ಬೆಳವಣಿಗೆಗೆ ಕಾರಣರಾದರು.
ನಾಮಪತ್ರ ಸಲ್ಲಿಕೆ ಕಾರ್ಯ ಮುಕ್ತಾಯದ ನಂತರ ಸ್ಥಳಕ್ಕೆ ಬಂದ ಜಾರಕಿಹೊಳಿ ಗುಂಪಿನ ಪರಶುರಾಮ ಪಾಟೀಲ ಹಾಗೂ ನಾಲ್ವರು ನಿರ್ದೇಶಕರು “ನಮ್ಮ ನಾಯಕರ ಮಾತಿನಂತೆ ನಾವು ನಾಮಪತ್ರ ಸಲ್ಲಿಸಿಲ್ಲ. ನಮ್ಮಲ್ಲಿ ಯಾವುದೇ ಬಣ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಅವಿರೋಧ ಆಯ್ಕೆ ಮಾಡುತ್ತಿದ್ದೇವೆ. ಇದನ್ನು ಇಲ್ಲಿಗೇ ಮುಕ್ತಾಯಗೊಳಿಸಬೇಕು’ ಎಂದರು.
ಖಂಡ್ರೆ ಸಂಧಾನ ಯಶಸ್ವಿ: ಕಾಂಗ್ರೆಸ್ ವರಿಷ್ಠರ ಸೂಚನೆಯಂತೆ ರಾಜಿ ಸಂಧಾನ ಸೂತ್ರದೊಂದಿಗೆ ಬೆಳಗ್ಗೆ ನಗರಕ್ಕೆ ಆಗಮಿಸಿದ ಈಶ್ವರ ಖಂಡ್ರೆ ಶಾಸಕರಾದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಟಾಳಕರ ಜೊತೆ ಪ್ರತ್ಯೇಕ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ ಎನ್ನುವ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಎಳೆದರು.
ಇನ್ನು ಕಳೆದ ಮೂರ್‍ನಾಲ್ಕು ದಿನಗಳಿಂದ ವಿವಾದಾಸ್ಪದ ಹೇಳಿಕೆ ನೀಡುತ್ತಲೇ ಬಂದಿದ್ದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಚುನಾವಣೆಯಿಂದ ದೂರ ಉಳಿದು ದೇವರ ದರ್ಶನಕ್ಕೆ ತೆರಳಿದ್ದರು. ಶ್ರಾವಣ ಶುಕ್ರವಾರದ ಹಿನ್ನೆಲೆಯಲ್ಲಿ ಕೊಲ್ಲಾಪುರಕ್ಕೆ ತೆರಳಿದ ಸಚಿವರು, ಮಹಾಲಕ್ಷ್ಮೀಗೆ ವಿಶೇಷ ಪೂಜೆ ಸಲ್ಲಿಸಿದರು. ಚುನಾವಣೆ ಹಿನ್ನೆಲೆಯಲ್ಲಿ ಬ್ಯಾಂಕ್ ಆವರಣದಲ್ಲಿ ಬೆಳಗ್ಗೆಯಿಂದಲೇ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ನಗರ ಪೊಲೀಸ್ ಆಯುಕ್ತ ಡಿ.ಸಿ.ರಾಜಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.