ರಮೇಶ್ ಜಾರಕಿಹೊಳಿಯನ್ನು ಮಂತ್ರಿ ಮಾಡಿದ್ದು ನಾನೇ : ಲಕ್ಷ್ಮೀ ಹೆಬ್ಬಾಳಕರ್
Team Udayavani, Feb 24, 2021, 12:38 PM IST
ಬೆಳಗಾವಿ: ರಮೇಶ್ ಜಾರಕಿಹೊಳಿ ಅವರನ್ನು ಮಂತ್ರಿ ಮಾಡಿದ್ದು ನಾನೇ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವೇ ಮಂತ್ರಿ ಮಾಡಿದ್ದು, ನಾವೇ ಹೈಕಮಾಂಡ್ಗೆ ಶಿಫಾರಸು ಮಾಡಿದ್ದು ಎಂದರು.
ಗ್ರಾಮೀಣದಲ್ಲಿ ಹೆಬ್ಬಾಳಕರ್ ರನ್ನು ಗೆಲ್ಲಿಸಿದ್ದು ನಾನೇ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಅವರು ತಿರುಗೇಟು ನೀಡಿದರು.
ಇದನ್ನೂ ಓದಿ:ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ
ಮಂತ್ರಿ ಮಾಡಿದ್ದೇನೆ ಎಂಬ ನನ್ನ ಹೇಳಿಕೆ, ನನ್ನನ್ನು ಗೆಲ್ಲಿಸಿದ್ದಾರೆ ಎಂಬ ಅವರ ಹೇಳಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡಬಾರದು. ನಾನು ಅಹಂ ಬ್ರಹ್ಮಾಸ್ಮಿ, ನಾನು ನನ್ನಿಂದ ಅಂದವರೆಲ್ಲ ಹೆಸರು ಇಲ್ಲದಂತೆ ಹೋಗಿದ್ದಾರೆ. ನಾನು ನಗಣ್ಯ, ಲಕ್ಷ್ಮೀ ಹೆಬ್ಬಾಳಕರ್ ಗೆ ಮತದಾರರು ಗೆಲ್ಲಿಸಿದ್ದಾರೆ. ಯಾಕೆ ಇಷ್ಟೊಂದು ಟಾರ್ಗೆಟ್ ಮಾಡುತ್ತಿದ್ದಾರೆ ಅಂತ ಅವರನ್ನೇ ಕೇಳಿ ಎಂದರು.
ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಉದ್ಘಾಟನೆ ಕಾರ್ಯಕ್ರಮ ನಮ್ಮ ಅಧ್ಯಕ್ಷತೆಯಲ್ಲಿ ಆಗಬೇಕು. ಯಾರನ್ನೋ ಎಲ್ಲೆಲ್ಲೋ ಕರೆದುಕೊಂಡು ಹೋಗುತ್ತಾರೆ. ಅದಕ್ಕೆಲ್ಲ ನಾನು ಬಾಯಿ ಬಡಿದುಕೊಳ್ಳಲು ಆಗುತ್ತಾ? ಗೋಕಾಕ ಮತದಾರರು ಕೈಜೋಡಿಸುವುದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ. ನೀವು ಎಷ್ಟು ವಿರೋಧ ಮಾಡುತ್ತೀರೋ ನಾನು ಅಷ್ಟು ಗಟ್ಟಿಯಾಗುತ್ತೇನೆ. ಯಾರು ಏನೇ ಒದರಾಡಿದರೂ ದೇವಸ್ಥಾನ ಹಾಳಾಗುವುದಿಲ್ಲ ಎಂದು ಜಾರಕಿಹೊಳಿಗೆ ಹೆಬ್ಬಾಳಕರ್ ಟಾಂಗ್ ನೀಡಿದರು.
ಇದನ್ನೂ ಓದಿ: ಕಾಂಗ್ರೆಸ್ ಎಲ್ಲೆಲ್ಲಿ ಅಧಿಕಾರ ಕಳೆದುಕೊಂಡಿದೆ? ಕೈ ಜಾರಿದ ಸಿಂಹಾಸನ ಒಂದು ಅವಲೋಕನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.