ದುಶ್ಚಟ ನಿಯಂತ್ರಣದಿಂದ ಕಾನೂನು ರಕ್ಷಣೆ
•ದೇಶದ ಪ್ರಗತಿ ಕುಂಠಿತ •ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನವಾಗಲಿ
Team Udayavani, Jun 29, 2019, 12:56 PM IST
ಬೆಳಗಾವಿ: ಜಿಲ್ಲಾ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಪೊಲೀಸ್ ಅಧಿಕಾರಿಗಳಿಗೆ ಹಮ್ಮಿಕೊಳ್ಳಲಾಗಿದ್ದ ತಂಬಾಕಿನಿಂದಾಗುವ ದುಷ್ಪರಿಣಾಮ ಕುರಿತ ತರಬೇತಿ ಕಾರ್ಯಾಗಾರವನ್ನು ಡಿಸಿಪಿ ಸೀಮಾ ಲಾಟ್ಕರ್ ಉದ್ಘಾಟಿಸಿದರು
ಬೆಳಗಾವಿ: ತಂಬಾಕು ಹಾಗೂ ತಂಬಾಕು ಉತ್ಪನ್ನಗಳ ಸೇವನೆಯಿಂದಾಗಿ ಶರೀರದ ಮೇಲೆ ಅನೇಕ ದುಷ್ಪರಿಣಾಮ ಉಂಟಾಗುತ್ತಿವೆ. ಇದನ್ನು ನಿಯಂತ್ರಿಸುವುದರಿಂದ ಸಮುದಾಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ರಕ್ಷಣೆಯಾಗುತ್ತದೆ ಎಂದು ಪೊಲೀಸ್ ಉಪ ಆಯುಕ್ತ ಸೀಮಾ ಲಾಟ್ಕರ್ ಹೇಳಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ವಾರ್ತಾ ಇಲಾಖೆ, ಪೊಲೀಸ್ ಇಲಾಖೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಹಯೋಗದಲ್ಲಿ ಶುಕ್ರವಾರ ಪೊಲೀಸ್ ಅಧಿಕಾರಿಗಳಿಗೆ ತಂಬಾಕು ಹಾಗೂ ತಂಬಾಕಿನಿಂದಾಗುವ ದುಷ್ಪರಿಣಾಮ ಕುರಿತು ಜಿಲ್ಲಾ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಯುವಜನಾಂಗದಲ್ಲಿ ತಂಬಾಕು ಸೇವನೆ ಹೆಚ್ಚಾಗುತ್ತಿದ್ದು, ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಆರೋಗ್ಯ ಚಿಕಿತ್ಸೆಗೆ ಹೆಚ್ಚಿನ ವೆಚ್ಚವಾಗುತ್ತಿರುವುದರಿಂದ ದೇಶದ ಪ್ರಗತಿ ಕುಂಠಿತವಾಗಲು ಕಾರಣವಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬೆಳಗಾವಿ ಆರಕ್ಷಕ ಉಪಾಧೀಕ್ಷಕ ಜಿ.ವೈ.ಗುಡಾಜಿ ಮಾತನಾಡಿ, ದೈನಂದಿನ ಕಾನೂನು ಮತ್ತು ಸುವ್ಯವಸ್ಥೆ ಜೊತೆಗೆ ಕನಿಷ್ಟ 5 ಕೋಟ್ಪಾ ಕಾಯ್ದೆಯ ಉಲ್ಲಂಘನೆಯ ಪ್ರಕರಣಗಳನ್ನು ದಾಖಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸಲಹೆ ಮಾಡಿದರು.
ತಂಬಾಕು ಸೇವನೆಯಿಂದ ಸಮುದಾಯದಲ್ಲಿ ಕ್ಯಾನ್ಸರ್, ರಕ್ತದೊತ್ತಡದಿಂದ ಹೃದಯದ ಕಾಯಿಲೆ, ಪಾರ್ಶ್ವವಾಯು ಮುಂತಾದ ಮಾರಕ ರೋಗಗಳು ಹೆಚ್ಚಾಗುತ್ತಿದೆ. ಆದ್ದರಿಂದ ಜನರಲ್ಲಿ ಈ ಕುರಿತು ಅರಿವು ಮೂಡಿಸುವುದರ ಜೊತೆಗೆ ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಅವಶ್ಯಕತೆಯಿದೆ ಎಂದು ಹೇಳಿದರು.
ಆರ್.ಎಲ್.ಲಾ ಕಾಲೇಜನ ನಿವೃತ್ತ ಪ್ರಾಂಶುಪಾಲ ಪ್ರೊ| ಡಿ.ವೈ. ಕುಲಕರ್ಣಿ ಮಾತನಾಡಿ, ಕೋಟ್ಪಾ ಕಾಯ್ದೆ-2003 ರನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ, ಕಾನೂನು ಉಲ್ಲಂಘಿಸಿದ ವ್ಯಕ್ತಿಗೆ 200 ರೂ. ದಂಡ, ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು ನಿಷೇಧ, ತಂಬಾಕು ಉತ್ಪನ್ನಗಳನ್ನು ಅಪ್ರಾಪ್ತ ವಯಸ್ಕರಿಗೆ ಮಾರುವುದು ಶಿಕ್ಷಾರ್ಹ ಅಪರಾಧವಾಗಿದೆ. ಇದರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅಗತ್ಯ ಎಂದರು.
ಜೆ.ಎನ್. ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ| ಯೋಗೇಶಕುಮಾರ, ಜಿಲ್ಲಾ ಅಂಕಿತ ಅಧಿಕಾರಿ ಡಾ| ಎಂ.ಎಸ್. ಪಲ್ಲೇದ, ಬಿಮ್ಸ್ ಸಂಸ್ಥೆಯ ನಿರ್ದೇಶಕ ಡಾ| ಎಸ್.ಟಿ. ಕಳಸದ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ| ಬಿ.ಎನ್ ತುಕ್ಕಾರ ಉಪಸ್ಥಿತರಿದ್ದರು. ಡಾ| ಶ್ವೇತಾ ಪಾಟೀಲ ಸ್ವಾಗತಿಸಿದರು. ಕವಿತಾ ರಾಜನ್ನವರ ವಂದಿಸಿದರು. ಎಂ.ಬಿ. ಸಂಗೊಳ್ಳಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.