ನಿಗಮ-ಮಂಡಳಿಗಳಿಗೆ ಅಧ್ಯಕ್ಷರಿಗೆ ಕ್ಯಾಬಿನೆಟ್ ದರ್ಜೆ ನೀಡಿದರೆ ಕಾನೂನು ಸಮರ; ಭೀಮಪ್ಪ ಗಡಾದ
Team Udayavani, Nov 28, 2023, 1:03 PM IST
ಬೆಳಗಾವಿ: ಸಚಿವ ಸ್ಥಾನಗಳಿಂದ ವಂಚಿತರಾಗಿ ಅತೃಪ್ತರಾಗಿರುವ ಶಾಸಕರನ್ನು ಸಮಾಧಾನಪಡಿಸಲು ನಿಗಮ-ಮಂಡಳಿಗಳಿಗೆ ಅಧ್ಯಕ್ಷರಾಗಿ ನೇಮಿಸಿ ಸಂಪುಟ ದರ್ಜೆ ಸ್ಥಾನಮಾನ ನೀಡುವ ಸಂಪ್ರದಾಯ ನಿಲ್ಲಿಸಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ದಾಖಲಿಸಲಾಗುವುದು ಎಂದು ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ ಎಚ್ಚರಿಕೆ ನೀಡಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಿಗಮ-ಮಂಡಳಿಗಳ ಅಧ್ಯಕ್ಷರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುವ ಕುರಿತು ಕಾನೂನಿನಲ್ಲಿ ಅವಕಾಶವಿಲ್ಲ. ಸರ್ಕಾರದ ಮಟ್ಟದಲ್ಲಿ ಯಾವುದೇ ನಿಯಮಾವಳಿಗಳಿಲ್ಲ ಎಂದರು.
ಮುಖ್ಯವಾಗಿ ಇದರ ಬಗ್ಗೆ ಮುಖ್ಯಮಂತ್ರಿ ಕಚೇರಿಯಲ್ಲೂ ಯಾವುದೇ ದಾಖಲೆ ಲಭ್ಯವಿಲ್ಲ. ಆದರೆ, ಮುಖ್ಯಮಂತ್ರಿ ಸೂಚಿಸಿದವರಿಗೆ ಸಂಪುಟ ದರ್ಜೆ ಸ್ಥಾನಮಾನ ಕೊಡುತ್ತೇವೆ ಎಂದು ಶಿಷ್ಟಾಚಾರ ಇಲಾಖೆ ಅಧಿಕಾರಿಗಳು ಮೌಖಿಕವಾಗಿ ಹೇಳುತ್ತಾರೆ. ನಿಯಮಾವಳಿಯಲ್ಲೇ ಅವಕಾಶ ಇರದಿದ್ದರೆ, ಸಂಪುಟ ದರ್ಜೆ ಸ್ಥಾನಮಾನ ಹೇಗೆ ಕೊಡುತ್ತಾರೆ’ ಎಂದು ಅವರು ಪ್ರಶ್ನಿಸಿದರು.
‘ನಿಗಮ-ಮಂಡಳಿಗಳಿಗೆ ಪ್ರತ್ಯೇಕವಾದ ಇಲಾಖೆಯಿದೆ. ಐಎಎಸ್ ಅಧಿಕಾರಿಗಳು ಅದಕ್ಕೆ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಇದಲ್ಲದೆ, ಆಯಾ ಇಲಾಖೆಗೆ ಸಚಿವರಿದ್ದಾರೆ. ಹೀಗಿರುವಾಗ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ, ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡುತ್ತಿರುವುದು ಸರಿಯಲ್ಲ’ ಎಂದರು.
‘ಶಾಸಕರ ಸಂಖ್ಯಾಬಲಕ್ಕೆ ಅನುಗುಣವಾಗಿ ಶೇ 15ರಷ್ಟು ಮಂದಿ ಮಾತ್ರ ಸಚಿವರಾಗಲು ಸಂವಿಧಾನದ ತಿದ್ದುಪಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಆದರೆ, ಅದಕ್ಕಿಂತ ಹೆಚ್ಚಿನ ಜನರಿಗೆ ಸಂಪುಟ ದರ್ಜೆ ಸ್ಥಾನಮಾನ ಕೊಡಲು ಅವಕಾಶವಿಲ್ಲ ಎಂದು ಭೀಮಪ್ಪ ಗಡಾದ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ
MUST WATCH
ಹೊಸ ಸೇರ್ಪಡೆ
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Eden Gardens; ‘ಬಿ’ ಬ್ಲಾಕ್‌ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.